ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Extension of the Loan Repayment: ಸಾಧಾರಣ ಬರ: 36 ತಿಂಗಳು, ತೀವ್ರ ಬರ ತಾಲೂಕುಗಳಲ್ಲಿ 5 ವರ್ಷ ಅವಧಿ: ರೈತರ ಸಾಲ ಮರುಪಾವತಿ ಅವಧಿ ವಿಸ್ತರಣೆ

ರಾಜ್ಯದ ಬರಪೀಡಿತ ತಾಲೂಕುಗಳ ರೈತರಿಗೆ ಕೃಷಿ ಹಾಗೂ ಕೃಷಿ ಸಂಬಂಧಿತ ಸಾಲಗಳ ಮರುಪಾವತಿ ಯಲ್ಲಿ ರಾಜ್ಯಮಟ್ಟದ ಬ್ಯಾಂಕ್‌ಗಳ ಸಮಿತಿ ಪರಿಹಾರ ಕ್ರಮಗಳನ್ನು ಪ್ರಕಟಿಸಿದೆ. ರಾಜ್ಯದ 24 ಜಿಲ್ಲೆಗಳ 101 ತಾಲೂಕುಗಳನ್ನು ಬರಪೀಡಿತ ಎಂದು ಸರಕಾರ ಘೋಷಿಸಿದ್ದು, ಈ ಪೈಕಿ 89 ತಾಲೂಕುಗಳನ್ನು ತೀವ್ರ ಬರಪೀಡಿತ ಹಾಗೂ 12 ತಾಲೂಕುಗಳನ್ನು ಸಾಧಾರಣ ಬರಪೀಡಿತ ಎಂದು ವರ್ಗೀಕರಿಸಲಾಗಿದೆ.

ಬೆಂಗಳೂರು: ರಾಜ್ಯದ ಬರಪೀಡಿತ ತಾಲೂಕುಗಳ ರೈತರಿಗೆ ಕೃಷಿ ಹಾಗೂ ಕೃಷಿ ಸಂಬಂಧಿತ ಸಾಲಗಳ ಮರುಪಾವತಿಯಲ್ಲಿ ರಾಜ್ಯಮಟ್ಟದ ಬ್ಯಾಂಕ್‌ಗಳ ಸಮಿತಿ ಪರಿಹಾರ ಕ್ರಮಗಳನ್ನು ಪ್ರಕಟಿಸಿದೆ. ರಾಜ್ಯದ 24 ಜಿಲ್ಲೆಗಳ 101 ತಾಲೂಕುಗಳನ್ನು ಬರಪೀಡಿತ ಎಂದು ಸರಕಾರ ಘೋಷಿಸಿದ್ದು, ಈ ಪೈಕಿ 89 ತಾಲೂಕುಗಳನ್ನು ತೀವ್ರ ಬರಪೀಡಿತ ಹಾಗೂ 12 ತಾಲೂಕುಗಳನ್ನು ಸಾಧಾರಣ ಬರಪೀಡಿತ ಎಂದು ವರ್ಗೀಕರಿಸಲಾಗಿದೆ.

ಇದನ್ನೂ ಓದಿ: Bangalore News: ಕಾನೂನು ಬಾಹಿರವಾಗಿ ಮದರಸಾಗೆ ನೀಡಿರುವ ಐದು ಲಕ್ಷ ರೂ. ಅನುದಾನ ವಾಪಸ್ ಪಡೆಯುವಂತೆ ಎರಡನೇ ಬಾರಿಗೆ ಹೈ ಕೋರ್ಟ್ ಆದೇಶ

ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ತಕ್ಷಣದ ನೆರವು ನೀಡುವ ಉದ್ದೇಶದಿಂದ ಸಾಲ ಮರು ಪಾವತಿ ಅವಧಿ ವಿಸ್ತರಿಸಲು ನಿರ್ಧರಿಸಲಾಗಿದೆ. ಕಿಸಾನ್ ಕ್ರೆಡಿಟ್ ಕಾರ್ಡ್, ಕೃಷಿ, ಹೈನುಗಾರಿಕೆ, ರೇಷ್ಮೆ ಸೇರಿದಂತೆ ಕೃಷಿ ಸಂಬಂಧಿ ಸಾಲಗಳಿಗೆ 12 ತಿಂಗಳ ಸಮಯ ನೀಡಲಾಗುತ್ತದೆ. ಸಾಧಾರಣ ಬರಪೀಡಿತ ತಾಲೂಕುಗಳಲ್ಲಿ ಸಾಲ ಪಾವತಿ ಅವಧಿ ಒಟ್ಟು 36, ತೀವ್ರ ಬರ ತಾಲೂಕುಗಳಲ್ಲಿ 60 ತಿಂಗಳಿಗೆ ವಿಸ್ತರಿಸಲಾಗಿದೆ.