ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಸಿಎಂ ಕಚೇರಿಯ ನಕಲಿ ಟಿಪ್ಪಣಿ ಸೃಷ್ಟಿಸಿ ಅಧಿಕಾರಿ ವರ್ಗಾವಣೆಗೆ ಸೂಚನೆ; ಎಫ್‌ಐಆರ್‌ ದಾಖಲು

CM's Fake Letterhead: ನಕಲಿ ಟಿಪ್ಪಣಿ ಬಗ್ಗೆ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಅಧಿಕಾರಿಯನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡುವಂತೆ ಸೂಚಿಸಲಾಗಿದೆ. ಇದರ ಹಿಂದಿರುವ ದುಷ್ಟರನ್ನು ಪತ್ತೆ ಮಾಡಿ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಹೆಸರಿನಲ್ಲಿ ವೈರಲ್‌ ಆಗಿದ್ದ ನಕಲಿ ಟಿಪ್ಪಣಿ.

ಬೆಂಗಳೂರು: ಆರೋಗ್ಯ ಇಲಾಖೆಯ ಅಧಿಕಾರಿಯನ್ನು ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಲು ಸೂಚಿಸಿ ಸಿಎಂ ಸಿದ್ದರಾಮಯ್ಯ ಬರೆದಿದ್ದಾರೆ ಎನ್ನಲಾದ ಪತ್ರವೊಂದು (CM's Fake Letterhead) ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಆರೋಗ್ಯ ಇಲಾಖೆ ಅಧಿಕಾರಿಯನ್ನು ಅವರಿಗೆ ಸಂಬಂಧಪಡದ ಇಲಾಖೆಗೆ ನಿಯೋಜಿಸಲು ಸೂಚನೆ ನೀಡಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸಾಕಷ್ಟು ಟೀಕೆಗಳೂ ವ್ಯಕ್ತವಾಗಿದ್ದವು. ಆದರೆ, ವೈರಲ್‌ ಆಗಿದ್ದ ಸಿಎಂ ಟಿಪ್ಪಣಿ ಪತ್ರವೇ ನಕಲಿ ಎಂದು ಇದೀಗ ತಿಳಿದುಬಂದಿದೆ. ಈ ಬಗ್ಗ ಸ್ವತಃ ಸಿಎಂ ಸಿದ್ದರಾಮಯ್ಯ (CM Siddaramaiah) ಅವರೇ ಸ್ಪಷ್ಟನೆ ನೀಡಿದ್ದಾರೆ.

ನಕಲಿ ಟಿಪ್ಪಣಿ ಬಗ್ಗೆ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ.ಕೆ.ಮೋಹನ್ ಅವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ಅಪಪ್ರಚಾರದಲ್ಲಿ ತೊಡಗಿರುವುದು ಖಂಡನೀಯ ಮತ್ತು ಅತ್ಯಂತ ಗಂಭೀರ ಸ್ವರೂಪದ ಅಪರಾಧವಾಗಿದೆ. ಈ ಬಗ್ಗೆ ನನ್ನ ಸಚಿವಾಲಯದ ಅಧಿಕಾರಿಗಳು ದೂರು ದಾಖಲಿಸಿದ್ದು, ಪೊಲೀಸ್ ಇಲಾಖೆ ಇದರ ಹಿಂದಿರುವ ದುಷ್ಟರನ್ನು ಪತ್ತೆ ಮಾಡಿ, ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಸಿದ್ದಾರೆ.

ಇಂತಹ ನಕಲಿ ಸುದ್ದಿಗಳನ್ನು ನಂಬಿ ಶೇರ್ ಮಾಡುವ ಮುನ್ನ ಜಾಲತಾಣ ಬಳಕೆದಾರರು ಎಚ್ಚರಿಕೆ ವಹಿಸಬೇಕು. ಈಗಿನ ಫೋಟೋಶಾಪ್ / ಎಐ ಯುಗದಲ್ಲಿ ವಾಟ್ಸ್‌ಆ್ಯಪ್ ಮಾಹಿತಿಗಳ ಸತ್ಯಾಸತ್ಯತೆಯನ್ನು ಪರಾಮರ್ಶಿಸದೆ ಇತರರ ಜೊತೆ ಹಂಚಿಕೊಳ್ಳುವುದು ಕೂಡ ಅಪರಾಧವೆ ಆಗಿದೆ. ಸಕಾರಾತ್ಮಕ ಟೀಕೆಗೆ ನಾವು ಮುಕ್ತರಿದ್ದೇವೆ, ಸುಳ್ಳು ಸುದ್ದಿಗಳ ಅಪಪ್ರಚಾರವನ್ನು ಸಹಿಸುವುದಿಲ್ಲ ಎಂದು ಸಿಎಂ ತಿಳಿಸಿದ್ದಾರೆ.



ಸಿಎಂ ಜಂಟಿ ಕಾರ್ಯದರ್ಶಿಯಿಂದ ದೂರು ದಾಖಲು

ಸಿಎಂ ಅವರ ನಕಲಿ ಟಿಪ್ಪಣಿ ವೈರಲ್‌ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಕೋರಿ ವಿಧಾನಸೌಧ ಪೊಲೀಸ್ ಠಾಣೆಗೆ ಸಿಎಂ ಸಿದ್ದರಾಮಯ್ಯ ಅವರ ಜಂಟಿ ಕಾರ್ಯದರ್ಶಿ ಅರುಣ್‌ ಪುರ್ಟಾಡೋ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

ಮುಖ್ಯಮಂತ್ರಿಯವರ ಹೆಸರಿನಲ್ಲಿ ಡಾ.ಕೆ. ಮೋಹನ್, ಜಿಲ್ಲಾ ಆರೋಗ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಮಂಡ್ಯ ಜಿಲ್ಲೆ ಅವರನ್ನು ಅಬಕಾರಿ ಉಪ ಆಯುಕ್ತರು, ಮೈಸೂರು ಗ್ರಾಮಾಂತರ ಜಿಲ್ಲೆ ಮೈಸೂರಿಗೆ ನಿಯೋಜಿಸುವ ಕುರಿತ ಟಿಪ್ಪಣಿಯು ನಕಲಿ ಪತ್ರವಾಗಿದೆ.

ಸ್ವಯಂ ನಿವೃತ್ತಿ ಪಡೆದು ಸ್ವಾಮೀಜಿಯಾದ ಕೆಎಎಸ್‌ ಅಧಿಕಾರಿಗೂ ಸಿಕ್ತು ಬಡ್ತಿ!; ರಾಜ್ಯ ಸರ್ಕಾರದ ಸ್ಪಷ್ಟನೆ ಏನು?

ಅಧಿಕೃತ ಸಂಖ್ಯೆ ಮತ್ತು ದಿನಾಂಕವಿಲ್ಲದ ಈ ಟಿಪ್ಪಣೆಯು ಮುಖ್ಯಮಂತ್ರಿಯವರ ಸಚಿವಾಲಯದಲ್ಲಿ ಇ-ತಂತ್ರಾಂಶ(E-Office)ದಲ್ಲಿ ನೋಂದಾಯಿಸಿರುವುದಿಲ್ಲ ಹಾಗೂ ಈ ಟಿಪ್ಪಣಿಯನ್ನು ಯಾವುದೇ ಇಲಾಖೆಗೆ ರವಾನಿಸಿರುವುದಿಲ್ಲ. ಇದರ ಆಧಾರದಲ್ಲಿ ಯಾವುದೇ ವರ್ಗಾವಣೆ/ನಿಯೋಜನೆ ಆದೇಶ ಸಹ ಹೊರಡಿಸಿರುವುದಿಲ್ಲ. ಆದಾಗ್ಯೂ ಮುಖ್ಯಮಂತ್ರಿಯವರಿಗೆ ಹಾಗೂ ಸರ್ಕಾರಕ್ಕೆ ಕೆಟ್ಟ ಹೆಸರನ್ನು ತರುವ ದುರುದ್ದೇಶದಿಂದ ಈ ತರಹದ ಕೃತ್ಯವನ್ನು ಎಸಗಿರುವುದು ಕಂಡುಬಂದಿರುವುದರಿಂದ, ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರನ್ನು ಪತ್ತೆಹಚ್ಚಿ ತುರ್ತಾಗಿ ಸದರಿಯವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಕೋರಲಾಗಿದೆ.