ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

KAS Prelims Answer Key 2026: ಕೆಎಎಸ್ ಪೂರ್ವಭಾವಿ ಪರೀಕ್ಷೆ ಕೀ ಉತ್ತರಗಳು ಪ್ರಕಟ; ಹೀಗೆ ಚೆಕ್‌ ಮಾಡಿ

KPSC Gazetted Probationers Preliminary Exam: ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ಬೆಂಗಳೂರು ಸೇರಿ ರಾಜ್ಯದ ಒಟ್ಟು 15 ಜಿಲ್ಲಾ ಕೇಂದ್ರಗಳಲ್ಲಿ ನ.15ರಂದು ನಡೆಸಲಾಗಿತ್ತು. ಇದೀಗ ಕೀ-ಉತ್ತರಗಳನ್ನು ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅಲ್ಲದೇ ಪ್ರಕಟಿತ ಕೀ-ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.

ಬೆಂಗಳೂರು: 2026-27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ 319 (297+22 ಹೈ.ಕ.) ಹುದ್ದೆಗಳ ನೇಮಕಾತಿಗೆ ನಡೆಸಿದ ಪೂರ್ವಭಾವಿ ಪರೀಕ್ಷೆಯ (KAS Prelims Answer Key 2026) ಪತ್ರಿಕೆ-1 ಮತ್ತು ಪತ್ರಿಕೆ-2ರ ಕೀ-ಉತ್ತರಗಳನ್ನು ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಸೋಮವಾರ ಪ್ರಕಟಿಸಿದೆ. ಅಭ್ಯರ್ಥಿಗಳು ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಕೀ ಉತ್ತರಗಳನ್ನು ವೀಕ್ಷಿಸಬಹುದು.

ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ಬೆಂಗಳೂರು ಸೇರಿ ಒಟ್ಟು 15 ಜಿಲ್ಲಾ ಕೇಂದ್ರಗಳಲ್ಲಿ ನ.15ರಂದು ನಡೆಸಲಾಗಿತ್ತು. ಇದೀಗ ಕೀ-ಉತ್ತರಗಳನ್ನು ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಪ್ರಕಟಿತ ಕೀ-ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ನಲ್ಲಿ https://cetonline.karnataka.gov.in/kpscobjection/forms/login.aspx ಮೂಲಕ ನ.19ರ ಬೆಳಿಗ್ಗೆ 10:30ರೊಳಗೆ ಸಲ್ಲಿಸಬಹುದು.

ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆಯ ವಿವರ, ಪ್ರಶ್ನೆಪತ್ರಿಕೆ ವರ್ಷನ್ ಕೋಡ್, ಪ್ರಶ್ನೆ ಸಂಖ್ಯೆ ಹಾಗೂ ಪೂರಕ ದಾಖಲೆಗಳನ್ನು PDF (1 MBಗೆ ಸೀಮಿತವಾಗಿರುತ್ತದೆ) ರೂಪದಲ್ಲಿ ಸಲ್ಲಿಸಬೇಕು. ಸಲ್ಲಿಸಲಾಗುವ ಪ್ರತಿ ಆಕ್ಷೇಪಣೆಗೆ 50 ರೂ. ಪಾವತಿಸಬೇಕು. ಅಪೂರ್ಣ/ ಆಧಾರರಹಿತವಾಗಿರುವ ಹಾಗೂ ಶುಲ್ಕ ಪಾವತಿಸದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ವಿಷಯ ತಜ್ಞರ ಸಮಿತಿಯು ಆಕ್ಷೇಪಣೆಗಳನ್ನು ಪರಿಶೀಲಿಸಿ, ತೀರ್ಮಾನಿಸುವ ಕೀ-ಉತ್ತರಗಳು ಅಂತಿಮವಾಗಿರುತ್ತದೆ ಎಂದು ಕರ್ನಾಟಕ ಲೋಕಸೇವಾ ಆಯೋಗ ತಿಳಿಸಿದೆ.

ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಕೀ ಉತ್ತರಗಳಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

https://kpsc.karnataka.gov.in/186/answer-keys/kn

ಕೆಎಎಸ್‌ ಪ್ರಿಲಿಮ್ಸ್‌ ಪರೀಕ್ಷೆಗೆ ಶೇ.59ರಷ್ಟು ಅಭ್ಯರ್ಥಿಗಳು ಹಾಜರು

319 ಕೆಎಎಸ್ ಗೆಜೆಟ್ ಪ್ರೊಬೆಷನರಿ ಪ್ರಿಲಿಮ್ಸ್ ಪರೀಕ್ಷೆಗೆ ಒಟ್ಟು 1,47,067 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ 1,14,406 ಅಭ್ಯರ್ಥಿಗಳು ಪ್ರವೇಶಪತ್ರ ಹಾಲ್ ಟಿಕೆಟ್) ಡೌನ್​ಲೋಡ್ ಮಾಡಿಕೊಂಡಿದ್ದರು. ಆದರೆ, ನ.15ರಂದು ನಡೆದ ಪೂರ್ವಭಾವಿ ಪರೀಕ್ಷೆಗೆ ಶೇ.59ರಷ್ಟು ಅಭ್ಯರ್ಥಿಗಳು ಅಂದರೆ 87,260 ಅಭ್ಯರ್ಥಿಗಳು ಮಾತ್ರ ಪರೀಕ್ಷೆ ಹಾಜರಾಗಿದ್ದರು. ಇನ್ನುಳಿದ 59,807 ಅಭ್ಯರ್ಥಿಗಳು ಗೈರಾಗಿದ್ದರು. ಪ್ರವೇಶಪತ್ರ ಡೌನ್​ಲೋಡ್ ಮಾಡಿದ್ದರೂ 27,146 ಅಭ್ಯರ್ಥಿಗಳು ಪರೀಕ್ಷಗೆ ಹಾಜರಾಗಿಲ್ಲ.

ರಾಜ್ಯದ 15 ಜಿಲ್ಲೆಗಳ 345 ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕಲು ಈ ಬಾರಿ ಹೆಚ್ಚಿನ ಪೊಲೀಸರನ್ನು ಭದ್ರತೆೆ, ತಪಾಸಣೆಗೆ ನಿಯೋಜಿಸಲಾಗಿತ್ತು. ಪರೀಕ್ಷಾ ಕೊಠಡಿಗಳ ಹೊರ ಹಾಗೂ ಒಳ ಭಾಗದಲ್ಲಿ ಸಿಸಿಟಿವಿ ಅಳವಡಿಸಲಾಗಿತ್ತು. ಪ್ರತಿ ಕೊಠಡಿಗೂ ಇಬ್ಬರೂ ಮೇಲ್ವಿಚಾರಕರನ್ನು ನಿಯೋಜನೆ ಮಾಡಲಾಗಿತ್ತು.