Pahalgam Terror Attack: ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
Pahalgam Terror Attack: ಶಿವಮೊಗ್ಗದ ಮಂಜುನಾಥ್ ರಾವ್ ಹಾಗೂ ಹಾವೇರಿ ಮೂಲದ ಬೆಂಗಳೂರು ನಿವಾಸಿ ಭರತ್ ಭೂಷಣ್ ಕುಟುಂಬಕ್ಕೆ ಪರಿಹಾರ ಘೋಷಿಸಲಾಗಿದೆ. ಇನ್ನು ಕಾಶ್ಮೀರಕ್ಕೆ ತೆರಳಿರುವ 40 ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.


ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ದಲ್ಲಿ ನಡೆದ ಉಗ್ರರ ದಾಳಿಯಲ್ಲಿ (Pahalgam Terror Attack) ಮೃತರಾದ ಕನ್ನಡಿಗರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 10 ಲಕ್ಷ ರೂ.ಗಳ ಪರಿಹಾರ ಘೋಷಣೆ ಮಾಡಿದ್ದಾರೆ. ಶಿವಮೊಗ್ಗದ ಮಂಜುನಾಥ್ ರಾವ್ ಹಾಗೂ ಹಾವೇರಿ ಮೂಲದ ಬೆಂಗಳೂರು ನಿವಾಸಿ ಭರತ್ ಭೂಷಣ್ ಕುಟುಂಬಕ್ಕೆ ಪರಿಹಾರ ಘೋಷಿಸಲಾಗಿದೆ.
ಇನ್ನು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ಅತ್ಯಂತ ತೀವ್ರವಾಗಿ ಖಂಡಿಸುತ್ತೇನೆ. ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ರಾವ್ ಹಾಗೂ ಭರತ್ ಭೂಷಣ್ ಎಂಬುವರು ಮೃತಪಟ್ಟಿದ್ದಾರೆ. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ, ಕಾಶ್ಮೀರಕ್ಕೆ ತೆರಳಿರುವ 40 ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿರುವ ರಾಜ್ಯದ ಇಬ್ಬರು ನಾಗರಿಕರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು.
— CM of Karnataka (@CMofKarnataka) April 23, 2025
- ಮುಖ್ಯಮಂತ್ರಿ @siddaramaiah #PahalgamTerroristAttack
ಉಗ್ರರ ದಾಳಿ ಪೂರ್ವಯೋಜಿತ ಸಂಚು. ಅಮಾಯಕರ ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಘಟನೆಯಲ್ಲಿ ಸುಮಾರು 28 ಜನ ಮೃತಪಟ್ಟಿರುವ ಭೀಕರವಾದ, ಇಷ್ಟು ದೊಡ್ಡಮಟ್ಟದ ಕೃತ್ಯ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿ ಗುಪ್ತಚರ ಮಾಹಿತಿಯ ವೈಫಲ್ಯವಿತ್ತು, ಈಗಲೂ ಅದೇ ಮಾದರಿಯ ಘಟನೆ ಮರುಕಳಿಸಿದೆ.
ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ಚಿಂತಿಸಿ ಪರಿಶೀಲಿಸಲಿದೆ. ಪಹಲ್ಗಾಮ್‌ನ ಉಗ್ರರ ದಾಳಿ ಪ್ರಕರಣದಲ್ಲಿ ಕೇಂದ್ರ ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ. ಭಯೋತ್ಪಾದಕರನ್ನು ನಿರ್ಮೂಲನೆಗೊಳಿಸುವ ಜೊತೆಗೆ ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸಮರ್ಥವಾಗಿ ನಿರ್ವಹಿಸಬೇಕು ಎಂದು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | Pahalgam Terror Attack: "ನೀನು ಯಾವತ್ತೂ ನನ್ನೊಂದಿಗೇ ಇರುತ್ತಿಯಾ...." ಪತಿ ಪಾರ್ಥೀವ ಶರೀರದ ಎದುರು ರೋಧಿಸಿದ ಹುತಾತ್ಮ ನೇವಿ ಅಧಿಕಾರಿ ಪತ್ನಿ