ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಬೆಂಗಳೂರಿನ ರಸ್ತೆ ಬದಿ ಕಸ ಸುರಿಯುವ ವಿಡಿಯೊ ವೈರಲ್‌ ಆದ ಬೆನ್ನಲ್ಲೇ ಬಿತ್ತು ಫೈನ್‌; ಕಿರಣ್ ಮಜುಂದಾರ್ ಶಾ ಅಸಮಾಧಾನಗೊಂಡಿದ್ದೇಕೆ?

ಇತ್ತೀಚೆಗೆ ನಗರ ಪ್ರದೇಶದಲ್ಲಿ ಎಲ್ಲೆಂದರಲ್ಲಿ ಕಸ ಹಾಕುತ್ತಿರುವ ಪ್ರಮಾಣ ಹೆಚ್ಚಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಎಷ್ಟೇ ಎಚ್ಚರಿಕೆ ನೀಡಿದರೂ ಪದೇ ಪದೇ ತ್ಯಾಜ್ಯ ನಿರ್ವಹಣೆಯಲ್ಲಿ ಉಲ್ಲಂಘನೆಗಳು ಹೆಚ್ಚಾಗುತ್ತಿದೆ. ಇದೀ‌ಗ ಬೆಂಗಳೂರು ನಗರದ ಸರ್ವಜ್ಞನಗರ ವಿಭಾಗದ ರಸ್ತೆಯಲ್ಲಿ ಇಬ್ಬರು ವ್ಯಕ್ತಿಗಳು ಕಸವನ್ನು ಎಸೆದು ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಈ ವಿಚಾರ ತಿಳಿದ ಅಧಿಕಾರಿಗಳು ವಾಹನ ಮಾಲೀಕರಿಗೆ ಐದು ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.

ರಸ್ತೆಗೆ ಕಸ ಎಸೆದವರಿಗೆ ತಕ್ಕ ಶಾಸ್ತ್ರಿ: ಐದು ಸಾವಿರ ದಂಡ ವಿಧಿಸಿದ ಅಧಿಕಾರಿ

ಬೆಂಗಳೂರಿನಲ್ಲಿ ರಸ್ತೆ ಬದಿ ಕಸ ಎಸೆದ ಅನಾಗರಿಕರು -

Profile
Pushpa Kumari Dec 12, 2025 3:57 PM

ಬೆಂಗಳೂರು, ಡಿ. 12: ಕಸ ವಿಲೇವಾರಿ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸಿದರೂ ಸಮಸ್ಯೆಯಂತೂ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಎಲ್ಲೆಂದರಲ್ಲಿ ಮನ ಬಂದ ಕಡೆ ಕಸ ಸುರಿಯುವ ಅನಾಗರಿಕರ ಸಂಖ್ಯೆಗಂತು ಕಡಿಮೆ ಇಲ್ಲ.. ಅಂತಹುದೇ ಘಟನೆಯೊಂದು ಬೆಂಗಳೂರಿನ ಸರ್ವಜ್ಞನಗರ ವಿಭಾಗದ ವಾರ್ಡ್‌ನಲ್ಲಿ ನಡೆದಿದೆ. ಎಸ್‌ಯುವಿ ವಾಹನವೊಂದರಲ್ಲಿ ಬಂದ ಇಬ್ಬರು ರಸ್ತೆ ಬದಿಯಲ್ಲಿ ಕಸ ಸುರಿಯುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಈ ಸಂಬಂಧ ಅಧಿಕಾರಿಗಳು ವಾಹನ ಮಾಲೀಕರಿಗೆ ದಂಡದ ಬಿಸಿ ಮುಟ್ಟಿಸಿದ್ದಾರೆ. ಕಸ ಎಸೆಯುತ್ತಿದ್ದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Viral Video) ಆಗಿದ್ದು, ಇದನ್ನು ಗಮನಿಸಿದ ಬೆಂಗಳೂರು ಉತ್ತರ ನಗರ ನಿಗಮ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ತಕ್ಷಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಆ ಮೂಲಕ ಬಿಸಿ ಮುಟ್ಟಿಸಿದ್ದಾರೆ.

ಇತ್ತೀಚೆಗೆ ನಗರ ಪ್ರದೇಶದಲ್ಲಿ ಎಲ್ಲೆಂದರಲ್ಲಿ ಕಸ ಹಾಕುತ್ತಿರುವ ಪ್ರಮಾಣ ಹೆಚ್ಚಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಎಷ್ಟೇ ಎಚ್ಚರಿಕೆ ನೀಡಿದರೂ ತ್ಯಾಜ್ಯ ನಿರ್ವಹಣೆಯಲ್ಲಿ ಉಲ್ಲಂಘನೆ ನಡೆಯುತ್ತಲೇ ಇದೆ. ಇದೀ‌ಗ ಬೆಂಗಳೂರು ನಗರದ ಸರ್ವಜ್ಞನಗರ ವಿಭಾಗದ ರಸ್ತೆಯಲ್ಲಿ ಇಬ್ಬರು ಕಸವನ್ನು ಎಸೆದು ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಈ ವಿಚಾರ ತಿಳಿದ ಅಧಿಕಾರಿಗಳು ವಾಹನ ಮಾಲೀಕರಿಗೆ ಐದು ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ. ಸಾರ್ವಜನಿಕವಾಗಿ ಕಸ ಬೀಸಾಕುವುದು ಶಿಕ್ಷಾರ್ಹ ಅಪರಾಧವಾಗಿದ್ದರೂ, ಸರ್ವಜ್ಞನಗರ ವಿಭಾಗದ ವಾರ್ಡ್ 29ರಲ್ಲಿ ರಸ್ತೆಗೆ ಕಸ ಎಸೆದಿದ್ದಾರೆ. ಈ ವಿಡಿಯೊ ವೈರಲ್ ಆದ ಕೂಡಲೇ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ತಮ್ಮ ತಂಡಕ್ಕೆ ತ್ವರಿತ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದ್ದಾರೆ. ಈ ಸಂದರ್ಭದಲ್ಲಿ ಅಧಿಕಾರಿಗಳು ಶೀಘ್ರದಲ್ಲೇ ವಾಹನವನ್ನು ಪತ್ತೆ‌ ಹಚ್ಚಿ ಕಲ್ಯಾಣ್ ನಗರದಲ್ಲಿ ಮಾಲೀಕರ ವಿಳಾಸವನ್ನು ಪತ್ತೆ ಹಚ್ಚಿದ್ದಾರೆ.

ವಿಡಿಯೊ ನೋಡಿ:



ಸದ್ಯ ಈ ಕೃತ್ಯ ನೋಡಿದ ನೆಟ್ಟಿಗರು ಹತಾಶೆ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಇಂದು ಕಸ ವಿಲೇವಾರಿಗೆ ಸಮರ್ಪಕ ವ್ಯವಸ್ಥೆ ಇದೆ. ಹೀಗಿದ್ದರೂ ಇಲ್ಲಿ ನಿಯಮ ಉಲ್ಲಂಘನೆ ಮಾಡುವವರು ಇದ್ದಾರೆ ಎಂದು ಕಿಡಿಕಾರಿದ್ದಾರೆ. ತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 5,000 ರೂ. ದಂಡ ವಿಧಿಸಲಾಗಿದೆ‌. ಕಿರಣ್ ಮಜುಂದಾರ್ ಶಾ ಕೇವಲ ಐದು ಸಾವಿರ ದಂಡ ವಿಧಿಸಿದ್ದಕ್ಕಾಗಿ ತೀವ್ರವಾಗಿ ಟೀಕಿಸಿದ್ದಾರೆ. ಈ ಕುರಿತು ಅವರು ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದು "ದಂಡದ ಮೊತ್ತ ಹೆಚ್ಚಾಗಬೇಕು. ಇಲ್ಲದಿದ್ದರೆ ಇದನ್ನು ಯಾರು ಕೂಡ ಗಂಭೀರವಾಗಿ ಪರಿಗಣಿಸುವುದಿಲ್ಲ. ಇಂತವರಿಗೆ ಕನಿಷ್ಠ 50,000 ರೂ. ದಂಡ ವಿಧಿಸಬೇಕಿತ್ತು. ದಂಡ ಮೊತ್ತ ನೀಡುವವರೆಗೆ ವಾಹನವನ್ನು ಮುಟ್ಟುಗೋಲು ಹಾಕಿಕೊಳ್ಳಬೇಕಿತ್ತುʼʼ ಎಂದು ಕಿಡಿಕಾರಿದ್ದಾರೆ

ಪಾಕಿಸ್ತಾನಿ ಮದುವೆಯಲ್ಲಿ ಧುರಂಧರ್ ಸಿನಿಮಾದ ಹವಾ; ಭರ್ಜರಿ ಸೆಪ್ಟ್ ಹಾಕಿದ ಯುವಕರು

ಈ ಬಗ್ಗೆ ನೆಟ್ಟಿಗರು ಕೂಡ ನಾನಾ ಬಗೆಯ ಪ್ರತಿಕ್ರಿಯೆ ನೀಡಿದ್ದಾರೆ. ಬಳಕೆದಾರರೊಬ್ಬರು ಈ ರೀತಿಯ ಅನಾಗರಿಕರು ನಮ್ಮ ದೇಶದಲ್ಲಿ ಇದ್ದಾರೆ ಎಂದು ಬರೆದುಕೊಂಡಿದ್ದಾರೆ. ಮತ್ತೊಬ್ಬರು ಕಸ ಹಾಕುವವರನ್ನು ದೂಷಿಸುವ ಬದಲು, ಮೊದಲು ಬಿಬಿಎಂಪಿಯು ಕಸ ಸಂಗ್ರಹಣೆ ಮತ್ತು ವಿಲೇವಾರಿ ವ್ಯವಸ್ಥೆಯನ್ನು ಸರಿಯಾಗಿ ನಿಭಾಯಿಸಬೇಕು‌. ಸರಿಯಾದ ಸೌಲಭ್ಯಗಳನ್ನು ನಾಗರಿಕರಿಗೆ ಒದಗಿಸದಿದ್ದರೆ ಮತ್ತೆ ದಂಡ ಏಕೆ ಎಂದು ಅಧಿಕಾರಿಗಳಿಗೆ ಪ್ರಶ್ನೆ ಮಾಡಿದ್ದಾರೆ.