Gana Movie: ಪ್ರಜ್ವಲ್ ದೇವರಾಜ್ ಅಭಿನಯದ ವಿಭಿನ್ನ ಕಥಾಹಂದರವುಳ್ಳ ‘ಗಣ’ ಚಿತ್ರ ಜ.31ಕ್ಕೆ ರಿಲೀಸ್
ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ ʼಗಣʼ ಚಿತ್ರ (Gana Movie) ರಾಜ್ಯಾದ್ಯಂತ ಜನವರಿ 31ರಂದು ಬಿಡುಗಡೆಯಾಗುತ್ತಿದೆ. ವಿಭಿನ್ನ ಕಂಟೆಂಟ್ ಹೊಂದಿರುವ ಈ ಚಿತ್ರ ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿದೆ. ಈ ಕುರಿತ ವಿವರ ಇಲ್ಲಿದೆ.
Vishwavani News
January 13, 2025
ಬೆಂಗಳೂರು: ದೇಶದೆಲ್ಲೆಡೆ ಜನವರಿ 26 ಗಣರಾಜ್ಯೋತ್ಸವದ ಸಂಭ್ರಮ. ಇದೇ ಸಂಭ್ರಮದ ಹೊಸ್ತಿಲಲ್ಲಿ ಅಂದರೆ ಜನವರಿ 31ರಂದು ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ನಾಯಕರಾಗಿ ನಟಿಸಿರುವ ʼಗಣʼ ಚಿತ್ರ (Gana Movie) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವಿಭಿನ್ನ ಕಂಟೆಂಟ್ ಹೊಂದಿರುವ ಈ ಚಿತ್ರ ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿದೆ.
ಚೆರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ಅವರು ನಿರ್ಮಿಸಿರುವ ಈ ಚಿತ್ರವನ್ನು ಹರಿಪ್ರಸಾದ್ ಜಕ್ಕ ನಿರ್ದೇಶಿಸಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಹರೀಶ್ ಕೊಮ್ಮೆ ಸಂಕಲನ, ಸತೀಶ್ ಎ ಕಲಾ ನಿರ್ದೇಶನ ಹಾಗೂ ಡಿ.ಜೆ ಕ್ರಿಯೇಟಿವ್ ಪ್ರೊಡ್ಯೂಸರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಚಿಕ್ಕಬಳ್ಳಾಪುರ ಶ್ರೀನಿವಾಸ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.
ಈ ಸುದ್ದಿಯನ್ನೂ ಓದಿ | Winter Fashion 2025: ಚಳಿಗಾಲದ ಟಾಪ್ ಲಿಸ್ಟ್‌ಗೆ ಸೇರಿದ ಬ್ರೈಟ್ ಬಣ್ಣದ ಫ್ಯಾಷನ್‌ವೇರ್ಸ್!
ಪ್ರಜ್ವಲ್ ದೇವರಾಜ್, ಯಶಾ ಶಿವಕುಮಾರ್, ವೇದಿಕಾ ಕುಮಾರ್, ಕೃಷಿ ತಾಪಂಡ, ವಿಶಾಲ್ ಹೆಗಡೆ, ರವಿ ಕಾಳೆ, ಸಂಪತ್ ರಾಜ್, ಶಿವರಾಜ್ ಕೆ.ಆರ್ ಪೇಟೆ, ರಮೇಶ್ ಭಟ್ ಮುಂತಾದವರು ʼಗಣʼ ಚಿತ್ರದ ತಾರಾಬಳಗದಲ್ಲಿದ್ದಾರೆ.