ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Sumalatha Ambareesh: ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಮಾಜಿ ಸಂಸದೆ ಸುಮಲತಾ ಬೆಂಬಲ; ಬೇಡಿಕೆ ಈಡೇರಿಸುವಂತೆ ಸಿಎಂ ಡಿಕೆಶಿಗೆ ಪತ್ರ

ASHA Workers Protest: ಬೆಂಗಳೂರಿನಲ್ಲಿ ಮಾಸಿಕ ಗೌರವಧನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುಮಲತಾ ಅಂಬರೀಶ್‌ ಅವರು, ಮುಖ್ಯಮಂತ್ರಿಗಳು ಈ ವಿಚಾರದಲ್ಲಿ ವೈಯಕ್ತಿಕವಾಗಿ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದ್ದಾರೆ.

ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸುಮಲತಾ ಬೆಂಬಲ; ಸಿಎಂಗೆ ಪತ್ರ

-

Prabhakara R
Prabhakara R Nov 22, 2026 6:57 PM

ಬೆಂಗಳೂರು: ಆಶಾ ಕಾರ್ಯಕರ್ತೆಯರ ಪ್ರತಿಭಟನೆಗೆ (ASHA Workers Protest) ಮಾಜಿ ಸಂಸದೆ ಸುಮಲತಾ ಅಂಬರೀಶ್‌ (Sumalatha Ambareesh) ಅವರು ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ಪತ್ರ ಬರೆದಿರುವ ಅವರು, ಆಶಾ ಕಾರ್ಯಾಕರ್ತೆಯರ ಗೌರವಧನ ಹೆಚ್ಚಳದ ಬೇಡಿಕೆಯನ್ನು ಮಾನವೀಯ ದೃಷ್ಟಿಕೋನದಿಂದ ಪರಿಗಣಿಸಿ, ಅವರ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾಸಿಕ ಗೌರವಧನ ಹೆಚ್ಚಳಕ್ಕಾಗಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಮಲತಾ ಅಂಬರೀಶ್‌ ಅವರು, ಮುಖ್ಯಮಂತ್ರಿಗಳು ಈ ವಿಚಾರದಲ್ಲಿ ವೈಯಕ್ತಿಕವಾಗಿ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದ್ದಾರೆ.

ಹಲವು ದಿನಗಳಿಂದ ಚಳಿಯನ್ನೂ ಲೆಕ್ಕಿಸದೆ ಆಶಾ ಕಾರ್ಯಕರ್ತೆಯರು ಬಯಲಿನಲ್ಲಿಯೇ ಹಗಲು-ರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಹಿಳಾ ಕಾರ್ಯಕರ್ತೆಯರ ಇಂತಹ ಪರಿಸ್ಥಿತಿ ನಿಜಕ್ಕೂ ಕಳವಳಕಾರಿಯಾಗಿದೆ. ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿಗಳು ಕೂಡಲೇ ಮಾತುಕತೆ ನಡೆಸಬೇಕು. ಮಾಸಿಕ ಗೌರವಧನವನ್ನು 15,000ಕ್ಕೆ ಹೆಚ್ಚಿಸಬೇಕೆಂಬ ಅವರ ಬೇಡಿಕೆಯನ್ನು ಮಾನವೀಯತೆ ಮತ್ತು ಸಹಾನುಭೂತಿಯಿಂದ ಪರಿಗಣಿಸಿ ಶೀಘ್ರ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.

Asha Workers Protest: ಆಶಾ ಕಾರ್ಯಕರ್ತೆಯರ ಪ್ರತಿಭಟನೆಗೆ ರಮ್ಯಾ ಬೆಂಬಲ; ರಾಜ್ಯ ಸರ್ಕಾರಕ್ಕೆ ನಟಿ ಹೇಳಿದ್ದೇನು?

ಸರ್ಕಾರದ ಸಮಯೋಚಿತ ಮಧ್ಯಪ್ರವೇಶದಿಂದ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸಕಾರಾತಕ ಪರಿಹಾರ ದೊರೆಯಬೇಕು. ಪ್ರತಿಭಟನೆಯಲ್ಲಿ ತೊಡಗಿರುವ ಮಹಿಳೆಯರು ಗೌರವಯುತವಾಗಿ ತಮ ಮನೆಗಳಿಗೆ ಮರಳುವಂತಾಗಬೇಕು ಎಂಬ ಆಶಯವನ್ನು ಸುಮಲತಾ ವ್ಯಕ್ತಪಡಿಸಿದ್ದಾರೆ.