ಪಿಫಾ ವಿಶ್ವ ಕಪ್ ಫೈನಲ್; ಬೆಳಗ್ಗೆ 3.30 ರವರೆಗೆ ರೆಸ್ಟೋರೆಂಟ್‌ಗಳಿಗೆ ಅನುಮತಿ ಎಂದ CM ಡಿಕೆ ಶಿವಕುಮಾರ್
FIFA World Cup Final: ಯುವಕರ ಇಚ್ಛೆ ಹಾಗೂ ಮನವಿಯಂತೆ ಇಂದು ನಡೆಯಲಿರುವ ಫಿಫಾ ವಿಶ್ವಕಪ್ ಅಂತಿಮ ಪಂದ್ಯ ವೀಕ್ಷಣೆಗೆ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ಬೆಳಗಿನ ಜಾವ 3.30 ರವರೆಗೆ ಕಾರ್ಯನಿರ್ವಹಿಸಲು ವಿಶೇಷ ಅನುಮತಿ ನೀಡಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಸಂಗ್ರಹ ಚಿತ್ರ -
ಬೆಂಗಳೂರು, ಜುಲೈ 19: ಯುವಕರ ಇಚ್ಛೆ ಹಾಗೂ ಮನವಿಯಂತೆ ಇಂದು ನಡೆಯಲಿರುವ ಫಿಫಾ ವಿಶ್ವಕಪ್ (FIFA World Cup Final) ಅಂತಿಮ ಪಂದ್ಯ ವೀಕ್ಷಣೆಗೆ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ಬೆಳಗಿನ ಜಾವ 3.30 ರವರೆಗೆ ಕಾರ್ಯನಿರ್ವಹಿಸಲು ವಿಶೇಷ ಅನುಮತಿ ನೀಡಲಾಗಿದೆ. ಅಭಿಮಾನಿಗಳು ಫುಟ್ಬಾಲ್ ಅಭಿಮಾನಿಗಳು ಶಾಂತಿಯುತವಾಗಿ ವರ್ತಿಸಬೇಕು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.
ವಿಧಾನಸೌಧದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೋಲಿಸರು ಎಲ್ಲೆಡೆ ಕ್ಯಾಮರಾಗಳನ್ನು ಅಳವಡಿಸಿದ್ದಾರೆ. ಯಾರೇ ಗೆಲ್ಲಲಿ, ಯುವಜನರು ತಾಳ್ಮೆಯನ್ನು ಕಳೆದುಕೊಳ್ಳದೆ ಪುಟ್ಬಾಲ್ ಆಟವನ್ನು ವೀಕ್ಷಿಸಬೇಕು ಎಂದು ಹೇಳಿದರು. ಇನ್ನು ಬರ ಪರಿಸ್ಥಿತಿ ಕುರಿತು ಮಾತನಾಡಿದ ಅವರು, ನಮಗೆ ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ಪೊಲೀಸರಿಗೆ ಭಾನುವಾರ ಎಂಬುದು ಇಲ್ಲ. 24 ಗಂಟೆಗಳ ಕಾಲವೂ ಕೆಲಸ ಮಾಡಬೇಕು. ಹಾಗಾಗಿ ಬರಗಾಲಕ್ಕೆ ಸಿದ್ಧತೆ ಕೈಗೊಳ್ಳುವ ಬಗ್ಗೆ ಡಿಸಿ, ಸಿಇಓಗಳೊಂದಿಗೆ ವೀಡಿಯೊ ಸಂವಾದ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಕುಡಿಯುವ ನೀರಿಗಾಗಿ ಪ್ರತಿ ತಾಲ್ಲೂಕಿಗೆ ಒಂದು ಕೋಟಿ ರೂ
ಈಗಾಗಲೇ ಪ್ರತಿ ತಾಲ್ಲೂಕಿಗೆ ಕುಡಿಯುವ ನೀರಿಗಾಗಿ ಒಂದು ಕೋಟಿ ರೂ.ಗಳ ಅನುದಾನ ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ರಾಜ್ಯದಲ್ಲಿನ ಬರ ಪರಿಸ್ಥಿತಿ ಮತ್ತು ಅದನ್ನು ನಿರ್ವಹಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಇಂದು ತುರ್ತು ಸಚಿವ ಸಂಪುಟ ಸಭೆ ಕರೆಯಲಾಗಿದೆ. ಅಣೆಕಟ್ಟುಗಳಲ್ಲಿ ನೀರನ್ನು ಸದ್ಯಕ್ಕೆ ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಕಾಯ್ದಿರಿಸಲಾಗುತ್ತಿದೆ. ಜಲಾಶಯಗಳಲ್ಲಿನ ನೀರಿನ ಸಂಗ್ರಹ ಮಟ್ಟವನ್ನು ಆಧರಿಸಿ ಬೆಳಗಳಿಗೆ ನೀರು ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಸೂಚನೆ ನೀಡಿದ್ದಾರೆ.
ಬರಗಾಲದ ಪರಿಸ್ಥಿತಿ ಮತ್ತು ಅನುಷ್ಠಾನಗೊಳಿಸಬಹುದಾದ ಯೋಜನೆಗಳು ಮತ್ತು ಕ್ರಮಗಳ ಕುರಿತು ಈಗಾಗಲೇ ಮಾಹಿತಿ ತೆಗೆದುಕೊಂಡಿದ್ದೇವೆ. ಬರಗಾಲದಲ್ಲಿ ಗುಳೆ ಹೋಗುವುದು ಹೆಚ್ಚಾಗಿದೆ. ಏನೇನು ಕೆಲಸ ತೆಗೆದುಕೊಳ್ಳಬೇಕು ನೋಡಬೇಕು, ಆದ್ರೆ ಗುಳೆ ಜಾಸ್ತಿ ಆಗ್ತಿದೆ. ಆ ನಂತರ ಕೇಂದ್ರದೊಂದಿಗೆ ಚರ್ಚೆ ನಡೆಸುತ್ತೇವೆ ಎಂದು ಮಾಧ್ಯಮದವರೊಂದಿಗೆ ಸಿಎಂ ಮಾತನಾಡಿದರು.