ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Delhi Blast: ದೆಹಲಿಯಲ್ಲಿ ಸ್ಫೋಟ ಹಿನ್ನೆಲೆ ಬೆಂಗಳೂರು ಸೇರಿ ರಾಜ್ಯದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್‌

High alert in Bengaluru: ಬೆಂಗಳೂರಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಮೆಟ್ರೋ, ರೈಲ್ವೆ ನಿಲ್ದಾಣ ಹಾಗೂ ಏರ್‌ಪೋರ್ಟ್‌ನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ಹೊರ ರಾಜ್ಯದವರ ಮೇಲೆ ನಿಗಾ ಇಡಲು ಸೂಚಿಸಲಾಗಿದೆ.

ಬೆಂಗಳೂರು, ನ.10: ನವ ದೆಹಲಿ ಸ್ಫೋಟ ಪ್ರಕರಣ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ. ದೆಹಲಿ ಸ್ಫೋಟದಲ್ಲಿ (Delhi Blast) 8 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಬೆಂಗಳೂರಿನ ಏರ್‌ಪೋರ್ಟ್, ರೈಲ್ವೆ ಹಾಗೂ ಮೆಟ್ರೋ ನಿಲ್ದಾಣಗಳು ಸೇರಿ ಪ್ರಮುಖ ಸ್ಥಳಗಳಲ್ಲಿ ಪೊಲೀಸ್‌ ಬಿಗಿ ಭದ್ರತೆಗೆ ಡಿಜಿ-ಐಜಿಪಿ ಡಾ. ಸಲೀಂ ಸೂಚಿಸಿದ್ದಾರೆ.

ನಗರ ಪ್ರದೇಶಗಳಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಇದೇ ವೇಳೆ ಬೆಂಗಳೂರಿನಲ್ಲಿ ಹೈ ಅಲರ್ಟ್ ಸೂಚಿಸಲಾಗಿದೆ. ಅನುಮಾನಾಸ್ಪದ ವ್ಯಕ್ತಿಗಳ ಸ್ಥಳಗಳ ಮೇಲೆ ನಿಗಾ ಇಡುವಂತೆ ಸೂಚಿಸಲಾಗಿದ್ದು, ಲಾಡ್ಜ್‌ನಲ್ಲಿ ತಂಗಿರುವ ಹೊರ ರಾಜ್ಯದವರ ಮೇಲೆ ನಿಗಾ ಇಡಲು ಸೂಚಿಸಲಾಗಿದೆ. ಇದರ ಜತೆಗೆ ರಾತ್ರಿಯೂ ಗಸ್ತು ಹೆಚ್ಚಳ, ಬಸ್ ನಿಲ್ದಾಣ ಮೆಟ್ರೋ ನಿಲ್ದಾಣಗಳಲ್ಲೂ ನಿಗಾ ಇಡಲು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಸ್ಫೋಟದ ಹಿನ್ನೆಲೆಯಲ್ಲಿ ದೆಹಲಿ ಮಾತ್ರವಲ್ಲದೆ ಮುಂಬೈ, ಹೈದರಾಬಾದ್‌, ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಎನ್‌ಐಎ, ಎನ್‌ಎಸ್‌ಜಿ ತಂಡಗಳು ತೆರಳಿ ಪರಿಶೀಲಿಸುತ್ತಿದ್ದು, ಘಟನೆ ಹಿಂದೆ ಉಗ್ರರ ಕೈವಾಡ ಇದೆಯೇ ಎಂಬ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನೂ ಓದಿ | Delhi Red Fort Blast: ಭಯಾನಕ ದುರ್ಘಟನೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿಗಳು! ವಿಡಿಯೊ

ಕಾರು ಸ್ಫೋಟಕ್ಕೆ ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ ದೆಹಲಿ; ಇದು ಉಗ್ರರ ಕೃತ್ಯವೇ?

ಹರಿಯಾಣದ ಫರಿದಾಬಾದ್‌ನಲ್ಲಿ ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪಡೆಗಳು ಪ್ರಮುಖ ಭಯೋತ್ಪಾದಕ ಸಂಚನ್ನು ವಿಫಲಗೊಳಿಸಿದ ಕೆಲವೇ ಗಂಟೆಗಳ ನಂತರ ದೆಹಲಿಯಲ್ಲಿ ಸ್ಫೋಟ ಸಂಭವಿಸಿದ್ದು ಅನುಮಾನಕ್ಕೆ ಕಾರಣವಾಗಿದೆ. ಪರಿಶೀಲನೆ ವೇಳೆ ಭದ್ರತಾ ಪಡೆಗಳು 360 ಕೆಜಿಯಷ್ಟು ಅಮೋನಿಯಂ ನೈಟ್ರೇಟ್, ಅಸಾಲ್ಟ್ ರೈಫಲ್ ಮತ್ತು ಇತರ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದವು.



ಜತೆಗೆ ಈ ಸ್ಫೋಟಕಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದ ವೈದ್ಯ ಡಾ. ಮುಜಮ್ಮಿಲ್ ಶಕೀಲ್ (35)ನನ್ನು, ಆತನಿಗೆ ನೆರವಾದ ವೈದ್ಯೆಯನ್ನೂ ಬಂಧಿಸಲಾಗಿತ್ತು. ಸೋಮವಾರ ಭದ್ರತಾ ಪಡೆಗಳು ವೈದ್ಯೆ ಡಾ. ಶಾಹೀನ್ ಶಾಹಿದ್‌ನನ್ನು ಬಂಧಿಸಿ ಆಕೆಗೆ ಸೇರಿದ ಕಾರಿನಿಂದ ಎ.ಕೆ. ಕ್ರಿಂಕೋವ್ ರೈಫಲ್ ಜತೆಗೆ 3 ಮ್ಯಾಗಜೀನ್‌ಗಳು, ಲೈವ್ ರೌಂಡ್‌ಗಳೊಂದಿಗೆ 1 ಪಿಸ್ತೂಲ್, 2 ಖಾಲಿ ಕಾರ್ಟ್ರಿಡ್ಜ್‌ಗಳು ಮತ್ತು 2 ಹೆಚ್ಚುವರಿ ಮ್ಯಾಗಜೀನ್‌ಗಳನ್ನು ವಶಪಡಿಸಿಕೊಂಡಿದ್ದವು. ಈ ಹಿನ್ನೆಲೆಯಲ್ಲಿ ದೆಹಲಿ ಕೃತ್ಯವನ್ನು ಉಗ್ರರ ಕೃತ್ಯವೇ ಅಥವಾ ಬೇರೆ ಏನು ಕಾರಣ ಎಂದು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ.