ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Prajwal Revanna: ಅತ್ಯಾಚಾರ ಪ್ರಕರಣ; 2ನೇ ಬಾರಿಯೂ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ

ಈ ಹಿಂದೆ ಜಾಮೀನಿಗಾಗಿ ಪ್ರಜ್ವಲ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ, ವಿಚಾರಣಾಧೀನ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸುವಂತೆ ಹೈಕೋರ್ಟ್‌ ಸೂಚಿಸಿತ್ತು. ಆದರೆ, ಇದೀಗ ಪ್ರಜ್ವಲ್‌ ಜಾಮೀನು ಅರ್ಜಿಯನ್ನು ಎರಡನೇ ಬಾರಿಯೂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಜಾಗೊಳಿಸಿದೆ.

ಅತ್ಯಾಚಾರ ಪ್ರಕರಣ; 2ನೇ ಬಾರಿಯೂ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ

Prabhakara R Prabhakara R Jul 25, 2025 9:15 PM

ಬೆಂಗಳೂರು: ಮನೆ ಕೆಲಸದಾಕೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸತತ ಎರಡನೇ ಬಾರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಜಾಗೊಳಿಸಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಮೊದಲ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಕೋರಿದ್ದ ಪ್ರಜ್ವಲ್‌ ರೇವಣ್ಣ ಅರ್ಜಿಯನ್ನು ನ್ಯಾ. ಸಂತೋಷ್‌ ಗಜಾನನ್‌ ಭಟ್‌ ಅವರು ಶುಕ್ರವಾರ ವಜಾಗೊಳಿಸಿದ್ದಾರೆ.

ಈ ಹಿಂದೆ ಜಾಮೀನಿಗಾಗಿ ಪ್ರಜ್ವಲ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ, ನ್ಯಾಯಾಲಯವು ಮೊದಲಿಗೆ ವಿಚಾರಣಾಧೀನ ನ್ಯಾಯಾಲಯದಲ್ಲಿನ ಅವಕಾಶ ಮುಗಿದ ಬಳಿಕ ಹೈಕೋರ್ಟ್‌ಗೆ ಬರುವಂತೆ ತಿಳಿಸಿತ್ತು. ಅಲ್ಲದೇ ಹತ್ತು ದಿನಗಳಲ್ಲಿ ಪ್ರಜ್ವಲ್‌ ಜಾಮೀನು ಅರ್ಜಿ ನಿರ್ಧರಿಸುವಂತೆ ವಿಚಾರಣಾಧೀನ ನ್ಯಾಯಾಲಯಕ್ಕೆ ನಿರ್ದೇಶಿಸಿತ್ತು.

ಪ್ರಜ್ವಲ್‌ ವಿರುದ್ಧ ಒಟ್ಟು ನಾಲ್ಕು ಅತ್ಯಾಚಾರ ಪ್ರಕರಣ ದಾಖಲಾಗಿವೆ. 2024ರ ಅಕ್ಟೋಬರ್‌ನಲ್ಲಿ ಹೈಕೋರ್ಟ್‌ ಪ್ರಜ್ವಲ್‌ ಅವರ ಜಾಮೀನು ಮತ್ತು ಮೂರು ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದ ಪ್ರಜ್ವಲ್‌ಗೆ ಅಲ್ಲೂ ಪರಿಹಾರ ದೊರೆತಿರಲಿಲ್ಲ. ಇದಕ್ಕೂ ಮುನ್ನ, ವಿಶೇಷ ನ್ಯಾಯಾಲಯವು ಜಾಮೀನು ಮತ್ತು ನಿರೀಕ್ಷಣಾ ಜಾಮೀನುಗಳನ್ನು ವಜಾಗೊಳಿಸಿತ್ತು. ವಕೀಲ ಜಿ ಅರುಣ್‌ ಅವರು ಪ್ರಜ್ವಲ್‌ ಪರವಾಗಿ ವಕಾಲತ್ತು ವಹಿಸಿದ್ದರು.

ಮನೆಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಜ್ವಲ್‌ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಪ್ರಜ್ವಲ್‌ ತಂದೆ ಎಚ್‌.ಡಿ. ರೇವಣ್ಣ ಮೊದಲ ಆರೋಪಿಯಾಗಿದ್ದು, ಅವರ ವಿರುದ್ಧವೂ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿದೆ.

ಈ ಸುದ್ದಿಯನ್ನೂ ಓದಿ | Haveri News: ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯಾರ್ಥಿ ಸಾವು, ಇಬ್ಬರಿಗೆ ಗಂಭೀರ ಗಾಯ

ಭೀಮನ ಅಮಾವಾಸ್ಯೆ ದಿನ ಗಂಡನ ಪಾದ ಪೂಜೆ ಮಾಡಿದ ಬಳಿಕ ಹೆಂಡತಿ ಅನುಮಾನಾಸ್ಪದ ಸಾವು!

Spandana death

ಬೆಂಗಳೂರು: ಭೀಮನ ಅಮಾವಾಸ್ಯೆ ದಿನ ಗಂಡನಿಗೆ ಪೂಜೆ ಮಾಡಿದ ಬಳಿಕ ಹೆಂಡತಿ ಅನುಮಾನಾಸ್ಪದವಾಗಿ ಮೃತಪಟ್ಟಿರುವುದು (Bengaluru News) ಬೆಂಗಳೂರು ಹೊರವಲಯದ ದಾಸನಪುರದ ಅಂಚೆಪಾಳ್ಯದಲ್ಲಿ ನಡೆದಿದೆ. ವರದಕ್ಷಿಣೆ ಕಿರುಕುಳದಿಂದ ಮಹಿಳೆ ಮೃತಪಟ್ಟಿದ್ದಾಳೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಸ್ಪಂದನಾ (24) ಮೃತ ಮಹಿಳೆ. ಬೆಂಗಳೂರಿನ ಕಾಲೇಜಿನಲ್ಲಿ ಪಿಜಿ ಓದುವಾಗ ಸ್ಪಂದನಾಗೆ ಕನಕಪುರದ ಕರಿಕಲ್ಲ ದೊಡ್ಡಿಯ ನಿವಾಸಿ ಅಭಿಷೇಕ್ ಎಂಬಾತನ ಪರಿಚಯವಾಗಿತ್ತು. ಪರಸ್ಪರ ಪ್ರೀತಿಸಿದ್ದ ಇವರು, ಪೋಷಕರ ವಿರೋಧದ ನಡುವೆ 2024ರಲ್ಲಿ ಕನಕಪುರ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ರಿಜಿಸ್ಟರ್ ಮದುವೆಯಾಗಿದ್ದರು. ಈ ದಂಪತಿ ಕಳೆದ ಕೆಲ ತಿಂಗಳಿಂದ ಅಂಚೆಪಾಳ್ಯದಲ್ಲಿ ವಾಸವಿದ್ದರು.

Spandana death (1)

ಆದರೆ, ಮದುವೆಯ ನಂತರ ವರದಕ್ಷಿಣೆಗಾಗಿ ಗಂಡ ಅಭಿಷೇಕ್ ಹಾಗೂ ಅವನ ತಾಯಿ ಲಕ್ಷ್ಮಮ್ಮ ನಿರಂತರ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಭೀಮನ ಅಮಾವಾಸ್ಯೆ ಪ್ರಯುಕ್ತ ಗಂಡನಿಗೆ ಗುರುವಾರ ಪಾದಪೂಜೆ ಮಾಡಿದ್ದ ಸ್ಪಂದನಾ, ಅದಾದ ಕೆಲ ಹೊತ್ತಲ್ಲೇ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಮಹಿಳೆಯ ಪೋಷಕರಿಗೆ ಸ್ಥಳೀಯರು ಮಾಹಿತಿ ನೀಡಿದ ಬಳಿಕ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನೂ ಓದಿ | Madikeri accident: ಮಡಿಕೇರಿಯಲ್ಲಿ ಭೀಕರ ಅಪಘಾತ; ಲಾರಿ-ಕಾರು ಡಿಕ್ಕಿಯಾಗಿ ನಾಲ್ವರ ದುರ್ಮರಣ

ಗಂಡ ಅಭಿಷೇಕ್ ಹಾಗೂ ಆತನ ತಾಯಿ ಲಕ್ಷ್ಮಮ್ಮ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಕೊಲೆ ಸಂಬಂಧಿತ ಆರೋಪಗಳಡಿ ಎಫ್‌ಐಆರ್ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಪಂದನಾ ಸಾವಿನ ಬಗ್ಗೆ ಪೂರ್ಣ ತನಿಖೆ ನಡೆಯಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ.