ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬೆಂಗಳೂರಿನಲ್ಲಿ ಅಗ್ನಿ ದುರಂತ; 400ಕ್ಕೂ ಅಧಿಕ ಇವಿ ದ್ವಿಚಕ್ರ ವಾಹನಗಳು ಸುಟ್ಟು ಕರಕಲು

ಕೆ.ಆರ್. ಪುರದ ಎನ್‌ಆರ್‌ಐ ಲೇಔಟ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 400ಕ್ಕೂ ಹೆಚ್ಚು ಎಲೆಕ್ಟ್ರಿಕ್ (EV) ದ್ವಿಚಕ್ರ ವಾಹನಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಎಲೆಕ್ಟ್ರಿಕ್ ಬೈಕ್‌ಗಳನ್ನು ಝೆಪ್ಟೋ, ಸ್ವಿಗ್ಗಿ ಹಾಗೂ ಝೊಮ್ಯಾಟೊ ಸಂಸ್ಥೆಗಳ ಡೆಲಿವರಿ ಸಿಬ್ಬಂದಿಗೆ ದಿನಬಾಡಿಗೆ ನೀಡಲಾಗುತ್ತಿತ್ತು

ಬೆಂಗಳೂರಿನಲ್ಲಿ 400ಕ್ಕೂ ಅಧಿಕ ಇವಿ ದ್ವಿಚಕ್ರ ವಾಹನಗಳು ಸುಟ್ಟು ಕರಕಲು

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Aug 12, 2026 8:49 AM

ಬೆಂಗಳೂರು: ಕೆ.ಆರ್. ಪುರದ ಎನ್‌ಆರ್‌ಐ ಲೇಔಟ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 400ಕ್ಕೂ ಹೆಚ್ಚು ಎಲೆಕ್ಟ್ರಿಕ್ (EV) ದ್ವಿಚಕ್ರ (Fire Accident) ವಾಹನಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಎಲೆಕ್ಟ್ರಿಕ್ ಬೈಕ್‌ಗಳನ್ನು ಝೆಪ್ಟೋ, ಸ್ವಿಗ್ಗಿ ಹಾಗೂ ಝೊಮ್ಯಾಟೊ ಸಂಸ್ಥೆಗಳ ಡೆಲಿವರಿ ಸಿಬ್ಬಂದಿಗೆ ದಿನಬಾಡಿಗೆ ನೀಡಲಾಗುತ್ತಿತ್ತು. ಸಂಜೆ ಸುಮಾರು 7 ಗಂಟೆಗೆ ವಾಹನಗಳಿದ್ದ ಆವರಣದ ಗೇಟ್ ಲಾಕ್ ಮಾಡಿದ ಕೆಲವೇ ಕ್ಷಣಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದು, ಬೆಂಕಿ ಅನಾಹುತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ. ಈ ದುರ್ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಶಾರ್ಟ್‌ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. 2 ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

ಕಳೆದ ವಾರ ಬೆಂಗಳೂರಿನ ಗ್ಯಾರೇಜ್‌ ಒಂದರಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಥಣಿಸಂದ್ರದ ಕಾರ್ ಗ್ಯಾರೇಜ್‌ನಲ್ಲಿ ಬೆಳಿಗ್ಗೆ 5.30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ಹಲವಾರು ದುಬಾರಿ ಬೆಲೆಯ ಕಾರುಗಳು ಸೇರಿದಂತೆ 25 ಕ್ಕೂ ಹೆಚ್ಚು ವಾಹನಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ವೇಗವಾಗಿ ಹರಡಿದ ಬೆಂಕಿಯು, ನಿಲ್ಲಿಸಿದ್ದ ವಾಹನಗಳನ್ನು ಆವರಿಸಿದೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಐದು ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸಿದವು. ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ; ನಾಲ್ಕು ಖಾಸಗಿ ಬಸ್‌ಗಳು ಬೆಂಕಿಗಾಹುತಿ!

'25ಕ್ಕೂ ಹೆಚ್ಚು ಕಾರುಗಳು ಬೆಂಕಿಯಲ್ಲಿ ಸಂಪೂರ್ಣವಾಗಿ ಸುಟ್ಟುಹೋಗಿವೆ. SOCO (ಅಪರಾಧ ಅಧಿಕಾರಿಗಳ ದೃಶ್ಯ) ತಂಡವು ಘಟನಾ ಸ್ಥಳವನ್ನು ವಿಶ್ಲೇಷಿಸಿ ನಿಖರವಾದ ಕಾರಣವನ್ನು ಕಂಡುಹಿಡಿಯಲಿದೆ ಮತ್ತು ವಿವರವಾದ ವರದಿ ಸಲ್ಲಿಸುತ್ತದೆ' ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.