ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಸಚಿವ ದಿನೇಶ್‌ ಗುಂಡೂರಾವ್‌ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಅಗ್ನಿ ದುರಂತ

Dinesh Gundu Rao: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್‌ ಯಾವುದೇ ಅನಾಹುತ ನಡೆದಿಲ್ಲ. ಬೆಂಗಳೂರಿನ ಚಿಕ್ಕಪೇಟೆಯಲ್ಲಿ ಸಂಕ್ರಾಂತಿ ಸುಗ್ಗಿ ಹಬ್ಬ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಬೆಂಕಿ ಆಕಸ್ಮಿಕ ಕಂಡುಬಂತು.

ಬೆಂಗಳೂರಿನ ಚಿಕ್ಕಪೇಟೆಯಲ್ಲಿ ನಡೆದ ಅಗ್ನಿ ದುರಂತ

ಬೆಂಗಳೂರು, ಜ. 15: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ (Dinesh Gundu Rao) ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ (Fire Accident) ಸಂಭವಿಸಿದ್ದು, ಅದೃಷ್ಟವಶಾತ್‌ ಯಾವುದೇ ಅನಾಹುತವಾಗಿಲ್ಲ. ಚಿಕ್ಕಪೇಟೆಯಲ್ಲಿ ಸಂಕ್ರಾಂತಿ ಸುಗ್ಗಿ ಹಬ್ಬ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಬೆಂಕಿ ಆಕಸ್ಮಿಕ ಕಂಡುಬಂತು. ಹಬ್ಬದ ಪ್ರಯುಕ್ತ ಸಾಂಪ್ರದಾಯಿಕವಾಗಿ ಬೆಂಕಿ ಹಾಕಲಾಗಿತ್ತು. ಜತೆಗೆ ಪಟಾಕಿ ಸಿಡಿಸಿದ ವೇಳೆ ಹಾರಿದ ಬೆಂಕಿ ಕಿಡಿ ಫ್ಲೆಕ್ಸ್‌ಗೆ ತಾಗಿ ಬೆಂಕಿ ಹೊತ್ತಿಕೊಂಡಿತು. ಕೂಡಲೇ ಸ್ಥಳೀಯ ನಿವಾಸಿಗಳು ಕೂಡಲೇ ಬೆಂಕಿ ನಂದಿಸಿದರು ಎಂದು ಮೂಲಗಳು ತಿಳಿಸಿವೆ.

ಸ್ವಾಗತಕ್ಕಾಗಿದೆ ತಾತ್ಕಾಲಿಕ ಆರ್ಚ್‌ ತಯಾರಿಸಿ ಸ್ಥಳೀಯರು ಕಟ್ಟಿದ್ದ ಬ್ಯಾನರ್‌ ಹೊತ್ತಿ ಉರಿದು ಭಸ್ಮವಾಗಿದೆ. ಚಿಕ್ಕಪೇಟೆಯ ಕಾಶಿವಿಶ್ವನಾಥ ದೇವಸ್ಥಾನಕ್ಕೆ ವಿಶೇಷ ಅಲಂಕಾರ ಮಾಡಲಾಗಿದ್ದು, ಅಲ್ಲೇ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಕ್ರಾಂತಿ ಆಚರಣೆ ಜತೆಗೆ ಕಾಶಿ ವಿಶ್ವೇಶ್ವರ ದೇವಸ್ಥಾನ ರಸ್ತೆ ಉದ್ಘಾಟನೆ ಕೂಡ ನೆರವೇರಿದೆ.

ಗ್ಯಾಸ್‌ ಸಿಲಿಂಡರ್‌ ಸ್ಫೋಟ, ಬಾಂಗ್ಲಾದೇಶಿ ವಲಸಿಗರು ನೆಲೆಸಿದ್ದ ಶೆಡ್‌ಗಳು ಬೆಂಕಿಗಾಹುತಿ

ಆಯೋಜಕರು ಹೇಳಿದ್ದೇನು?

ಇನ್ನು ಘಟನೆ ಬಗ್ಗೆ ಕಾರ್ಯಕ್ರಮದ ಆಯೋಜಕ ರಾಘವ್​ ಮಾತನಾಡಿ, ʼʼಕಾಶಿ ವಿಶ್ವನಾಥ ದೇವಸ್ಥಾನದ ರಸ್ತೆ ಉದ್ಘಾಟನೆ ಮತ್ತು ಸಂಕ್ರಾಂತಿ ಹಬ್ಬ ಹಿನ್ನೆಲೆಯಲ್ಲಿ ಅದ್ಧೂರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಜೆ 6.30ರ ಸುಮಾರಿಗೆ ಸಚಿವ ದಿನೇಶ್ ಗುಂಡೂರಾವ್ ಆಗಮಿಸಿದ್ದರು. ಅವರು ಆಗಮಿಸಿದ ವೇಳೆ ಬ್ಯಾನರ್‌ಗೆ ಬೆಂಕಿ ಹೊತ್ತಿಕೊಂಡಿತ್ತು. ಕೂಡಲೇ ಅದನ್ನು ನಂದಿಸಲಾಗಿದೆ. ಅವರು ಬಂದು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಹೋದರು. ಎಲ್ಲ ಸರಿಯಾಗಿದೆ. ಯಾವುದೇ ಅನಾಹುತವಾಗಿಲ್ಲʼʼ ಎಂದು ಹೇಳಿದ್ದಾರೆ. ಕೆಲ ಕಾಲ ಆತಂಕದಿಂದ ಕೂಡಿದ್ದ ವಾತಾವರಣ ಬಳಿಕ ಸಹಜ ‍ಸ್ಥಿತಿಗೆ ಮರಳಿತು.

ಈ ವೇಳೆ ದೇವಾಲಯ ಬಳಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು. ದೇವರ ದರ್ಶನ‌ ಪಡೆಯಲು ವೃದ್ಧರು, ಮಕ್ಕಳು, ಮಹಿಳೆಯರು ಕೂಡ ಬಂದಿದ್ದರು. ಸ್ಥಳೀಯರ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದಂತಾಗಿದೆ.