KAS Prelims Answer Key 2026: ಕೆಎಎಸ್ ಪೂರ್ವಭಾವಿ ಪರೀಕ್ಷೆ ಕೀ ಉತ್ತರಗಳು ಪ್ರಕಟ; ಹೀಗೆ ಚೆಕ್ ಮಾಡಿ
KPSC Gazetted Probationers Preliminary Exam: ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ಬೆಂಗಳೂರು ಸೇರಿ ರಾಜ್ಯದ ಒಟ್ಟು 15 ಜಿಲ್ಲಾ ಕೇಂದ್ರಗಳಲ್ಲಿ ನ.15ರಂದು ನಡೆಸಲಾಗಿತ್ತು. ಇದೀಗ ಕೀ-ಉತ್ತರಗಳನ್ನು ಕೆಪಿಎಸ್ಸಿ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಅಲ್ಲದೇ ಪ್ರಕಟಿತ ಕೀ-ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.
-
ಬೆಂಗಳೂರು: 2026-27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ 319 (297+22 ಹೈ.ಕ.) ಹುದ್ದೆಗಳ ನೇಮಕಾತಿಗೆ ನಡೆಸಿದ ಪೂರ್ವಭಾವಿ ಪರೀಕ್ಷೆಯ (KAS Prelims Answer Key 2026) ಪತ್ರಿಕೆ-1 ಮತ್ತು ಪತ್ರಿಕೆ-2ರ ಕೀ-ಉತ್ತರಗಳನ್ನು ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) ಸೋಮವಾರ ಪ್ರಕಟಿಸಿದೆ. ಅಭ್ಯರ್ಥಿಗಳು ಕೆಪಿಎಸ್ಸಿ ವೆಬ್ಸೈಟ್ನಲ್ಲಿ ಕೀ ಉತ್ತರಗಳನ್ನು ವೀಕ್ಷಿಸಬಹುದು.
ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ಬೆಂಗಳೂರು ಸೇರಿ ಒಟ್ಟು 15 ಜಿಲ್ಲಾ ಕೇಂದ್ರಗಳಲ್ಲಿ ನ.15ರಂದು ನಡೆಸಲಾಗಿತ್ತು. ಇದೀಗ ಕೀ-ಉತ್ತರಗಳನ್ನು ಆಯೋಗದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಪ್ರಕಟಿತ ಕೀ-ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಆಯೋಗದ ವೆಬ್ಸೈಟ್ನಲ್ಲಿ https://cetonline.karnataka.gov.in/kpscobjection/forms/login.aspx ಮೂಲಕ ನ.19ರ ಬೆಳಿಗ್ಗೆ 10:30ರೊಳಗೆ ಸಲ್ಲಿಸಬಹುದು.
ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆಯ ವಿವರ, ಪ್ರಶ್ನೆಪತ್ರಿಕೆ ವರ್ಷನ್ ಕೋಡ್, ಪ್ರಶ್ನೆ ಸಂಖ್ಯೆ ಹಾಗೂ ಪೂರಕ ದಾಖಲೆಗಳನ್ನು PDF (1 MBಗೆ ಸೀಮಿತವಾಗಿರುತ್ತದೆ) ರೂಪದಲ್ಲಿ ಸಲ್ಲಿಸಬೇಕು. ಸಲ್ಲಿಸಲಾಗುವ ಪ್ರತಿ ಆಕ್ಷೇಪಣೆಗೆ 50 ರೂ. ಪಾವತಿಸಬೇಕು. ಅಪೂರ್ಣ/ ಆಧಾರರಹಿತವಾಗಿರುವ ಹಾಗೂ ಶುಲ್ಕ ಪಾವತಿಸದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ವಿಷಯ ತಜ್ಞರ ಸಮಿತಿಯು ಆಕ್ಷೇಪಣೆಗಳನ್ನು ಪರಿಶೀಲಿಸಿ, ತೀರ್ಮಾನಿಸುವ ಕೀ-ಉತ್ತರಗಳು ಅಂತಿಮವಾಗಿರುತ್ತದೆ ಎಂದು ಕರ್ನಾಟಕ ಲೋಕಸೇವಾ ಆಯೋಗ ತಿಳಿಸಿದೆ.
ಕೆಎಎಸ್ ಪೂರ್ವಭಾವಿ ಪರೀಕ್ಷೆ ಕೀ ಉತ್ತರಗಳಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಕೆಎಎಸ್ ಪ್ರಿಲಿಮ್ಸ್ ಪರೀಕ್ಷೆಗೆ ಶೇ.59ರಷ್ಟು ಅಭ್ಯರ್ಥಿಗಳು ಹಾಜರು
319 ಕೆಎಎಸ್ ಗೆಜೆಟ್ ಪ್ರೊಬೆಷನರಿ ಪ್ರಿಲಿಮ್ಸ್ ಪರೀಕ್ಷೆಗೆ ಒಟ್ಟು 1,47,067 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ 1,14,406 ಅಭ್ಯರ್ಥಿಗಳು ಪ್ರವೇಶಪತ್ರ ಹಾಲ್ ಟಿಕೆಟ್) ಡೌನ್ಲೋಡ್ ಮಾಡಿಕೊಂಡಿದ್ದರು. ಆದರೆ, ನ.15ರಂದು ನಡೆದ ಪೂರ್ವಭಾವಿ ಪರೀಕ್ಷೆಗೆ ಶೇ.59ರಷ್ಟು ಅಭ್ಯರ್ಥಿಗಳು ಅಂದರೆ 87,260 ಅಭ್ಯರ್ಥಿಗಳು ಮಾತ್ರ ಪರೀಕ್ಷೆ ಹಾಜರಾಗಿದ್ದರು. ಇನ್ನುಳಿದ 59,807 ಅಭ್ಯರ್ಥಿಗಳು ಗೈರಾಗಿದ್ದರು. ಪ್ರವೇಶಪತ್ರ ಡೌನ್ಲೋಡ್ ಮಾಡಿದ್ದರೂ 27,146 ಅಭ್ಯರ್ಥಿಗಳು ಪರೀಕ್ಷಗೆ ಹಾಜರಾಗಿಲ್ಲ.
ರಾಜ್ಯದ 15 ಜಿಲ್ಲೆಗಳ 345 ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕಲು ಈ ಬಾರಿ ಹೆಚ್ಚಿನ ಪೊಲೀಸರನ್ನು ಭದ್ರತೆೆ, ತಪಾಸಣೆಗೆ ನಿಯೋಜಿಸಲಾಗಿತ್ತು. ಪರೀಕ್ಷಾ ಕೊಠಡಿಗಳ ಹೊರ ಹಾಗೂ ಒಳ ಭಾಗದಲ್ಲಿ ಸಿಸಿಟಿವಿ ಅಳವಡಿಸಲಾಗಿತ್ತು. ಪ್ರತಿ ಕೊಠಡಿಗೂ ಇಬ್ಬರೂ ಮೇಲ್ವಿಚಾರಕರನ್ನು ನಿಯೋಜನೆ ಮಾಡಲಾಗಿತ್ತು.