ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Byrati Suresh: 10 ಕೋ. ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ: ಕಾಮಗಾರಿ ಶಿಲಾನ್ಯಾಸ ನೆರವೇರಿಸಿದ ಸಾರಿಗೆ ಸಚಿವ ಬೈರತಿ ಸುರೇಶ್

ಹೆಬ್ಬಾಳ ವಿಧಾನಕ್ಷೇತ್ರ(Hebbal Assembly Constituency) ವ್ಯಾಪ್ತಿಯಲ್ಲಿ ಮತ್ತೊಂದು ಸುಸಜ್ಜಿತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹೊಸ ಕಟ್ಟಡ ನಿರ್ಮಾಣವಾಗಲಿದೆ. ಕ್ಷೇತ್ರದ ಶಾಸಕರೂ ಆಗಿರುವ ಸಾರಿಗೆ ಸಚಿವ ಬೈರತಿ ಸುರೇಶ್(Byrati Suresh) ಅವರು ಹೆಬ್ಬಾಳ ಸರ್ಕಾರಿ ಪಬ್ಲಿಕ್ ಶಾಲಾ ಆವರಣದಲ್ಲಿ ನೂತನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ಹೆಬ್ಬಾಳ: 10 ಕೋ. ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ

-

Profile
Ashok Nayak Sep 1, 2026 11:21 PM

ಬೆಂಗಳೂರು: ಹೆಬ್ಬಾಳ ವಿಧಾನಕ್ಷೇತ್ರ(Hebbal Assembly Constituency) ವ್ಯಾಪ್ತಿಯಲ್ಲಿ ಮತ್ತೊಂದು ಸುಸಜ್ಜಿತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹೊಸ ಕಟ್ಟಡ ನಿರ್ಮಾಣವಾಗಲಿದೆ.

ಕ್ಷೇತ್ರದ ಶಾಸಕರೂ ಆಗಿರುವ ಸಾರಿಗೆ ಸಚಿವ ಬೈರತಿ ಸುರೇಶ್(Byrati Suresh) ಅವರು ಹೆಬ್ಬಾಳ ಸರ್ಕಾರಿ ಪಬ್ಲಿಕ್ ಶಾಲಾ ಆವರಣದಲ್ಲಿ ನೂತನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಈ ನೂತನ ಕಾಲೇಜು ಕಟ್ಟಡ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದ್ದು, ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸು ವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: Hebbal Tunnel Road: ಟೋಲ್ ಮುಕ್ತ ಹೆಬ್ಬಾಳ ಸುರಂಗ ಮಾರ್ಗಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ; ಏನಿದರ ಅನುಕೂಲ?

ಹೆಬ್ಬಾಳ ಕ್ಷೇತ್ರದಲ್ಲಿ 2018 ಕ್ಕಿಂತ ಮುನ್ನ ಕೇವಲ ಶಾಲೆ ಮಾತ್ರ ಇತ್ತು. ನಾನು ಶಾಸಕನಾದ ನಂತರ ಸರ್ಕಾರಿ ಶಾಲೆ ಮತ್ತು ಕಾಲೇಜುಗಳಿಗೆ ಸ್ವಂತ ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.

ಖಾಸಗಿಯವರಿಗೆ ಸರಿಸಮಾನ: ಸರ್ಕಾರಿ ಶಾಲಾ-ಕಾಲೇಜುಗಳಿಗೆ ಗುಣಮಟ್ಟದ ಶಿಕ್ಷಕರನ್ನು ಒದಗಿಸಲು ನಮ್ಮ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗೆ ಕಮ್ಮಿ ಇಲ್ಲ. ಅವರಿ ಗಿಂತಲೂ ಹೆಚ್ಚು ಅರ್ಹತೆ ಮತ್ತು ಬುದ್ಧಿವಂತಿಕೆಯನ್ನು ಹೊಂದಿರುವ ಮಕ್ಕಳಿದ್ದಾರೆ ಎಂದು ಶ್ಲಾಘಿಸಿದರು.

ಸರ್ಕಾರ ಒದಗಿಸುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ವ್ಯಾಸಂಗ ಮಾಡಿ ಶಿಕ್ಷಣ ನೀಡುವ ಶಿಕ್ಷಕರು ಮತ್ತು ಪೋಷಕರಿಗೆ ಒಳ್ಳೆಯ ಹೆಸರನ್ನು ತನ್ನಿ ಹಾಗೂ ಉತ್ತಮ ಜೀವನ ರೂಪಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.