ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Namma Metro Yellow Line: ಇಂದಿನಿಂದ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ನಾಲ್ಕನೇ ರೈಲು ಓಡಾಟ, 19 ನಿಮಿಷಕ್ಕೊಂದು ರೈಲು

Bengaluru: ರೈಲುಗಳ ಸಂಚಾರದ ವೇಳಾಪಟ್ಟಿ ಬದಲಾವಣೆಯಾಗಿದ್ದು, ರೈಲುಗಳ ನಡುವಿನ ಅಂತರ 25 ನಿಮಿಷದಿಂದ 19 ನಿಮಿಷಕ್ಕೆ ಇಳಿಕೆಯಾಗಿದೆ. ಆಗಸ್ಟ್ 10 ರಿಂದ ಮೂರು ರೈಲುಗಳೊಂದಿಗೆ ಕಾರ್ಯಾರಂಭ ಮಾಡಲಾಗಿತ್ತು. ಮೂರು ವಾರದ ಹಿಂದೆ ಕೊಲ್ಕತ್ತಾದ ತೀತಾಗಢ್ ರೈಲು ಫ್ಯಾಕ್ಟರಿಯಿಂದ ಈ ರೈಲು ಸೆಟ್ ಗಳು ಬೆಂಗಳೂರಿಗೆ ಬಂದು ಹೆಬ್ಬಗೋಡಿ ಡಿಪೋದಲ್ಲಿ ಜೋಡಣೆ ಮಾಡಲಾಗಿದೆ.

ಬೆಂಗಳೂರು: ಬೆಂಗಳೂರಿನ (Bengaluru) ಜನತೆಗೆ ಸಿಹಿಸುದ್ದಿ ಸಿಕ್ಕಿದೆ. ಇಂದಿನಿಂದ ಎಲೆಕ್ಟ್ರಾನಿಕ್ ಸಿಟಿ (Electronic city) ಸಂಪರ್ಕಿಸುವ ಆರ್.ವಿ. ರಸ್ತೆ- ಬೊಮ್ಮಸಂದ್ರ ಮಾರ್ಗದ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ (Namma Metro Yellow Line) ನಾಲ್ಕನೇ ರೈಲು ಸಂಚಾರ ಆರಂಭಿಸಲಿದೆ. ಇದುವರೆಗೆ ಮೂರು ರೈಲುಗಳು ಮಾತ್ರ ಓಡಾಟ ನಡೆಸುತ್ತಿದ್ದವು.

ರೈಲುಗಳ ಸಂಚಾರದ ವೇಳಾಪಟ್ಟಿ ಬದಲಾವಣೆಯಾಗಿದ್ದು, ರೈಲುಗಳ ನಡುವಿನ ಅಂತರ 25 ನಿಮಿಷದಿಂದ 19 ನಿಮಿಷಕ್ಕೆ ಇಳಿಕೆಯಾಗಿದೆ. ಆಗಸ್ಟ್ 10 ರಿಂದ ಮೂರು ರೈಲುಗಳೊಂದಿಗೆ ಕಾರ್ಯಾರಂಭ ಮಾಡಲಾಗಿತ್ತು. ಮೂರು ವಾರದ ಹಿಂದೆ ಕೊಲ್ಕತ್ತಾದ ತೀತಾಗಢ್ ರೈಲು ಫ್ಯಾಕ್ಟರಿಯಿಂದ ಈ ರೈಲು ಸೆಟ್ ಗಳು ಬೆಂಗಳೂರಿಗೆ ಬಂದು ಹೆಬ್ಬಗೋಡಿ ಡಿಪೋದಲ್ಲಿ ಜೋಡಣೆ ಮಾಡಲಾಗಿದೆ. ಕಳೆದ ವಾರದಿಂದ ರಾತ್ರಿ ರೈಲುಗಳ ಪ್ರಾಯೋಗಿಕ ಸಂಚಾರ ನಡೆಸಿ ಇದೀಗ ಪ್ರಯಾಣಿಕರ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.

ಹಳದಿ ಮಾರ್ಗದಲ್ಲಿ ಸೋಮವಾರದಿಂದ ಶನಿವಾರದವರೆಗೆ ಮೊದಲ ವಾಣಿಜ್ಯ ಸೇವೆ ಬೆಳಗ್ಗೆ 6 ಗಂಟೆಗೆ ಆರಂಭವಾಗಲಿದೆ. ಭಾನುವಾರ ಮೊದಲ ರೈಲು ಸೇವೆ ಬೆಳಗ್ಗೆ 7 ಗಂಟೆಗೆ ಶುರುವಾಗಲಿದೆ. ರಾತ್ರಿ ಕೊನೆಯ ರೈಲು ಸಮಯ ಎಂದಿನಂತೆ ಇರಲಿದ್ದು, ಆರ್.ವಿ. ರಸ್ತೆಯಿಂದ ರಾತ್ರಿ 11:55 ಕ್ಕೆ, ಬೊಮ್ಮಸಂದ್ರದಿಂದ ರಾತ್ರಿ 10:42ಕ್ಕೆ ಹೊರಡಲಿದೆ.

ಹಳದಿ ಮಾರ್ಗ ಆರಂಭವಾದ ದಿನದಿಂದ ಕೇವಲ 3 ರೈಲುಗಳು ಮಾತ್ರ ಸಂಚಾರ ನಡೆಸುತ್ತಿವೆ. ಪ್ರಯಾಣಿಕರಿಗೆ ಪ್ರತಿ 25 ನಿಮಿಷಕ್ಕೊಂದು ರೈಲು ಲಭ್ಯವಾಗುತ್ತಿತ್ತು. ಈ ಮಾರ್ಗದಲ್ಲಿ ಪ್ರಯಾಣಿಕರ ಸಂಖ್ಯೆ ಭಾರೀ ಹೆಚ್ಚಿದ್ದ ಕಾರಣ ದಟ್ಟಣೆ ಹೆಚ್ಚಿತ್ತು. ಸದ್ಯ ಒಂದು ರೈಲಿನಿಂದ ಇನ್ನೊಂದು ರೈಲಿನ ಅಂತರವು 19 ನಿಮಿಷಕ್ಕೆ ಇಳಿಕೆಯಾಗಿದೆ. ಜತೆಗೆ ಒಂದು ಹೆಚ್ಚುವರಿ ರೈಲು ಸಿಕ್ಕಿದೆ. ಇದರಿಂದ ಪ್ರಯಾಣಿಕರಿಗೆ ಕೊಂಚ ರಿಲೀಫ್‌ ಸಿಕ್ಕಂತಾಗಲಿದೆ.

ಹಳದಿ ಮಾರ್ಗದಲ್ಲಿ ನಿತ್ಯ 50 ರಿಂದ 60 ಸಾವಿರ ಮಂದಿ ಪ್ರಯಾಣ ಮಾಡುತ್ತಾರೆ. ಹೀಗಾಗಿ, ಪ್ರತಿ 5 ಅಥವಾ 10 ನಿಮಿಷಕ್ಕೊಂದು ರೈಲು ಓಡಿಸಬೇಕು ಎಂಬ ಬೇಡಿಕೆ ಇದೆ. ಸದ್ಯ ರೈಲುಗಳ ಕೊರತೆ ಇದ್ದು, 2026 ರಲ್ಲಿ ಹೆಚ್ಚಿನ ಸಂಖ್ಯೆಯ ರೈಲುಗಳು ಬರಲಿದ್ದು, ಆಗ ಪ್ರತಿ 10 ನಿಮಿಷಕ್ಕೆ ಒಂದ ರೈಲು ಓಡಿಸಲು ಬಿಎಂಆರ್‌ಸಿಎಲ್‌ ನಿರ್ಧರಿಸಿದೆ.

ಇದನ್ನೂ ಓದಿ: Namma Metro Yellow Line: ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಮುಂದಿನ ವಾರ ಬರಲಿದೆ ನಾಲ್ಕನೇ ರೈಲು

ಹರೀಶ್‌ ಕೇರ

View all posts by this author