ಬೆಂಗಳೂರು: ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ (Prajwal Revanna Case) ಸಂಬಂಧಿಸಿ ವಿಚಾರಣೆ ಮುಗಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಜುಲೈ 30ರಂದು ಅಂತಿಮ ತೀರ್ಪು ಪ್ರಕಟಿಸಲಿದೆ. ನ್ಯಾ. ಸಂತೋಷ್ ಗಜಾನನ ಭಟ್ ಅವರು ಜುಲೈ 30 ರಂದು ತೀರ್ಪು ನೀಡಲಿದ್ದಾರೆ. ಎರಡು ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣದ ತೀರ್ಪು ಏನಾಗಲಿದೆ ಎಂಬುದರ ಬಗ್ಗೆ ತೀವ್ರ ಕುತೂಹಲ ಮೂಡಿದೆ.
ಒಂದು ವೇಳೆ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿದರೆ ಕನಿಷ್ಠ 10 ವರ್ಷ ಗರಿಷ್ಠ ಜೀವಾವಧಿ ಶಿಕ್ಷೆಯಾಗಲಿದೆ. ಮನೆಕೆಲಸದಾಕೆ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ 2023ರಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಹಾಲಿ ಶಾಸಕ ರೇವಣ್ಣ ಹಾಗೂ ಪತ್ನಿ ಭವಾನಿ ರೇವಣ್ಣ ಸೇರಿ 9 ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಸಿಐಡಿ ವಿಶೇಷ ತನಿಖಾ ತಂಡವು 2 ಸಾವಿರ ಪುಟಗಳ ದೋಷಾರೋಪ ಪಟ್ಟಿಯನ್ನ ನ್ಯಾಯಾಲಯಕ್ಕೆ ಸಲ್ಲಿಸಿತ್ತು.
ಕಳೆದ ಮೇ 2 ರಿಂದ ನ್ಯಾಯಾಲಯವು ವಿಚಾರಣೆ ಆರಂಭಿಸಿತ್ತು. ಇದುವರೆಗೂ 26 ಮಂದಿ ಸಾಕ್ಷಿದಾರರ ವಿಚಾರಣೆ ನಡೆಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 180 ದಾಖಲಾತಿಗಳನ್ನು ಸಲ್ಲಿಸಲಾಗಿದೆ. ನ್ಯಾಯಾಲಯವು ಅಂತಿಮ ತೀರ್ಪನ್ನು ಜುಲೈ 30 ರಂದು ಪ್ರಕಟಿಸಲಿದೆ ಎಂದು ಸರ್ಕಾರಿ ವಿಶೇಷ ಅಭಿಯೋಜಕ ಅಶೋಕ್ ನಾಯ್ಕ್ ಮಾಹಿತಿ ನೀಡಿದ್ದಾರೆ.
ಈ ಸುದ್ದಿಯನ್ನೂ ಓದಿ | Actor Darshan: ಥೈಲ್ಯಾಂಡ್‌ನಲ್ಲಿ ದರ್ಶನ್ ಜಾಲಿ ಪಾರ್ಟಿ, ಯಾಚ್ ರೈಡ್, ವಿಡಿಯೋ ಇಲ್ಲಿದೆ