Euthanasia: ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರಿಗೆ ದಯಾಮರಣ ಹಕ್ಕು ನೀಡಿ ರಾಜ್ಯ ಸರ್ಕಾರ ಆದೇಶ
Euthanasia: ದಯಾಮರಣಕ್ಕೆ ಅವಕಾಶ ನೀಡುವುದನ್ನು ನಿರ್ಧರಿಸಲು ಇಬ್ಬರು ವೈದ್ಯರನ್ನೊಳಗೊಂಡ ಎರಡು ಮಂಡಳಿಗಳ ಸ್ಥಾಪನೆ ಮಾಡುವ ಬಗ್ಗೆಯೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ರೋಗಿಗಳಿಗೆ ಘನತೆಯಿಂದ ಸಾಯುವ ಹಕ್ಕು (Right to die with dignity) ನೀಡಿ ಕರ್ನಾಟಕ ಆರೋಗ್ಯ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ. ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದು, ಚೇತರಿಕೆಯೇ ಕಾಣದೆ ಜೀವನಪೂರ್ತಿ ಸಂಕಷ್ಟ ಅನುಭವಿಸುವ ಸ್ಥಿತಿಯಲ್ಲಿರುವವರಿಗೆ ಈ ಅವಕಾಶ (Euthanasia) ಕಲ್ಪಿಸಲಾಗಿದೆ.
ದಯಾಮರಣಕ್ಕೆ ಅವಕಾಶ ನೀಡುವುದನ್ನು ನಿರ್ಧರಿಸಲು ಇಬ್ಬರು ವೈದ್ಯರನ್ನೊಳಗೊಂಡ ಎರಡು ಮಂಡಳಿಗಳ ಸ್ಥಾಪನೆ ಮಾಡುವ ಬಗ್ಗೆಯೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಸುಪ್ರೀಂ ಕೋರ್ಟ್ನ ನಿರ್ದೇಶನದ ಅನ್ವಯ ಆರೋಗ್ಯ ಇಲಾಖೆಯು ಆದೇಶ ಹೊರಡಿಸಿದೆ.
ಇದೀಗ ಮಾರಕ ರೋಗದಿಂದ ಬಳಲುತ್ತಿರುವವರಿಗೆ ಸಾಯುವ ಹಕ್ಕನ್ನು ನೀಡುವ ಮೂಲಕ ಕರ್ನಾಟಕ ಆರೋಗ್ಯ ಇಲಾಖೆ ಸುಪ್ರೀಂ ಕೋರ್ಟ್ನ ನಿರ್ದೇಶನ ಜಾರಿ ಮಾಡಿದಂತಾಗಿದೆ.
ಈ ಸುದ್ದಿಯನ್ನೂ ಓದಿ | Union Budget 2025: ಜವಾಹರಲಾಲ್ ನೆಹರೂ, ಮನಮೋಹನ್ ಸಿಂಗ್...: ಕೇಂದ್ರ ಬಜೆಟ್ ಮಂಡಿಸಿದ ಪ್ರಧಾನಿಗಳಿವರು
My Karnataka Health Department, @DHFWKA, passes a historic order to implement the Supreme Court’s directive for a patients Right to Die with dignity.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) January 31, 2025
This will immensely benefit those who are terminally ill with no hope of
recovery, or are in a persistent vegetative state, and… pic.twitter.com/UxN2zMdN1c
ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಆದೇಶ ಪ್ರತಿ ಹಂಚಿಕೊಂಡಿದ್ದು, ರೋಗಿಯು ಘನತೆಯಿಂದ ಸಾಯುವ ಹಕ್ಕಿಗಾಗಿ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನವನ್ನು ಜಾರಿಗೆ ತರಲು ರಾಜ್ಯ ಆರೋಗ್ಯ ಇಲಾಖೆ ನಿರ್ಧರಿಸಿದೆ. ದಯಾಮರಣಕ್ಕೆ ಅವಕಾಶ ನೀಡುವುದನ್ನು ನಿರ್ಧರಿಸಲು ಇಬ್ಬರು ವೈದ್ಯರನ್ನೊಳಗೊಂಡ ಎರಡು ಮಂಡಳಿಗಳ ಸ್ಥಾಪನೆ ಮಾಡುವ ಬಗ್ಗೆಯೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಈ ಮೂಲಕ ಮಾರಕ ರೋಗದಿಂದ ಬಳಲುತ್ತಿರುವವರಿಗೆ ಘನತೆಯಿಂದ ಸಾಯುವ ಹಕ್ಕನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಮರಣ ಇಚ್ಛೆಯ ಉಯಿಲು ಅಥವಾ ಲಿವಿಂಗ್ ವಿಲ್ ಸಹ ಸರ್ಕಾರ ಹೊರತಂದಿದೆ. ಇದರಲ್ಲಿ ರೋಗಿಯು ಭವಿಷ್ಯದಲ್ಲಿ ತಮ್ಮ ವೈದ್ಯಕೀಯ ಚಿಕಿತ್ಸೆಯ ಬಗ್ಗೆ ತಮ್ಮ ಇಚ್ಛೆಯನ್ನು ದಾಖಲಿಸಬಹುದು. ಚಿಕಿತ್ಸೆಯ ಸಂದರ್ಭದಲ್ಲಿ ಚೇತರಿಕೆ ಸಾಧ್ಯವಿಲ್ಲದ ಸ್ಥಿತಿಗೆ ತಲುಪಿದರೆ ಆ ಸ್ಥಿತಿಯಲ್ಲಿ ಬದುಕಲು ಇಷ್ಟ ಇಲ್ಲದವರು ತಾವು ಚಿಕಿತ್ಸೆಗೆ ಒಳಪಡುವ ಮೊದಲೇ ಈ ರೀತಿಯ ಉಯಿಲು ಬರೆಯಬಹುದು. ಇಂತಹ ಉಯಿಲು ಇದ್ದರೆ ಅದನ್ನು ಜಾರಿಮಾಡುವುದು ವೈದ್ಯರು ಹಾಗೂ ಬಂಧುಗಳ ಕರ್ತವ್ಯವಾಗುತ್ತದೆ. ರೋಗಿಯ ಕೃತಕ ಉಸಿರಾಟ ಅಥವಾ ಜೀವರಕ್ಷಕ ವೈದ್ಯಕೀಯ ಚಿಕಿತ್ಸೆಗೆ ತಡೆ ನೀಡಲು ಇದರಿಂದ ವೈದ್ಯರಿಗೆ ಅವಕಾಶ ಇರುತ್ತದೆ.