ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದೆಹಲಿಯಿಂದ ಬಂದ ಬಳಿಕ ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌; ಹೈಕಮಾಂಡ್‌ ಸಭೆ ಬಗ್ಗೆ ಹೇಳಿದ್ದೇನು?

Karnataka CM Row: ರಾಜ್ಯದಲ್ಲಿ ಸಿಎಂ ಬದಲಾವಣೆ ವದಂತಿಗಳ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ನಡುವೆ ನಾಳೆ ಮಹತ್ವದ ಬ್ರೇಕ್‌ಫಾಸ್ಟ್ ಮೀಟಿಂಗ್‌ ನಿಗದಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ವಿಶೇಷ ಉಪಹಾರ ಕೂಟವನ್ನು ಆಯೋಜಿಸಲಾಗಿದೆ ಎಂದು ತಿಳಿದುಬಂದಿದೆ.

ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಎಂ.ಬಿ.ಪಾಟೀಲ್‌ (ಸಂಗ್ರಹ ಚಿತ್ರ)

ಬೆಂಗಳೂರು: ನವದೆಹಲಿಯಿಂದ ಬೆಂಗಳೂರಿಗೆ ಬಂದ ಬಳಿಕ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಮಾಧ್ಯಮಗಳಿಗೆ ಫಸ್ಟ್‌ ರಿಯಾಕ್ಷನ್‌ ನೀಡಿದ್ದಾರೆ. ರಾಜ್ಯದ ಸಿಎಂ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ನಾಳೆ ಎಲ್ಲಾ ವಿಚಾರಗಳ ಬಗ್ಗೆ ಮಾತನಾಡುವುದಾಗಿ ತಿಳಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ, ದೇಶದ ಮೊದಲ ಪ್ರಧಾನಿ ದಿವಂಗತ ಜವಾಹರಲಾಲ್ ನೆಹರು ಅವರ ಪುಣ್ಯಸ್ಮರಣೆಯ ಅಂಗವಾಗಿ ಇಂದು ವಿಧಾನಸೌಧ ಆವರಣದಲ್ಲಿರುವ ನೆಹರು ಅವರ ಪುತ್ಥಳಿ ಬಳಿ‌ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ಬಳಿಕ, ಸಿಎಂ ಮಾತನಾಡಿದ್ದಾರೆ.

ನೆಹರು ಅವರ ಪುಣ್ಯತಿಥಿಯನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ. ನಮ್ಮ ಸರ್ಕಾರದ ವತಿಯಿಂದಲೂ ವಿಶೇಷ ಗೌರವ ಸಲ್ಲಿಸಲಾಗಿದೆ. ಆಧುನಿಕ ಭಾರತ ನಿರ್ಮಾಣದಲ್ಲಿ ನೆಹರು ಅವರ ಪಾತ್ರ ಬಹಳ ದೊಡ್ಡದು. ಮಿಶ್ರ ಆರ್ಥಿಕತೆಗೆ ಹೆಚ್ಚು ಒತ್ತು ನೀಡಿ, ದೊಡ್ಡ ಕೈಗಾರಿಕೆಗಳು, ನೀರಾವರಿ ಯೋಜನೆಗಳು, ಶಿಕ್ಷಣ ಮತ್ತು ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ನೆಹರು ಅವರು ಕಾರಣವಾಗಿದ್ದಾರೆ. ಪಂಚವಾರ್ಷಿಕ ಯೋಜನೆಗಳ ಮೂಲಕ ವೈಜ್ಞಾನಿಕ ಹಾಗೂ ವೈಚಾರಿಕವಾಗಿ ದೇಶದ ಪ್ರಗತಿಗೆ ಶ್ರಮಿಸಿದ್ದಾರೆ. ಅವರ ಕೊಡುಗೆಗಳನ್ನು ನಾವು ಸ್ಮರಿಸಿಕೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.

ಈ ವೇಳೆ ದೆಹಲಿ ಹೈಕಮಾಂಡ್‌ ಸಭೆಯಲ್ಲಿ ಏನು ಚರ್ಚೆಯಾಗಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಾಳೆ ಮಾತನಾಡುತ್ತೇನೆ ಎಂದು ಹೇಳಿ, ನಿರ್ಗಮಿಸಿದ್ದಾರೆ.

ನಾಳೆ ಸಿಎಂ-ಡಿಸಿಎಂ ಬ್ರೇಕ್‌ಫಾಸ್ಟ್‌ ಮೀಟಿಂಗ್‌

ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಕುರ್ಚಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ನಡುವೆ ಮಹತ್ವದ ಬ್ರೇಕ್‌ಫಾಸ್ಟ್‌ ಮೀಟಿಂಗ್ ನಿಗದಿಯಾಗಿದೆ.

ಅಧಿಕಾರಕ್ಕೆ ಬರುತ್ತಿದ್ದಂತೆ ಕರ್ನಾಟಕ ವಿರುದ್ಧ ಸಮರ ಸಾರಿದ ದಳಪತಿ ವಿಜಯ್‌

ಗುರುವಾರ ಮುಂಜಾನೆ 9 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧಿಕೃತ ನಿವಾಸ ಕಾವೇರಿಯಲ್ಲಿ ವಿಶೇಷ ಉಪಹಾರ ಕೂಟವನ್ನು ಆಯೋಜಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಕರ್ನಾಟಕ ಕಾಂಗ್ರೆಸ್ ವಲಯದಲ್ಲಿ ನಾಯಕತ್ವ ಬದಲಾವಣೆಯ ಊಹಾಪೋಹಗಳು ದಟ್ಟವಾಗಿವೆ. ಇಂತಹ ಬಿಗುವಿನ ವಾತಾವರಣದ ನಡುವೆ ಇಬ್ಬರೂ ನಾಯಕರ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಿಗದಿಯಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.