ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮತ್ತೆ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ; ಏರ್ಪೋರ್ಟ್‌ ರೋಡ್‌ನಲ್ಲಿ ಡ್ರಾಫ್ಟಿಂಗ್‌

ಮಾಜಿ ಡಾನ್ ದಿವಂಗತ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮತ್ತೆ ಸುದ್ದಿಯಾಗಿದ್ದಾರೆ. ರಿಕ್ಕಿ ರೈ ಒಡೆತನದ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ಮತ್ತೊಮ್ಮೆ ಪುಂಡಾಟಿಕೆ ನಡೆಸಿದೆ. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (ರನ್-ವೇ) ರಸ್ತೆಯಲ್ಲಿ ಅತಿವೇಗವಾಗಿ ಕಾರು ಚಲಾಯಿಸಿದ್ದಾರೆ ಎನ್ನಲಾಗಿದೆ.

ಸಂಗ್ರಹ ಚಿತ್ರ

ಬೆಂಗಳೂರು: ಮಾಜಿ ಡಾನ್ ದಿವಂಗತ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮತ್ತೆ ಸುದ್ದಿಯಾಗಿದ್ದಾರೆ. ರಿಕ್ಕಿ ರೈ (Rikki Rai Lamborghini Case) ಒಡೆತನದ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ಮತ್ತೊಮ್ಮೆ ಪುಂಡಾಟಿಕೆ ನಡೆಸಿದೆ. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ (Airport Road) ನಿಲ್ದಾಣದ (ರನ್-ವೇ) ರಸ್ತೆಯಲ್ಲಿ ಅತಿವೇಗವಾಗಿ ಕಾರು ಚಲಾಯಿಸಿ, ಸೈಲೆನ್ಸರ್‌ನಿಂದ ಕರ್ಕಶ ಶಬ್ದದೊಂದಿಗೆ ಬೆಂಕಿ ಉಗುಳಿಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಸಂಚಾರಿ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

KA 05 NR 0009 ನೋಂದಣಿ ಸಂಖ್ಯೆಯ ಲ್ಯಾಂಬೋರ್ಗಿನಿ ಕಾರಿನ ವಿಡಿಯೋ ಇದೀಗ ಪೊಲೀಸರ ಗಮನ ಸೆಳೆದಿದೆ. ವೈರಲ್ ವಿಡಿಯೋ ಆಧರಿಸಿ ಘಟನೆ ಯಾವ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಕಾರಿನ ಸೈಲೆನ್ಸರನ್ನು ಮಾಡಿಫೈ (ಮಾರ್ಪಾಡು) ಮಾಡಲಾಗಿದ್ದು, ರಸ್ತೆಯಲ್ಲಿ ಚಲಿಸುವಾಗ ಕಿವಿಗಡಚಿಕ್ಕುವಂತಹ ಕರ್ಕಶ ಶಬ್ದ ಮೂಡಿಸಿದೆ. ಅಷ್ಟೇ ಅಲ್ಲದೆ, ವೇಗವನ್ನು ಹೆಚ್ಚಿಸಿದಾಗ ಸೈಲೆನ್ಸರ್‌ನಿಂದ ಬೆಂಕಿಯ ಜ್ವಾಲೆಗಳು ಹೊರಬರುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

ವೈರಲ್ ವಿಡಿಯೋವನ್ನು ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ಪೊಲೀಸರು ಸದ್ಯ ಪ್ರಾಥಮಿಕ ಪರಿಶೀಲನೆ ನಡೆಸುತ್ತಿದ್ದಾರೆ. ಲಭ್ಯವಿರುವ ದೃಶ್ಯಾವಳಿಗಳ ಆಧಾರದ ಮೇಲೆ ಮೊದಲಿಗೆ ಪ್ರಕರಣ (FIR) ದಾಖಲಿಸಿಕೊಳ್ಳಲು ಸಿದ್ಧತೆ ನಡೆಸಲಾಗಿದೆ. ಈ ಘಟನೆ ಯಾವಾಗ ನಡೆದಿದೆ? ಕಾರಿನ ಚಾಲನಾ ಸೀಟಿನಲ್ಲಿ ಇದ್ದದ್ದು ಯಾರು? ಸ್ವತಃ ರಿಕ್ಕಿ ರೈ ಅವರೇ ಕಾರು ಚಲಾಯಿಸುತ್ತಿದ್ದರೇ ಅಥವಾ ಬೇರೆ ಯಾರಾದರೂ ಕಾರು ಚಲಾಯಿಸುತ್ತಿದ್ದರೇ? ಎಂಬುದನ್ನು ತನಿಖೆ ನಡೆಸುತ್ತಿದ್ದಾರೆ.

ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಕೇಸ್‌; ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದ ಕಾರ್ ಡ್ರಿಫ್ಟಿಂಗ್?

ರಿಕ್ಕಿ ರೈ ಕಾರು ವಿವಾದಕ್ಕೆ ಒಳಗಾಗುತ್ತಿರುವುದು ಇದೇ ಮೊದಲಲ್ಲ. ಕಳೆದ ಮಾರ್ಚ್ 21 ರಂದು ಅನಿಲ್ ಕುಂಬ್ಳೆ ವೃತ್ತ ಹಾಗೂ ಕಬ್ಬನ್ ರಸ್ತೆಯಲ್ಲಿ ಇದೇ ಲ್ಯಾಂಬೋರ್ಗಿನಿ ಕಾರನ್ನು ಅತ್ಯಂತ ಅಪಾಯಕಾರಿ ರೀತಿಯಲ್ಲಿ ಡ್ರಾಫ್ಟಿಂಗ್‌ ಮಾಡಲಾಗಿತ್ತು. ಸಿಸಿಟಿವಿಯಲ್ಲಿ ರಿಕ್ಕಿ ರೈ ಅವರೇ ಕಾರು ಚಲಾಯಿಸುತ್ತಿರುವುದು ಸಾಬೀತಾಗಿತ್ತು. ಈ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

Vishakha Bhat Heggar

View all posts by this author