ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Fire Accident: ಬೆಂಗಳೂರಿನ ಮನೆಯೊಳಗೆ ಅಗ್ನಿ ದುರಂತ, ಮಹಿಳೆ ದುರ್ಮರಣ, ಮೂವರ ರಕ್ಷಣೆ

ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಮೂವರನ್ನು ರಕ್ಷಿಸಿದ್ದಾರೆ. ಸುಟ್ಟಗಾಯಗಳಿಂದ ಮಹಿಳೆ ಮೃತಪಟ್ಟಿದ್ದಾರೆ. ಉಳಿದ ಗಾಯಗೊಂಡವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಮಲ್ಲೇಶ್ವರಂ ಎಸಿಪಿ ವೇಣುಗೋಪಾಲ್ ಹಾಗೂ ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣವೇನು ಎಂಬುದನ್ನು ತಿಳಿಯಲು ತನಿಖೆ ಮುಂದುವರಿದಿದೆ.

ಬೆಂಗಳೂರಿನ ಮನೆಯೊಳಗೆ ಅಗ್ನಿ ದುರಂತ, ಮಹಿಳೆ ದುರ್ಮರಣ, ಮೂವರ ರಕ್ಷಣೆ

ಬೆಂಕಿ ಆಕಸ್ಮಿಕ -

ಹರೀಶ್‌ ಕೇರ
ಹರೀಶ್‌ ಕೇರ Mar 3, 2026 9:56 AM

ಬೆಂಗಳೂರು, ಮಾರ್ಚ್​ 3: ಬೆಂಗಳೂರಿನ (Bangalore) ಗಾಯತ್ರಿ ನಗರದಲ್ಲಿರುವ ಕಂಟ್ರ್ಯಾಕ್ಟರ್ ರಮೇಶ್ ಬಾಬು ಎಂಬವರ ನಾಲ್ಕು ಅಂತಸ್ತಿನ ಮನೆಯಲ್ಲಿ ಮೂರನೇ ಮಹಡಿಯ ಅಡುಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಸಂಭವಿಸಿದ ಅವಘಡದಲ್ಲಿ (Fire Accident) ರಮೇಶ್ ಬಾಬು ಅವರ ಪತ್ನಿ 53 ವರ್ಷದ ಸವಿತಾ ಸುಟ್ಟ ಗಾಯಗಳಿಂದ ದುರ್ಮರಣ (Death) ಹೊಂದಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ರಮೇಶ್ ಬಾಬು, ಅವರ ತಾಯಿ ಸಣ್ಣಮ್ಮ ಹಾಗೂ ಮಗನನ್ನು ರಕ್ಷಿಸಿದ್ದಾರೆ.

ಗಾಯಗೊಂಡವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಮಲ್ಲೇಶ್ವರಂ ಎಸಿಪಿ ವೇಣುಗೋಪಾಲ್ ಹಾಗೂ ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣವೇನು ಎಂಬುದನ್ನು ತಿಳಿಯಲು ತನಿಖೆ ಮುಂದುವರಿದಿದೆ.

ಪೋಕ್ಸೋ ಕೇಸ್‌ನಲ್ಲಿ ಮಲ್ಲಿಕಾರ್ಜುನ ಮುತ್ಯಾಗೆ ನೋಟಿಸ್‌

ಯಾದಗಿರಿ : ಅಪ್ರಾಪ್ತ ಬಾಲಕಿ ಜೊತೆಗೆ ಅನುಚಿತ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಮಲ್ಲಿಕಾರ್ಜುನ ಮುತ್ಯಾಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಮುತ್ಯಾ ಸಂಪರ್ಕಕ್ಕೆ ಸಿಗದಿದ್ದಕ್ಕೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಹಲ್ ರೋಜಾದ ಮಠಕ್ಕೆ ಗೋಗಿ ಠಾಣೆಯ ಪಿಎಸ್ ಐ ಶಿವರಾಜ್ ಪಾಟೀಲ್ ಅವರು ನೋಟಿಸ್ ಅಂಟಿಸಿದ್ದಾರೆ.

ನೆಲಮಂಗಲದ ವಿಪ್ರೋ ಎಂಟರ್‌ಪ್ರೈಸಸ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ; ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ

ಪ್ರಕರಣಕ್ಕೆ ಸಂಬಂಧಿಸಿದಂತೆ ಯಾದಗಿರಿ ಜಿಲ್ಲೆಯ ಗೋಗಿ ಪೊಲೀಸ್ ಠಾಣೆಯಲ್ಲಿ ಮಲ್ಲಿಕಾರ್ಜುನ್ ಮುತ್ಯಾ ವಿರುದ್ಧ 75(2) BNS ಸೆಕ್ಷನ್ ಅಡಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಶಹಾಪುರ ಸಿಡಿಪಿಒ ಮಲ್ಲಣ್ಣ ಉಮಾಪತಿ ದೂರಿನಡಿ ಎಫ್ ಐಆರ್ ದಾಖಲಾಗಿದೆ. ಅಪ್ರಾಪ್ತ ಬಾಲಕಿ ಜೊತೆಗೆ ಅನುಚಿತ ವರ್ತನೆ ತೋರಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.