Electricity connection: ಒಸಿ ಇಲ್ಲದಿದ್ದರೂ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ: ಸಚಿವ ಸಂಪುಟ ಇಂಗಿತ
CM Siddaramaiah: ಈಗಾಗಲೇ ನಿರ್ಮಾಣವಾಗಿರುವ ಕಟ್ಟಡಗಳಿಗೆ ಒಸಿ ಇಲ್ಲದಿದ್ದರೂ ವಿದ್ಯುತ್ ಸಂಪರ್ಕ ನೀಡಲು ಒಂದು ಬಾರಿಗೆ ಅನ್ವಯಿಸುವಂತೆ ನಿಯಮಗಳನ್ನು ಸಡಲಿಸುವ ಕುರಿತು ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ್ದು, ಯಾವುದೇ ನಿರ್ಧಾರ ಮಾಡದೆ ವಿಷಯವನ್ನು ಮುಂದಿನ ಸಂಪುಟಕ್ಕೆ ಮುಂದೂಡಲಾಗಿದೆ.

-

ಬೆಂಗಳೂರು : ರಾಜ್ಯದಲ್ಲಿ ನಿರ್ಮಾಣವಾದ ಕಟ್ಟಡಗಳಿಗೆ ಒಸಿ (OC) ಇಲ್ಲದಿದ್ದರೂ ವಿದ್ಯುತ್ ಸಂಪರ್ಕ (Electricity connection) ನೀಡಲು ಒಂದು ಬಾರಿಗೆ ಅನ್ವಯಿಸುವಂತೆ ನಿಯಮಗಳನ್ನು ಸಡಿಲಿಕೆ ಮಾಡುವ ಬಗ್ಗೆ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ (Cabinet meeting) ಚರ್ಚೆ ನಡೆಸಲಾಗಿದೆ. ಬೆಂಗಳೂರಿನಲ್ಲಿ ಸಾವಿರಾರು ಕಟ್ಟಡ ನಿವಾಸಿಗಳು ಒಸಿ ಅಲಭ್ಯವಾದ ಕಾರಣ ವಿದ್ಯುತ್ ಸಂಪರ್ಕವಿಲ್ಲದೆ ಒದ್ದಾಡುತ್ತಿದ್ದಾರೆ.
ಅಸ್ತಿತ್ವದಲ್ಲಿರುವ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಕೋರಿ ಅರ್ಜಿ ಸಲ್ಲಿಸಿರುವವರಿಗೆ ನಿಯಮಗಳನ್ನು ಸಡಿಲಿಸಿ, ಒಂದು ಬಾರಿಯಂತೆ, (One Time Relaxation) ಅಸ್ತಿತ್ವದಲ್ಲಿರುವ ನಿಯಮಗಳಂತೆ ಗುರುತಿನ 23563 ಮತ್ತು ಮಾಲೀಕತ್ವದ ಪುರಾವೆಗಳನ್ನು ಪರಿಗಣಿಸಿ, (ನಿವೇಶನ ಅಥವಾ ಕಟ್ಟಡದ ವಿಸ್ತೀರ್ಣವನ್ನು ಪರಿಗಣಿಸದೆ) ವಿದ್ಯುತ್ ಸಂಪರ್ಕವನ್ನು ಕಲ್ಪಿಸುವ ಬಗ್ಗೆ ನಿರ್ಧರಿಸಲಾಗಿದೆ.
ಈಗಾಗಲೇ ನಿರ್ಮಾಣವಾಗಿರುವ ಕಟ್ಟಡಗಳಿಗೆ ಒಸಿ ಇಲ್ಲದಿದ್ದರೂ ವಿದ್ಯುತ್ ಸಂಪರ್ಕ ನೀಡಲು ಒಂದು ಬಾರಿಗೆ ಅನ್ವಯಿಸುವಂತೆ ನಿಯಮಗಳನ್ನು ಸಡಲಿಸುವ ಕುರಿತು ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ್ದು, ಯಾವುದೇ ನಿರ್ಧಾರ ಮಾಡದೆ ವಿಷಯವನ್ನು ಮುಂದಿನ ಸಂಪುಟಕ್ಕೆ ಮುಂದೂಡಲಾಗಿದೆ.
ಕ್ರಿಶ್ಚಿಯನ್ ಜಾತಿಗಳ ಬಗ್ಗೆ ಇಂದು ಸಂಪುಟ ಸಭೆ ಚರ್ಚೆ
ಬೆಂಗಳೂರು : ಸಿಎಂ ಸಿದ್ದರಾಮಯ್ಯ (CM Siddaramaiah) ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ (Cabinet meeting) ಸಭೆಯಲ್ಲಿ ಜಾತಿ ಗಣತಿ (Caste census) ವಿಚಾರವಾಗಿ ಚರ್ಚೆ ನಡೆದಿದ್ದು, ಹೊಸದಾಗಿ ಸೃಷ್ಟಿಸಲಾದ 331 ಜಾತಿಗಳ ಸೇರ್ಪಡೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ಈ ಜಾತಿಗಳನ್ನು ಕೈಬಿಡಲು ಸಿಎಂ ಮುಂದಾಗಿದ್ದು, ಈ ಕುರಿತು ಇನ್ನಷ್ಟು ಚರ್ಚೆ ನಡೆಸಲು ಸಿಎಂ ಸಿದ್ದರಾಮಯ್ಯ ಇಂದು ಬೆಳಗ್ಗೆ 10 ಗಂಟೆಗೆ ಸಂಪುಟ ಸಹೋದ್ಯೋಗಿಗಳ ಸಭೆಗೆ ಕರೆದಿದ್ದಾರೆ.
ನಿನ್ನೆ ನಡೆದ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಂ.ಬಿ. ಪಾಟೀಲ್ ಸೇರಿದಂತೆ ಹಲವು ಸಚಿವರು ಹೊಸ ಜಾತಿಗಳ ಸೇರ್ಪಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗಾಗಿ ಹಿಂದುಳಿದ ವರ್ಗಗಳ ಆಯೋಗದಿಂದ ಸಿದ್ಧಪಡಿಸಲಾದ ಜಾತಿ ಪಟ್ಟಿಯಲ್ಲಿ ಹಿಂದೂ ಜಾತಿಗಳ ಹೆಸರಿನ ಮುಂದೆ ಕ್ರಿಶ್ಚಿಯನ್ ಪದ ಸೇರ್ಪಡೆ, 331 ಹೊಸ ಜಾತಿಗಳನ್ನು ಉಲ್ಲೇಖಿಸಿರುವ ಬಗ್ಗೆ ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜಾತಿ ಪಟ್ಟಿಯ ಕುರಿತಾಗಿ ಗೊಂದಲ ಬಗೆಹರಿಯುವವರೆಗೆ ಸಮೀಕ್ಷೆಯನ್ನು ಮುಂದೂಡುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: Ranjith H Ashwath : ಈ ಸಮೀಕ್ಷೆಯಲ್ಲಿ ಸಿಗುವುದೇ ಜಾತಿಗಳ ನಿಖರ ಲೆಕ್ಕ ?