ಬೆಂಗಳೂರು: ಪಂಚ ರಾಜ್ಯಗಳ ಚುನಾವಣೆ ನಡುವೆ ಪೆಟ್ರೋಲ್, ಡೀಸೆಲ್ ಬೆಲೆಗಳು ಏರಿಕೆಯಾಗಿವೆ (Petrol diesel prices Hike) ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ಹಿನ್ನೆಲೆಯಲ್ಲಿ ಹಲವರು ಈ ಪೋಸ್ಟ್‌ಗಳನ್ನು ಹಂಚಿಕೊಂಡು ಕೇಂದ್ರ ಸರ್ಕಾರದ ವಿರುದ್ಧ ಟೀಕಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದರ ಹೆಚ್ಚಳ ವದಂತಿಗಳ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ (Fact Check) ನೀಡಿದೆ.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಸುದ್ದಿ ಕುರಿತು ಪಿಐಬಿ ʼಫ್ಯಾಕ್ಟ್‌ಚೆಕ್ʼ ಪೋಸ್ಟ್ (PIB Fact Check) ಹಂಚಿಕೊಂಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಕ್ರಮವಾಗಿ ₹10 ಮತ್ತು ₹12.50 ರಷ್ಟು ಹೆಚ್ಚಿಸಲಾಗಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಹೆಸರಿನಲ್ಲಿ ಆದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಆದೇಶವು ಪತ್ರ ನಕಲಿ. ಭಾರತ ಸರ್ಕಾರವು ಇಂತಹ ಯಾವುದೇ ಆದೇಶವನ್ನು ಹೊರಡಿಸಿಲ್ಲ. ಇಂತಹ ಸುದ್ದಿಗಳನ್ನು ಯಾವಾಗಲೂ ಅಧಿಕೃತ ಸರ್ಕಾರಿ ಮೂಲಗಳ ಮೂಲಕ ಮಾತ್ರ ಪರಿಶೀಲಿಸಿ ಎಂದು ಮಾಹಿತಿ ನೀಡಿದೆ.
Gold Price Today On 29th April 2026: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಬೆಲೆ ಏನಿದೆ ಚೆಕ್ ಮಾಡಿ
ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಆದೇಶ ಪತ್ರ ವೈರಲ್
ಪೆಟ್ರೋಲ್, ಡೀಸೆಲ್ ದರ ಏರಿಸಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಹೊರಡಿಸಿದೆ ಎಂಬ ನಕಲಿ ಆದೇಶ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೀಗಾಗಿ ಹಲವರು ಇದನ್ನು ಸತ್ಯ ಎಂದು ತಿಳಿದು ಹಂಚಿಕೊಳ್ಳುತ್ತಿದ್ದಾರೆ. ಈ ವದಂತಿಯನ್ನು ಕೇಂದ್ರ ಸರ್ಕಾರ ಅಲ್ಲಗಳೆದಿದ್ದು, ಇದು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದೆ.