ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Valmiki Award 2025: ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಕಟ; ನಾಗರಾಜು ಗಾಣದ ಹುಣಸೆ, ಪಿ. ತಿಪ್ಪೇಸ್ವಾಮಿ ಸೇರಿ ಐವರು ಸಾಧಕರು ಆಯ್ಕೆ

ನಾಗರಾಜು ಗಾಣದ ಹುಣಸೆ, ಪಿ. ತಿಪ್ಪೇಸ್ವಾಮಿ, ಜೆ.ಕೆ ಮುತ್ತಮ್ಮ, ಮಳಸಿದ್ದ ಲಕ್ಷ್ಮಣ ನಾಯಕೋಡಿ ಕೆ. ಉಚ್ಚಂಗಪ್ಪ ಸೇರಿ ಐವರು ಸಾಧಕರು ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅ.3ರಂದು ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಆಯ್ಕೆ ಸಮಿತಿ ಸಭೆಯಲ್ಲಿ ಐವರು ಸಾಧಕರನ್ನು ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಐವರು ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಕಟ

-

Prabhakara R Prabhakara R Oct 6, 2025 5:31 PM

ಬೆಂಗಳೂರು: 2025ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ಐವರು ಸಾಧಕರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಿಸಿದೆ. ಅ.3ರಂದು ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಆಯ್ಕೆ ಸಮಿತಿ ಸಭೆಯಲ್ಲಿ ಐವರು ಸಾಧಕರನ್ನು ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮಾಧ್ಯಮ, ರಂಗಭೂಮಿ, ಸಂಘಟನೆ, ಸಮಾಜ ಸೇವೆ ಹಾಗೂ ಸಾಮಾಜಿಕ ಕ್ಷೇತ್ರ ಸೇರಿ ಐದು ಕ್ಷೇತ್ರಗಳಿಂದ ತಲಾ ಒಬ್ಬರು ಅರ್ಹ ಸಾಧಕರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ವಾಲ್ಮೀಕಿ ಪ್ರಶಸ್ತಿ ಪುರಸ್ಕೃತರ ಪಟ್ಟಿ

  1. ನಾಗರಾಜು ಗಾಣದ ಹುಣಸೆ, ಬೆಂಗಳೂರು (ಮಾಧ್ಯಮ ಕ್ಷೇತ್ರ)
  2. ಪಿ. ತಿಪ್ಪೇಸ್ವಾಮಿ, ಚಳ್ಳಕೆರೆ (ರಂಗಭೂಮಿ ಕ್ಷೇತ್ರ)
  3. ಜೆ.ಕೆ ಮುತ್ತಮ್ಮ, ಚೆನ್ನಯ್ಯನಕೋಟೆ, ವಿರಾಜಪೇಟೆ (ಸಂಘಟನೆ ಕ್ಷೇತ್ರ)
  4. ಮಳಸಿದ್ದ ಲಕ್ಷ್ಮಣ ನಾಯಕೋಡಿ, ವಿಜಯಪುರ (ಸಮಾಜ ಸೇವೆ)
  5. ಕೆ. ಉಚ್ಚಂಗಪ್ಪ, ಹರಪನಹಳ್ಳಿ (ಸಾಮಾಜಿಕ ಕ್ಷೇತ್ರ)

Valmiki Award  (1)

ರಾಜ್ಯದಲ್ಲಿ ಪ್ರತಿ ವರ್ಷ ಸೀಗೆಹುಣ್ಣಿಮೆ ದಿನದಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತದೆ. ಡಾ. ಬಿ.ಆ‌ರ್. ಅಂಬೇಡ್ಕರ್, ಡಾ. ಬಾಬು ಜಗಜೀವನರಾಂ ಹಾಗೂ ಡಿ. ದೇವರಾಜು ಅರಸು ಅವರ ಸ್ಮರಣಾರ್ಥ ಅರ್ಹ ವ್ಯಕ್ತಿಗಳಿಗೆ ಪ್ರಶಸ್ತಿ ನೀಡುತ್ತಿರುವ ಮಾದರಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಶೈಕ್ಷಣಿಕ ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವಂತಹ ಬೆಂಗಳೂರು, ಮೈಸೂರು, ಬೆಳಗಾವಿ, ಕಲಬುರಗಿ ಕಂದಾಯ ವಿಭಾಗಗಳು ಹಾಗೂ ಬೆಂಗಳೂರು ಕೇಂದ್ರ ಸ್ಥಾನದಿಂದ ತಲಾ ಒಬ್ಬರಂತೆ ಒಟ್ಟು ಐದು ಸಾಧಕರಿಗೆ ನೀಡಲಾಗುತ್ತದೆ.

ಈ ಸುದ್ದಿಯನ್ನೂ ಓದಿ | CM Siddaramaiah: ಮುಂದಿನ ವರ್ಷ ವಚನ ವಿಶ್ವವಿದ್ಯಾಲಯ ಸ್ಥಾಪನೆ, ʼಬಸವ ಮೆಟ್ರೋʼ ಹೆಸರಿಗೆ ಶಿಫಾರಸು: ಸಿಎಂ ಸಿದ್ದರಾಮಯ್ಯ

ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಆಯ್ಕೆ ಮಾಡುವ ಸಂಬಂಧ ದಾವಣಗೆರೆಯ ಡಾ.ಎ.ಬಿ ರಾಮಚಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿತ್ತು. ಆಯ್ಕೆ ಸಮಿತಿಯು ಆಯ್ಕೆ ಮಾಡಿರುವ ಒಟ್ಟು 05 ಸಾಧಕರಿಗೆಪ್ರಶಸ್ತಿಯನ್ನು ನೀಡಲು ನಿರ್ಣಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.