ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ನಾನು ಹೇಳಿದ್ದೆಲ್ಲ ಸುಳ್ಳು: ಸ್ಟಿಂಗ್ ವಿಡಿಯೋದಲ್ಲಿದ್ದ ಮುಸುಕಿನ ಮಹಿಳೆ ಉಲ್ಟಾ ಹೇಳಿಕೆ

ಸದ್ಯ ಮುಸುಕುಧಾರಿ ಮಹಿಳೆಯ ಹೇಳಿಕೆ ದಾಖಲಿಸಿಕೊಂಡಿರುವ ಮಹಿಳೆ ವಿರುದ್ಧ ಒಂದೆರಡು ವಾರದಲ್ಲೇ ಚಾರ್ಜ್‌ಶೀಟ್ ಸಲ್ಲಿಸುವ ಸಾಧ್ಯತೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ ವಿಡಿಯೊದಲ್ಲಿರುವ ಮಹಿಳೆ ಹೇಳಿಕೆಯನ್ನು ಸಿಸಿಬಿ ದಾಖಲಿಸಿ ಕೊಂಡಿದ್ದು, ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕ್ಲೀನ್‌ಚಿಟ್ ಸಿಗುವ ಸಾಧ್ಯತೆ ದಟ್ಟವಾಗಿದೆ.

ಸ್ಟಿಂಗ್ ವಿಡಿಯೋದಲ್ಲಿದ್ದ ಮುಸುಕಿನ ಮಹಿಳೆ ಉಲ್ಟಾ ಹೇಳಿಕೆ

-

Profile
Ashok Nayak Oct 26, 2026 8:44 AM

ಬೆಂಗಳೂರು: ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣ ಮಹತ್ವದ ಘಟ್ಟಕ್ಕೆ ತಲುಪಿದೆ. ಸ್ಟಿಂಗ್ ಆಪರೇಷನ್‌ನಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಕೇರಳ ಮೂಲದ ಮಹಿಳೆ ಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಮುಸುಕುಧಾರಿ ಮಹಿಳೆ ಸಿದ್ದರಾಮಯ್ಯಗೆ ಕ್ಲೀನ್‌ಚಿಟ್ ಕೊಟ್ಟಿದ್ದಾಳೆ. ಅಲ್ಲಿಗೆ ಇಡೀ ಪ್ರಕರಣ ಪೂರ್ಣವಾಗಿ ಬೇರೆ ತಿರುವನ್ನು ಪಡೆದಿದೆ. ಸಂಚುಕೋರರ ಒತ್ತಡಕ್ಕೆ ನಾನು ಸುಳ್ಳು ಹೇಳಿದ್ದೆ. ಉದ್ದೇಶಪೂರ್ವಕವಾಗಿಯೇ ನನ್ನಿಂದ ಸುಳ್ಳು ಹೇಳಿಸಿದ್ದರು. ನಾನು ಸಿದ್ದರಾಮಯ್ಯರನ್ನು ನೋಡೇ ಇಲ್ಲ. ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಎನ್ನುವುದೇ ಷಡ್ಯಂತ್ರ. ಇದು ಕಳಂಕ ತರುವ ಪ್ರಯತ್ನ ಎಂದು ಮಹಿಳೆ ಹೇಳಿದ್ದಾಳೆ.

ಸದ್ಯ ಮುಸುಕುಧಾರಿ ಮಹಿಳೆಯ ಹೇಳಿಕೆ ದಾಖಲಿಸಿಕೊಂಡಿರುವ ಮಹಿಳೆ ವಿರುದ್ಧ ಒಂದೆರಡು ವಾರದಲ್ಲೇ ಚಾರ್ಜ್‌ಶೀಟ್ ಸಲ್ಲಿಸುವ ಸಾಧ್ಯತೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ ವಿಡಿಯೊದಲ್ಲಿರುವ ಮಹಿಳೆ ಹೇಳಿಕೆಯನ್ನು ಸಿಸಿಬಿ ದಾಖಲಿಸಿಕೊಂಡಿದ್ದು, ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕ್ಲೀನ್‌ಚಿಟ್ ಸಿಗುವ ಸಾಧ್ಯತೆ ದಟ್ಟವಾಗಿದೆ.

ಸಿದ್ದರಾಮಯ್ಯ ಯಾವುದೇ ತೊಂದರೆ ಕೊಟ್ಟಿಲ್ಲ. ನನಗೆ ಹೇಳಿಕೊಟ್ಟ ಹಾಗೆ ನಾನು ಹೇಳಿದ್ದೆ ಎಂದು ಮಹಿಳೆ ವಿಚಾರಣೆ ವೇಳೆ ತಿಳಿಸಿದ್ದು, ತಾನು ಸಿದ್ದರಾಮಯ್ಯರನ್ನು ಭೇಟಿಯಾಗಿಲ್ಲ ಎಂದಿದ್ದಾಳಂತೆ. ಹೀಗಾಗಿ ರೆಕಾರ್ಡ್ ಮಾಡುವವರ ಅಣತಿಯಂತೆ ಎಲ್ಲವೂ ನಡೆದಿರುವ ಅನುಮಾನ ವ್ಯಕ್ತವಾಗಿದ್ದು, ಉದ್ದೇಶ ಪೂರ್ವಕವಾಗಿ ಹೇಳಿಕೆ ಪಡೆದು ವಿಡಿಯೊ ಮಾಡಿದ ಮಾಹಿತಿ ಲಭ್ಯವಾಗಿದೆ. ಸ್ಟಿಂಗ್ ವಿವಾದದ ಮಧ್ಯೆ ರಾಹುಲ್ ಭೇಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ನವೆಂಬರ್ 2ರಂದು ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿದ್ದಾರೆ. ಸ್ಟಿಂಗ್ ಆಪರೇಷನ್, ರಾಜ್ಯ ರಾಜಕೀಯದ ಬಗ್ಗೆ ಚರ್ಚೆ ನಡೆಯಲಿದೆ.

ಇದನ್ನೂ ಓದಿ: Former CM Siddaramaiah: ಇಂದಿನ ಚುನಾವಣಾ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಬೇರೆಯವರ ಪಾತ್ರ ಏನು?: ರಾಜ್ಯ ರಾಜಕಾರಣದಲ್ಲಿ ಭಾರಿ ಕೋಲಾ ಹಲ ಸೃಷ್ಟಿಸುತ್ತಿದ್ದಂತೆ, ಕಾಂಗ್ರೆಸ್ ವರ್ಚಸ್ಸಿಗೆ ಧಕ್ಕೆ ತಂದಿರುವ ಆರೋಪವನ್ನು ಕೆಪಿಸಿಸಿ ಗಂಭೀರವಾಗಿ ಪರಿಗಣಿಸಿ, ಕೃಪಾ ಆಳ್ವ ಅವರಿಗೆ ಶೋಕಾಸ್ (ಕಾರಣ ಕೇಳಿ) ನೋಟಿಸ್ ಜಾರಿಗೊಳಿ ಸಿದೆ. ಸಿಸಿಬಿ ಪೊಲೀಸರು ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದರು. ಈ ಬೆನ್ನ ಕೃಪಾ ಆಳ್ವ ಅವರು ಬೆಂಗಳೂರಿನ ಸಿಸಿಬಿ ಪೊಲೀಸರ ಮುಂದೆ ಶರಣಾಗಿದ್ದಾರೆ.

ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಬೇರೆಯವರ ಪಾತ್ರ ಏನು?

ಯಾವ ಉದ್ದೇಶಕ್ಕಾಗಿ ಈ ರೀತಿ ಮಾಡಲಾಗಿತ್ತು ಎಂಬ ಬಗ್ಗೆ ಸೈಬರ್ ಅಪರಾಧ ತನಿಖಾ ತಂಡದ ಪೊಲೀಸರು ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿರುವ ಚಂದನ್, ಮೋಹನ್ ಗೌಡಗಾಗಿ ಪೊಲೀಸರ ಶೋಧ ಮುಂದುವರಿದಿದ್ದು, ಪ್ರಕರಣದಲ್ಲಿ ಎಸ್.ಶಿವಸ್ವಾಮಿ ಎಂಬ ವ್ಯಕ್ತಿಯ ಪಾತ್ರ ಕೂಡ ಬೆಳಕಿಗೆ ಬಂದಿರುವ ಮಾಹಿತಿ ಸಿಕ್ಕಿದೆ.

ದೇವೇಗೌಡರ ಕುಟುಂಬ ಮುಗಿಸಲು ಸಿಎಂ 600 ಕೋಟಿ ಡೀಲ್: ಎಚ್‌ಡಿಕೆ ಮಾಜಿ ಪ್ರಧಾನಿ ಗಳಾದ ಎಚ್.ಡಿ.ದೇವೇಗೌಡರ ಕುಟುಂಬವನ್ನು ಮುಗಿಸಲು ಹಾಲಿ ಮುಖ್ಯಮಂತ್ರಿ 600 ಕೋಟಿ ಯಷ್ಟು ಬೃಹತ್ ಮೊತ್ತದ ಡೀಲ್ ಕೊಟ್ಟಿರುವ ವಿಷಯದಲ್ಲಿ ಯಾವುದೇ ಸಂಶಯ ವಿಲ್ಲ ಎಂದು ಕೇಂದ್ರ ಸಚಿವ ಕುಮಾರ ಸ್ವಾಮಿ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕುಟುಂಬವನ್ನು ಮುಗಿಸಲು 600 ಕೋಟಿ ಮೊತ್ತದ ಡೀಲ್ ಕೊಟ್ಟಿರುವ ಚರ್ಚೆ ನಡೆಯು ತ್ತಿದೆ. ಅದು ದೇವೇಗೌಡರ ಕುಟುಂಬವೇ ಆಗಿದೆ. ನಮ್ಮ ಕುಟುಂಬವನ್ನು ಮುಗಿಸಲು ಈ ಮುಖ್ಯಮಂತ್ರಿ ನಡೆಸಿರುವ ಕುತಂತ್ರ ಒಂದೆರಡಲ್ಲ. ಅನೇಕ ಕುತಂತ್ರಗಳನ್ನು ಅವರು ಮಾಡಿದ್ದು ಅದರಲ್ಲಿ 600 ಕೋಟಿ ಸುಪಾರಿ ಡೀಲ್ ಕೂಡ ಒಂದು ಎಂದು ಎಚ್‌ಡಿಕೆ ಗುಡುಗಿದ್ದಾರೆ.

ಸಿಸಿಬಿ ಪೊಲೀಸರೆದುರು ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಹಾಜರ್, ವಿಚಾರಣೆ?

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಡೆದಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣ ರಾಜ್ಯ ರಾಜ ಕೀಯದಲ್ಲಿ ಭಾರೀ ಸಂಚಲನ ಮೂಡಿ ಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಮಹಿಳಾ ನಾಯಕಿ ಕೃಪಾ ಆಳ್ವಾ ಅವರು ಕೇಂದ್ರ ಅಪರಾಧ ವಿಭಾಗದ ಪೊಲೀಸರ ಮುಂದೆ ಹಾಜರಾಗಿದ್ದಾರೆ. ತನ್ನ ರಾಜಕೀಯ ವರ್ಚಸ್ಸಿಗೆ ಧಕ್ಕೆ ತರಲು ಮಾಡಿದ ಸ್ಟಿಂಗ್ ಹಿಂದೆ ಕೃಪಾ ಆಳ್ವ ಇದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಆರೋಪಿ ಸಿದ್ದರು. ಪ್ರಕರಣದ ಸತ್ಯಾಸತ್ಯತೆಯನ್ನು ಹೊರ ತರಲು ಹಾಗೂ ಈ ಜಾಲದ ಹಿಂದೆ ಯಾರೆ ಇದ್ದಾರೆ ಎಂಬುದನ್ನು ತನಿಖೆ ಮಾಡಲು ಸಿಸಿಬಿ ಪೊಲೀಸರು ಕೃಪಾ ಆಳ್ವ ಅವರನ್ನು ವಶಕ್ಕೆ ಪಡೆದು ಸುದೀರ್ಘ ವಿಚಾರಣೆ ನಡೆಸುವ ಸಾಧ್ಯತೆಯಿದೆ.

ಮುಸುಕುಧಾರಿ ಮಹಿಳೆ ಹೇಳಿದ್ದೇನು?

ಸಂಚುಕೋರರ ಒತ್ತಡಕ್ಕೆ ನಾನು ಸುಳ್ಳು ಹೇಳಿದ್ದೆ. ಉದ್ದೇಶಪೂರ್ವಕವಾಗಿಯೇ ನನ್ನಿಂದ ಸುಳ್ಳು ಹೇಳಿಸಿದ್ದರು. ನಾನು ಸಿದ್ದರಾಮಯ್ಯರನ್ನು ನೋಡೇ ಇಲ್ಲ. ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಎನ್ನುವುದೇ ಷಡ್ಯಂತ್ರ. ಇದು ಸಿದ್ದರಾಮಯ್ಯನವರಿಗೆ ಕಳಂಕ ತರುವ ಪ್ರಯತ್ನ.

image

ಸ್ಟಿಂಗ್ ಪ್ರಕರಣದಿಂದ ಸರಕಾರ ಮತ್ತು ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣವೇ ಹೈಕಮಾಂ ಡ್ ಮಧ್ಯಪ್ರವೇಶಿಸಬೇಕು ಎಂದು ಹೇಳುವ ಅಗತ್ಯ ವಿಲ್ಲ. ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು ಕುಳಿತು ಚರ್ಚಿಸಬೇಕು. ಸರಕಾರ ಅಥವಾ ಪಕ್ಷಕ್ಕೆ ಮುಜುಗರವಾಗದ ರೀತಿಯಲ್ಲಿ ಸ್ಥಳೀಯವಾಗಿಯೇ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಈ ವಿಚಾರದಲ್ಲಿ ಹೈಕಮಾಂಡ್ ಅನ್ನು ಎಳೆದುತರುವುದು ಅನಗತ್ಯ. ಗೊಂದಲವನ್ನು ಇಲ್ಲೇ ಬಗೆಹರಿಸಿಕೊಳ್ಳಬಹುದು.

- ಡಾ.ಜಿ. ಪರಮೇಶ್ವರ, ಉಪಮುಖ್ಯಮಂತ್ರಿ
image

ಸಚಿವ ಯತೀಂದ್ರ ಹೇಳಿದ್ದನ್ನು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದನ್ನು ಗೃಹ ಸಚಿವರು ಕೇಳಿರಬೇಕಲ್ಲವೇ? ಕಾಂಗ್ರೆಸ್ ಪಕ್ಷದ ನಾಯಕಿ ಒಬ್ಬರು ಸ್ಟಿಂಗ್‌ನಲ್ಲಿ ಇದ್ದಾರೆ ಎಂದು ಅವರು ಹೇಳಿಲ್ಲವೇ? ಇಷ್ಟೆ ಮಾತನಾಡುವ ಪ್ರಿಯಾಂಕ್ ಖರ್ಗೆ ಅವರು ಸ್ಟಿಂಗ್ ಆಪರೇಷನ್ ವಿಡಿಯೊಗಳನ್ನು ನೋಡಿರುವುದಿಲ್ಲವೇ? ಹಾಗಾದರೆ ಅವರು ಯಾರನ್ನು, ಯಾರ ಒತ್ತಡ, ಆದೇಶದ ಮೇರೆಗೆ ರಕ್ಷಣೆ ಮಾಡುತ್ತಿದ್ದಾರೆ? ಅವರ ನಡೆಯ ಹಿಂದಿರುವುದೇನು?

-ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವ