ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರಗೆ ಬಿಗ್‌ ರಿಲೀಫ್‌; ನಿರೀಕ್ಷಣಾ ಜಾಮೀನು ಮಂಜೂರು

Valmiki Corporation Scam: ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿ ಸಿಬಿಐ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದರಿಂದ ಮಾಜಿ ಸಚಿವ ಬಂಧನ ಭೀತಿಯಲ್ಲಿದ್ದರು. ಹೀಗಾಗಿ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಸಚಿವ ಅರ್ಜಿ ಸಲ್ಲಿಸಿದ್ದರು. ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಮಾಜಿ ಸಚಿವ ಬಿ.ನಾಗೇಂದ್ರ (ಸಂಗ್ರಹ ಚಿತ್ರ)

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣ ಪ್ರಕರಣದಲ್ಲಿ (Valmiki Corporation Scam) ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರಗೆ (B. Nagendra) ಬಿಗ್ ರಿಲೀಫ್ ಸಿಕ್ಕಿದೆ. ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ ಆದೇಶ ನೀಡಿದೆ. ಮಂಗಳವಾರ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ವಾದ-ಪ್ರತಿವಾದ ಆಲಿಸಿ ಇಂದಿಗೆ ಆದೇಶ ಕಾಯ್ದಿರಿಸಿತ್ತು. ಇದೀಗ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಪ್ರಕರಣದಲ್ಲಿ ಸಿಬಿಐ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದರಿಂದ ಮಾಜಿ ಸಚಿವ ಬಂಧನ ಭೀತಿಯಲ್ಲಿದ್ದರು. ಹೀಗಾಗಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಮಂಗಳವಾರ ವಿಚಾರಣೆ ವೇಳೆ ಪ್ರಕರಣದ ತನಿಖಾಧಿಕಾರಿಯೇ ಕೋರ್ಟ್‌ನಲ್ಲಿ ವಾದಮಂಡನೆ ಮಾಡಿದ್ದರು.

ವಾಲ್ಮೀಕಿ ಹಗರಣದಲ್ಲಿ ಹಣ ಪಡೆದವರನ್ನು ಸಿಐಡಿ, ಇಡಿ ತನಿಖೆ ಮಾಡಿದೆ. ಇದರ ಫಲಾನುಭವಿಗಳು ಯಾರು ಎಂಬುವುದನ್ನು ಪತ್ತೆ ಹಚ್ಚಬೇಕಿದೆ. ಇಲ್ಲಿಯವರೆಗೂ ನಡೆದ ತನಿಖೆಯ ಕೆಲ ಮಾಹಿತಿಗಳನ್ನು ತೆರೆದ ನ್ಯಾಯಾಲಯದಲ್ಲಿ ಹೇಳಲು ಸಾಧ್ಯವಿಲ್ಲ. ಮುಂಬೈನಲ್ಲಿ ಕೂಡ ದಾಳಿ ಮಾಡಿ ಮಾಹಿತಿ ಕಲೆಹಾಕಲಾಗಿದೆ. ಹಗರಣದ ಹಣ ಚಿನ್ನ, ಬುಲಿಯನ್ ಆಗಿ ಕನ್ವರ್ಟ್ ಆಗಿದೆ. ಇದರ ಹಿಂದೆ ನಾಗೇಂದ್ರ, ಅವರ ಸಹಚರರು ಭಾಗಿಯಾಗಿದ್ದಾರೆ. ಇದರ ಹಿಂದೆ ಕೆಲ ಬೋಗಸ್ ಕಂಪನಿಗಳು ಭಾಗಿಯಾಗಿವೆ. ಈ ಪ್ರಕರಣದ ಬಗ್ಗೆ ಸಾಕಷ್ಟು ಸಾಕ್ಷ್ಯಗಳನ್ನ ಕಲೆ ಹಾಕಲಾಗಿದೆ ಎಂದು ಹೇಳಿ ಕೋರ್ಟ್‌ಗೆ ತಂದಿದ್ದ ದಾಖಲೆಗಳನ್ನು ತನಿಖಾಧಿಕಾರಿ ತೋರಿಸಿದ್ದರು.

ನಾಗೇಂದ್ರ ಪರ ವಕೀಲರು ವಾದ ಮಂಡನೆ ಮಾಡಿ, ನಾಗೇಂದ್ರ ಮತ್ತು ನೆಕ್ಕಂಟಿ ನಾಗರಾಜ್ ನಡುವಿನ ವ್ಯವಹಾರ ಅವರ ವೈಯಕ್ತಿಕವಾದದ್ದು. ಸಿಬಿಐ ಹೇಳುತ್ತಿರುವ ಟೆಂಡರ್‌ಗೂ ಈ ವ್ಯವಹಾರಗಳಿಗೂ ಯಾವುದೇ ಸಂಬಂಧವಿಲ್ಲ ಅಂತ ವಾದಿಸಿದ್ದರು.

ವಾಲ್ಮೀಕಿ ಅಭಿೃದ್ಧಿ ನಿಗಮ ಹಗರಣದಲ್ಲಿ ಈ ಹಿಂದೆ ಜೈಲು ಪಾಲಾಗಿದ್ದ ಬಿ ನಾಗೇಂದ್ರ ನಂತರ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದರು. ಈ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯವು (ಇ.ಡಿ) ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಸೇರಿದ 8.07 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿತ್ತು.

ಬೆದರಿಕೆ ಹಾಕಿದ ಕಾಂಗ್ರೆಸ್‌ ಮುಖಂಡನ ವಿರುದ್ಧ ಶಿಡ್ಲಘಟ್ಟ ಪೌರಾಯುಕ್ತೆ ದೂರು

_Sidlaghatta News (1)

ಚಿಕ್ಕಬಳ್ಳಾಪುರ: ಬ್ಯಾನರ್ ತೆರವು ವಿಚಾರಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡಗೆ ಬೆದರಿಕೆ ಹಾಕಿದ ಆರೋಪದಲ್ಲಿ ಕಾಂಗ್ರೆಸ್​ ಮುಖಂಡ ರಾಜೀವ್ ಗೌಡ ವಿರುದ್ಧ ದೂರು ದಾಖಲಾಗಿದೆ. ಅವಾಚ್ಯವಾಗಿ ನಿಂದಿಸಿ, ಜೀವ ಬೆದರಿಕೆ ಹಾಕಿರುವ ರಾಜೀವ್ ಗೌಡ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಪೌರಾಯುಕ್ತೆ ಅಮೃತಾಗೌಡ ಅವರು ಶಿಡ್ಲಘಟ್ಟ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಮಾನಹಾನಿ ಪ್ರಕರಣ: ಯತ್ನಾಳ್‌ ಮೇಲೆ ಜಾಮೀನುರಹಿತ ಬಂಧನ ವಾರಂಟ್‌

ಶಿಡ್ಲಘಟ್ಟದ ಕಾಂಗ್ರೆಸ್ ಪಕ್ಷದ ಪರಾಜಿತ ಅಭ್ಯರ್ಥಿ ರಾಜೀವ್ ಗೌಡ ಅವರು ಯಾವುದೇ ಅನುಮತಿ ಇಲ್ಲದೇ ಅನಧಿಕೃತವಾಗಿ ಅವರ ಭಾವಚಿತ್ರವುಳ್ಳ ಫ್ಲೆಕ್ಸ್ ನಗರದಾದ್ಯಂತ ಅಳವಡಿಸಿದ್ದರು. ನಗರದ ಕೋಟೆ ವೃತ್ತದಲ್ಲಿ ಸಂಚಾರಕ್ಕೆ ಅಡಚಣೆಯಾಗಿದ್ದರಿಂದ, ನಮ್ಮ ಆರೋಗ್ಯ ನಿರೀಕ್ಷಕರಾದ ಕೃಷ್ಣಮೂರ್ತಿ ಅವರ ಮುಖಾಂತರ ತೆರವು ಮಾಡಿಸಿ ಕಚೇರಿಯಲ್ಲಿ ಇರಿಸಲಾಗಿತ್ತು. ಈ ವಿಷಯನ್ನು ತಿಳಿದುಕೊಂಡ ರಾಜೀವ್ ಗೌಡರು, ನನಗೆ ಮೊಬೈಲ್‌ ಕರೆ ಮಾಡಿ ಏಕ ವಚನದಲ್ಲಿ ಸಂಬೋಧಿಸಿ, ಕೂಡಲೇ ತೆಗೆದುಹಾಕಿರುವ ಬ್ಯಾನರ್‌ ಮರು ಸ್ಥಾಪಿಸಬೇಕು. ಇಲ್ಲವಾದಲ್ಲಿ ನಿನ್ನ ಕಚೇರಿಗೆ ಬಂದು ಬೆಂಕಿ ಇಟ್ಟು ಸುಟ್ಟು ಹಾಕುತ್ತೇನೆ. ಸಾರ್ವಜನಿಕರನ್ನು ನಿನ್ನ ವಿರುದ್ಧ ಎತ್ತಿ ಕಟ್ಟಿ ಚಪ್ಪಲಿಯಲ್ಲಿ ಹೊಡೆಸುವುದಾಗಿ ಹಾಗೂ ನಿನ್ನನ್ನು ಈ ತಾಲೂಕಿನಿಂದ ಒದ್ದು ಓಡಿಸುವುದಾಗಿ ಅಸಭ್ಯ ಪದಗಳನ್ನು ಬಳಸಿ ನನ್ನನ್ನು ತೇಜೋವಧೆ ಮಾಡಿರುತ್ತಾರೆ ಮತ್ತು ನನ್ನ ಕರ್ತವ್ಯಕ್ಕೆ ಅಡ್ಡಿಪಡಿಸಿರುತ್ತಾರೆ ಎಂದು ದೂರಿನಲ್ಲಿ ಲೋಕಾಯುಕ್ತೆ ಅಮೃತಾಗೌಡ ತಿಳಿಸಿದ್ದಾರೆ.