Self Harming: ಕೌಟುಂಬಿಕ ಕಲಹ, ಖಿನ್ನತೆ: ಟೆಕ್ಕೀ ದಂಪತಿ ಆತ್ಮಹತ್ಯೆ
ಗಂಡ – ಹೆಂಡತಿ ಇಬ್ಬರೂ ಖಾಸಗಿ ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದರು. ಇಬ್ಬರ ನಡುವೆ ಅನೇಕ ಬಾರಿ ಕಲಹಗಳಾಗಿದೆ. ಇಬ್ಬರೂ ಮಾನಸಿಕ ಒತ್ತಡ ಮತ್ತು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಸೋಮವಾರ ಸಹ ಇಬ್ಬರ ನಡುವೆ ಜಗಳ ಆಗಿದೆ.
ಮೃತ ಭಾನು ಚಂದ್ರ ರೆಡ್ಡಿ ಹಾಗೂ ಸಾಜಿಯಾ -
ಬೆಂಗಳೂರು, ಮಾ.31: ಕೌಟುಂಬಿಕ ಕಲಹದ (Family dispute) ಹಿನ್ನೆಲೆಯಲ್ಲಿ ಟೆಕ್ಕಿ (Techie) ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಕೊತ್ತನೂರು (Kothanur) ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಭಾನು ಚಂದ್ರ ರೆಡ್ಡಿ ಹಾಗೂ ಸಾಜಿಯಾ ಆತ್ಮಹತ್ಯೆ ಮಾಡಿಕೊಂಡ ದಂಪತಿ.
ಮೊದಲಿಗೆ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗಂಡನ ಮೃತದೇಹ ಕಂಡು ಪತ್ನಿ ಸಹ ಅಪಾರ್ಟ್‌ಮೆಂಟ್‌ನ 17ನೇ ಫ್ಲೋರ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗಂಡ – ಹೆಂಡತಿ ಇಬ್ಬರೂ ಖಾಸಗಿ ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದರು. ಇಬ್ಬರ ನಡುವೆ ಅನೇಕ ಬಾರಿ ಕಲಹಗಳಾಗಿದೆ. ಇಬ್ಬರೂ ಮಾನಸಿಕ ಒತ್ತಡ ಮತ್ತು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಸೋಮವಾರ ಸಹ ಇಬ್ಬರ ನಡುವೆ ಜಗಳ ಆಗಿದೆ. ಬಳಿಕ ಪತ್ನಿ ಇಲ್ಲದಿರುವಾಗ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಜಿಯಾ ಮನೆಗೆ ಬಂದು ಗಂಡನ ಹೆಣ ನೋಡಿ ಆಕೆಯೂ ಸಹ ಅಪಾರ್ಟ್‌ಮೆಂಟ್‌ನ ಮೇಲಿನಿಂದ ಹಾರಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಬಗ್ಗೆ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ.
ಭದ್ರಾ ಕಾಲುವೆ ಸೇತುವೆಯಿಂದ ಹಾರಿ ಯುವಕ ಆತ್ಮಹತ್ಯೆ
ಚಿಕ್ಕಮಗಳೂರು: ಯುವಕನೊಬ್ಬ ಭದ್ರಾ ಬಲದಂಡೆ ನಾಲೆ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ತರೀಕೆರೆ (Tarikere) ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಆಂಧ್ರ ಪ್ರದೇಶ ಮೂಲದ ವಿನಯ್ ರೆಡ್ಡಿ (26) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕೌಟುಂಬಿಕ ಕಲಹ ಕಾರಣ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಭದ್ರಾ ಡ್ಯಾಂನಿಂದ ಚಿತ್ರದುರ್ಗಕ್ಕೆ ನೀರು ಸರಬರಾಜು ಮಾಡುವ ಭೋಪಾಲ್ ಕಂಪನಿಯಲ್ಲಿ ಮೇಲ್ವಿಚಾರಕನಾಗಿ ಅವರು ಕೆಲಸ ಮಾಡುತ್ತಿದ್ದರು. ಅಗ್ನಿಶಾಮಕ ಸಿಬ್ಬಂದಿ, ಮುಳುಗು ತಜ್ಞ ಮಲ್ಪೆ ಈಶ್ವರ್, ಯುವಕನ ಶವ ಪತ್ತೆ ಮಾಡಿದ್ದಾರೆ. ಈ ಸಂಬಂಧ ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.