Rahul Dravid: ಬೆಂಗಳೂರಲ್ಲಿ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಕಾರು ಅಪಘಾತ!

Rahul Dravid: ಬೆಂಗಳೂರಲ್ಲಿ ರಾಹುಲ್‌ ದ್ರಾವಿಡ್‌ ಅವರ ಕಾರಿಗೆ ಹಿಂದಿನಿಂದ ಗೂಡ್ಸ್ ವಾಹನ ಟಚ್‌ ಆಗಿದ್ದು, ಈ ವೇಳೆ ದ್ರಾವಿಡ್ ಹಾಗೂ ಗೂಡ್ಸ್ ವಾಹನ ಚಾಲಕನ ನಡುವೆ ವಾಗ್ವಾದ ನಡೆದಿದೆ.

Dravid
Profile Prabhakara R Feb 4, 2025 9:38 PM

ಬೆಂಗಳೂರು: ಟೀಮ್ ಇಂಡಿಯಾದ ಮಾಜಿ ಆಟಗಾರ, ತಂಡದ ಮಾಜಿ ಹೆಡ್ ಕೋಚ್ ಕನ್ನಡಿಗ ರಾಹುಲ್ ದ್ರಾವಿಡ್ ಅವರ ಕಾರು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ (Rahul Dravid) ಯಾವುದೇ ಅಪಾಯ ಸಂಭವಿಸಿಲ್ಲ. ಹಿಂದಿನಿಂದ ಕಾರಿಗೆ ಗೂಡ್ಸ್ ವಾಹನ ಟಚ್‌ ಆಗಿದ್ದು, ಈ ವೇಳೆ ದ್ರಾವಿಡ್ ಹಾಗೂ ಗೂಡ್ಸ್ ವಾಹನ ಚಾಲಕನ ನಡುವೆ ಸಣ್ಣ ವಾಗ್ವಾದ ನಡೆದಿದೆ.

ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಮಂಗಳವಾರ ಫೆಬ್ರವರಿ 4 ಸಂಜೆ ಘಟನೆ ನಡೆದಿದೆ. ಕಾರಿಗೆ ಗೂಡ್ಸ್‌ ವಾಹನ ಟಚ್ ಆದ ಬಳಿಕ ರಾಹುಲ್ ದ್ರಾವಿಡ್ ಕಾರಿನಿಂದ ಕೆಳಗಿಳಿದು ಕಾರನ್ನು ಪರಿಶೀಲಿಸಿದ್ದಾರೆ. ಈ ವೇಳೆ ರಾಹುಲ್ ದ್ರಾವಿಡ್ ಹಾಗೂ ಗೂಡ್ಸ್ ಆಟೋ ಚಾಲಕನ‌ ನಡುವೆ ಸಣ್ಣ ವಾಗ್ವಾದ ನಡೆದಿದೆ. ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸದ್ಯ ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.



ದ್ರಾವಿಡ್ ಅವರು ಇಂಡಿಯನ್ ಎಕ್ಸ್‌ಪ್ರೆಸ್‌ ಸಿಗ್ನಲ್‌ ಕಡೆಯಿಂದ ಹೈಗ್ರೌಂಡ್ಸ್ ಕಡೆಗೆ ಹೊರಟಿದ್ದರು. ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಟ್ರಾಫಿಕ್ ಉಂಟಾಗಿತ್ತು. ಈ ವೇಳೆ ಟ್ರಾಫಿಕ್‌ನಲ್ಲಿ ದ್ರಾವಿಡ್ ಕಾರು ನಿಲ್ಲಿಸಿದ್ದರು. ಕಾರಿಗೆ ಹಿಂದಿನಿಂದ ಬಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನೂ ಓದಿ | Narendra Modi: ನಗರ ನಕ್ಸಲ್‌ ಭಾಷೆ, ಗುಡಿಸಲಲ್ಲಿ ಫೋಟೊ ಸೆಷನ್‌; ರಾಹುಲ್‌ ಗಾಂಧಿ ವಿರುದ್ಧ ಮೋದಿ ಗುಡುಗು

ವಿರಾಟ್‌ ಕೊಹ್ಲಿ ಆರ್‌ಸಿಬಿಗೆ ನಾಯಕ? ಬೆಂಗಳೂರು ಫ್ರಾಂಚೈಸಿ ಸಿಒಒ ಹೇಳಿದ್ದಿದು!

RCB Captaincy

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ನಾಯಕ ಯಾರೆಂಬ ಬಗ್ಗೆ ಇನ್ನೂ ಯಾವುದೇ ಖಚಿತ ಮಾಹಿತಿ ಇಲ್ಲ. ಕಳೆದ ಮೂರು ಆವೃತ್ತಿಗಳಲ್ಲಿ ಆರ್‌ಸಿಬಿಯನ್ನು ಮುನ್ನಡೆಸಿದ್ದ ಫಾಫ್‌ ಡು ಪ್ಲೆಸಿಸ್‌ ಮೆಗಾ ಹರಾಜಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ಸೇರ್ಪಡಯಾಗಿದ್ದಾರೆ. ಸದ್ಯ ಆರ್‌ಸಿಬಿ ತಂಡದಲ್ಲಿರುವ ಆಟಗಾರರನ್ನು ಗಮನಿಸಿದರೆ, ವಿರಾಟ್‌ ಕೊಹ್ಲಿಯೇ ನಾಯಕತ್ವಕ್ಕೆ ಮರಳಬಹುದೆಂದು ಚರ್ಚೆಗಳು ನಡೆಯುತ್ತಿವೆ. ಇತ್ತೀಚೆಗೆ ಸ್ಪೋರ್ಟ್ಸ್‌ ತಕ್‌ ಸಂದರ್ಶನದಲ್ಲಿ ಆರ್‌ಸಿಬಿ ಸಿಒಒ ರಾಜೇಶ್‌ ಮೆನನ್‌ಗೆ ನಾಯಕತ್ವದ ಬಗ್ಗೆ ಪ್ರಶ್ನೆಯನ್ನು ಕೇಳಲಾಗಿತ್ತು.

2021ರ ಐಪಿಎಲ್‌ ಟೂರ್ನಿಯ ಬಳಿಕ ವಿರಾಟ್‌ ಕೊಹ್ಲಿ ಆರ್‌ಸಿಬಿ ನಾಯಕತ್ವವನ್ನು ತೊರೆದಿದ್ದರು. ನಂತರ 2022ರ ಮೆಗಾ ಹರಾಜಿನಲ್ಲಿ ಫಾಫ್‌ ಡು ಪ್ಲೆಸಿಸ್‌ ಅವರನ್ನು ಖರೀದಿಸಿ ನಾಯಕತ್ವ ನೀಡಲಾಗಿತ್ತು. ಇವರ ನಾಯಕತ್ವದಲ್ಲಿಯೂ ಆರ್‌ಸಿಬಿ ಚೊಚ್ಚಲ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಲಿಲ್ಲ. ಹದಿನೆಂಟನೇ ಆವೃತ್ತಿಲಯಲ್ಲಿ ಆರ್‌ಸಿಬಿ ತಂಡವನ್ನು ಯಾವು ಮುನ್ನಡೆಸಲಿದ್ದಾರೆಂಬ ಬಗ್ಗೆ ಇನ್ನೂ ಯಾವುದೇ ಖಚಿತತೆ ಇಲ್ಲ. ಇದರ ನಡುವೆ ಆರ್‌ಸಿಬಿ ಸಿಒಒ ಮೆನನ್‌ ಅವರು ಆರ್‌ಸಿಬಿ ನಾಯಕತ್ವದ ಬಗ್ಗೆ ಮಾತನಾಡಿದ್ದಾರೆ.

WPL 2025: ಚಾಂಪಿಯನ್ ಆರ್‌ಸಿಬಿ ತಂಡ ಸೇರಿಕೊಂಡ ಆಸ್ಟ್ರೇಲಿಯಾ ಸ್ಟಾರ್‌ಗಳು!

ಬೆಂಗಳೂರು ಫ್ರಾಂಚೈಸಿ ಸಿಒಒ ಹೇಳಿದ್ದೇನು?

ಸ್ಪೋರ್ಟ್ಸ ತಕ್‌ ಸಂದರ್ಶನದಲ್ಲಿ ಭಾಗವಹಿಸಿದ್ದ ಬೆಂಗಳೂರು ಫ್ರಾಂಚೈಸಿ ಸಿಒಒ ರಾಜೇಶ್‌ ಮೆನನ್‌ ಅವರಿಗೆ ಆರ್‌ಸಿಬಿಯನ್ನು ವಿರಾಟ್‌ ಕೊಹ್ಲಿ ಮುನ್ನಡೆಸಲಿದ್ದಾರೆಯೇ? ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು. ಇದಕ್ಕೆ ಉತ್ತರಿಸಿದ ಆರ್‌ಸಿಬಿ ಮೆನನ್‌, "ಆರ್‌ಸಿಬಿ ನಾಯಕತ್ವದ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ತಂಡದಲ್ಲಿ ಹಲವು ನಾಯಕರು ಇದ್ದಾರೆ. 4 ರಿಂದ 5 ನಾಯಕರು ತಂಡದಲ್ಲಿದ್ದಾರೆ. ನಾವು ಏನು ಮಾಡಬೇಕೆಂದು ಇನ್ನೂ ಚರ್ಚಿಸಿಲ್ಲ. ನಾವು ಚರ್ಚಿಸುತ್ತೇವೆ ಮತ್ತು ಒಂದು ತೀರ್ಮಾನಕ್ಕೆ ಬರುತ್ತೇವೆ," ಎಂದು ಹೇಳಿದ್ದಾರೆ.

ವಿರಾಟ್‌ ಕೊಹ್ಲಿ 2021 ರಿಂದ 2021ರವರೆಗೆ 143 ಪಂದ್ಯಗಳಲ್ಲಿ ಆರ್‌ಸಿಬಿ ತಂಡವನ್ನು ಮುನ್ನಡೆಸಿದ್ದಾರೆ, ಇದರಲ್ಲಿ ಅವರು 66 ಪಂದ್ಯಗಳನ್ನು ಗೆದ್ದಿದ್ದಾರೆ. 70 ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದಾರೆ. 2016ರಲ್ಲಿ ವಿರಾಟ್‌ ಕೊಹ್ಲಿ ನಾಯಕತ್ವದಲ್ಲಿ ಆರ್‌ಸಿಬಿ ಒಮ್ಮೆ ಫೈನಲ್‌ಗೆ ಅರ್ಹತೆ ಪಡೆದಿತ್ತು ಹಾಗೂ ಸೋತು ರನ್ನರ್‌ ಅಪ್‌ಗೆ ತೃಪ್ತಿಪಟ್ಟುಕೊಂಡಿತ್ತು. ಈ ಆವೃತ್ತಿಯಲ್ಲಿ ವಿರಾಟ್‌ ಕೊಹ್ಲಿ 973 ರನ್‌ಗಳನ್ನು ಸಿಡಿಸಿದ್ದರು.

IPL 2025: ಆರ್‌ಸಿಬಿಗೆ ನಾಯಕನಾಗಲು ಕೊಹ್ಲಿ ಏಕೈಕ ಆಯ್ಕೆ; ಎಬಿಡಿ

ಆರ್‌ಸಿಬಿಗೆ ಸ್ಟಾರ್‌ ಆಟಗಾರರ ಸೇರ್ಪಡೆ

2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಟೂರ್ನಿಯ ಮೆಗಾ ಹರಾಜಿನಲ್ಲಿ ಬೆಂಗಳೂರು ಫ್ರಾಂಚೈಸಿ ಕೆಲ ಸ್ಟಾರ್‌ ಆಟಗಾರರನ್ನು ಖರೀದಿಸಿತ್ತು. ಫಿಲ್‌ ಸಾಲ್ಟ್‌, ಲಿಯಾಮ್‌ ಲಿವಿಂಗ್‌ಸ್ಟೋನ್‌, ಜಾಕೋಬ್‌ ಬೆಥೆಲ್‌, ಟಿಮ್‌ ಡೇವಿಡ್‌, ಭುವನೇಶ್ವರ್‌ ಕುಮಾರ್‌, ಜಿತೇಶ್‌ ಶರ್ಮಾ, ದೇವದತ್‌ ಪಡಿಕ್ಕಲ್‌. ಜಾಶ್‌ ಹೇಝಲ್‌ವುಡ್‌, ರೊಮ್ಯಾರಿಯೊ ಶೆಫರ್ಡ್‌, ನುವಾನ್‌ ತುಷಾರ ಹಾಗೂ ಸುಯಶ್‌ ಶರ್ಮಾ ಅವರು ಆರ್‌ಸಿಬಿ ಬಂದಿದ್ದಾರೆ.

2025ರ ಐಪಿಎಲ್‌ಗೆ ಆರ್‌ಸಿಬಿ ತಂಡದ ಬಗ್ಗೆ ಮಾತನಾಡಿ, "ಮೆಗಾ ಹರಾಜಿಗೆ ಹೋಗುವುದಕ್ಕೂ ಮುನ್ನ ನಮ್ಮ ತಂಡದ ಬಗ್ಗೆ ನಮಗೆ ಗೊತ್ತಿತ್ತು. ಅಂದರೆ, ತಂಡದಲ್ಲಿನ ಅಗತ್ಯತೆ ಏನು, ಎಷ್ಟು ಸ್ಥಾನಗಳು ಬಾಕಿ ಇವೆ, ತಂಡವನ್ನು ಶಕ್ತಿಯುತಗೊಳಿಸಲು ಎಂಥಾ ಆಟಗಾರರ ಬೇಕು, ಎಂ ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸೂಕ್ತವಾಗುವ ಬೌಲಿಂಗ್‌ ಲೈನ್‌ ಅಪ್‌ ಸೇರಿದಂತೆ ಎಲ್ಲಾ ಬೇಡಿಕೆಗಳನ್ನು ನಾವು ಪೂರೈಸಿದ್ದೇವೆ," ಎಂದು ರಾಜೇಶ್‌ ಮೆನನ್‌ ತಿಳಿಸಿದ್ದಾರೆ.

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?