ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಹೊತ್ತಿ ಉರಿದ ಗ್ಯಾರೇಜ್‌ 20ಕ್ಕೂ ಹೆಚ್ಚು ಕಾರು, 8 ಆಟೋಗಳು ಸುಟ್ಟು ಕರಕಲು

Fire Accident: ಬೆಂಗಳೂರಿನ ಥಣಿಸಂದ್ರದ ಗ್ಯಾರೇಜ್‌ ಒಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 20ಕ್ಕೂ ಹೆಚ್ಚು ಕಾರುಗಳು ಹಾಗೂ 8 ಆಟೋಗಳು ಸುಟ್ಟು ಕರಕಲಾಗಿವೆ. ಥಣಿಸಂದ್ರ ಮುಖ್ಯರಸ್ತೆಯ ಭಾರತಿಯ ಸಿಟಿ ಬಳಿ ಇರುವ ಗ್ಯಾರೇಜ್‌ನಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ.

ಸಂಗ್ರಹ ಚಿತ್ರ

ಬೆಂಗಳೂರು: ಥಣಿಸಂದ್ರದ ಗ್ಯಾರೇಜ್‌ (Garage) ಒಂದರಲ್ಲಿ ಭಾರಿ ಅಗ್ನಿ ಅವಘಡ (Fire Accident) ಸಂಭವಿಸಿದ್ದು, ಸುಮಾರು 20ಕ್ಕೂ ಹೆಚ್ಚು ಕಾರುಗಳು ಹಾಗೂ 8 ಆಟೋಗಳು ಸುಟ್ಟು ಕರಕಲಾಗಿವೆ. ಥಣಿಸಂದ್ರ ಮುಖ್ಯರಸ್ತೆಯ ಭಾರತಿಯ ಸಿಟಿ ಬಳಿ ಇರುವ ಗ್ಯಾರೇಜ್‌ನಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಅಗ್ನಿ ಅವಘಡದಲ್ಲಿ ಸಣ್ಣಪುಟ್ಟ ರಿಪೇರಿಗೆ ತಂದಿದ್ದ 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿವೆ. ಜಾಗ್ವಾರ್, ರೇಂಜ್ ರೋವರ್ ಕಾರುಗಳಿಗೂ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಪಕ್ಕದ ಶೆಡ್‌ಗೂ ಬೆಂಕಿ ತಗುಲಿದ್ದು, ಅಲ್ಲಿ ನಿಲ್ಲಿಸಿದ್ದ ಸುಮಾರು 8 ಆಟೋಗಳು ಅಗ್ನಿಗೆ ಆಹುತಿಯಾಗಿವೆ. ಅಲ್ಲದೇ ಕಾರು ಗ್ಯಾರೇಜ್ ಸಮೀಪದ ಯುಪಿವಿಸಿ ಕಿಟಕಿ ಫ್ಯಾಕ್ಟರಿಗೂ ಬೆಂಕಿ ತಗುಲಿದೆ. ಇದರಿಂದ ಫ್ಯಾಕ್ಟರಿಯಲ್ಲಿದ್ದ 2 ಲಕ್ಷ ರೂ. ಮೌಲ್ಯದ ಗ್ರಾಹಕರ ಕಿಟಕಿ ವಸ್ತುಗಳು, ಹಾಗೂ 4 ಲಕ್ಷ ರೂ. ಮೌಲ್ಯದ ಫ್ಯಾಕ್ಟರಿ ಯಂತ್ರಕ್ಕೆ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಂಕಿ ಅವಘಡಕ್ಕೆ ನಿಖರ ಕಾರಣವೇನು ಎಂಬ ಕುರಿತು ತನಿಖೆ ಮುಂದುವರಿಸಿದ್ದಾರೆ.

ಖಾಸಗಿ ಬಸ್‌ ಬೆಂಕಿಗಾಹುತಿ

ಬೆಂಗಳೂರು ನಗರ ಹೊರವಲಯದ ಆನೇಕಲ್ ತಾಲ್ಲೂಕಿನ ಹಳೆ ಚಂದಾಪುರ ಸಮೀಪ ಭಾನುವಾರ ಮಧ್ಯಾಹ್ನ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ನಾಲ್ಕು ಖಾಸಗಿ ಬಸ್‌ಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಘಟನೆಯಿಂದ ಸ್ಥಳೀಯ ನಿವಾಸಿಗಳು ಹಾಗೂ ಸಂಚಾರಿಗರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಭಾನುವಾರ ಮಧ್ಯಾಹ್ನ ಸುಮಾರು 3.10 ಗಂಟೆ ವೇಳೆಗೆ ನಿಲ್ಲಿಸಿದ್ದ ನಾಲ್ಕು ಖಾಸಗಿ ಬಸ್‌ಗಳಿಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಅಗ್ನಿಜ್ವಾಲೆಗಳು ಬಸ್‌ಗಳನ್ನು ಸಂಪೂರ್ಣ ಆವರಿಸಿವೆ.

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಬೆಂಕಿ ಅವಘಡ; ಆಪರೇಷನ್ ಥಿಯೇಟರ್​ನಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ

ಪ್ರತ್ಯಕ್ಷದರ್ಶಿಗಳ ಪ್ರಕಾರ, ಬೆಂಕಿಯಿಂದ ದಟ್ಟ ಹೊಗೆ ಆಕಾಶದೆತ್ತರಕ್ಕೆ ಏರಿದ್ದು, ದೂರದ ಪ್ರದೇಶಗಳಿಂದಲೂ ಹೊಗೆ ಗೋಚರಿಸಿತು. ಇದರಿಂದ ಸುತ್ತಮುತ್ತಲಿನ ಜನರಲ್ಲಿ ಭಯದ ವಾತಾವರಣ ಉಂಟಾಗಿತ್ತು.

Vishakha Bhat Heggar

View all posts by this author