Gold Price Today: ಇಂದು ಕೂಡ ಚಿನ್ನದ ದರದಲ್ಲಿ ಕೊಂಚ ಏರಿಕೆ; ಇಂದಿನ ರೇಟ್‌ ಹೀಗಿದೆ

Gold Price Today:22 ಕ್ಯಾರಟ್‌ನ 8 ಗ್ರಾಂ ಚಿನ್ನ 58,286 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 72,860 ರೂ. ಮತ್ತು 100 ಗ್ರಾಂಗೆ 7,28,600 ರೂ. ಪಾವತಿಸಬೇಕಾಗುತ್ತದೆ.

image-97339c74-71df-4aab-b76f-c50b715c7d64.jpg
Profile Rakshita Karkera January 11, 2025
ಬೆಂಗಳೂರು: ಚಿನ್ನದ ದರದಲ್ಲಿ ಇಂದು ಕೂಡ ಕೊಂಚ ಏರಿಕೆ ಕಂಡುಬಂದಿದೆ(Gold Price Today). ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು(ಡಿ.11) 22 ಕ್ಯಾರಟ್‌ 1 ಗ್ರಾಂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 1 ರೂ. ಅಧಿಕವಾಗಿತ್ತು. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,286 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,948 ರೂ.ಗೆ ತಲುಪಿದೆ. 22 ಕ್ಯಾರಟ್‌ ಚಿನ್ನದ ದರಗಳ ವಿವರ 22 ಕ್ಯಾರಟ್‌ನ 8 ಗ್ರಾಂ ಚಿನ್ನ 58,286 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 72,860 ರೂ. ಮತ್ತು 100 ಗ್ರಾಂಗೆ 7,28,600 ರೂ. ಪಾವತಿಸಬೇಕಾಗುತ್ತದೆ. 24 ಕ್ಯಾರಟ್‌ ಚಿನ್ನದ ದರಗಳ ವಿವರ 24 ಕ್ಯಾರಟ್‌ನ 8 ಗ್ರಾಂ ಚಿನ್ನ 63,584 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 79,480 ರೂ. ಮತ್ತು 100 ಗ್ರಾಂಗೆ 7,94,800 ರೂ. ಪಾವತಿಸಬೇಕಾಗುತ್ತದೆ. ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ ನಗರ 22 ಕ್ಯಾರಟ್‌ (1 ಗ್ರಾಂ) 24 ಕ್ಯಾರಟ್‌ (1 ಗ್ರಾಂ) ಬೆಂಗಳೂರು7,286 ರೂ.7,948 ರೂ. ದಿಲ್ಲಿ7,301 ರೂ.7,963 ರೂ. ಮುಂಬೈ7,286 ರೂ.7,948 ರೂ. ಚೆನ್ನೈ7,286 ರೂ.7,948 ರೂ. ಹೈದರಾಬಾದ್7,286 ರೂ.7,948 ರೂ. ಇತ್ತ ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡುಬಂದಿದೆ. ಬೆಳ್ಳಿ 1 ಗ್ರಾಂನ ಬೆಲೆ 93.50 ರೂ., 8 ಗ್ರಾಂಗೆ 748ರೂ., 10 ಗ್ರಾಂಗೆ 935 ರೂ. ಮತ್ತು 1 ಕೆಜಿಗೆ 93,500 ರೂ. ಪಾವತಿಸಬೇಕಾಗುತ್ತದೆ. ಚಿನ್ನದ ಬೆಲೆ ಮೇಲೆ ಪರಿಣಾಮ ಬೀರುವ ಅಂಶಗಳು ಶತಮಾನಗಳಿಂದ ಚಿನ್ನವು ಭಾರತೀಯ ಸಂಸ್ಕೃತಿ ಮತ್ತು ಅರ್ಥಶಾಸ್ತ್ರದ ಪ್ರಮುಖ ಭಾಗವಾಗಿ ಗುರುತಿಸಿಕೊಂಡಿದೆ. ದೇಶದಲ್ಲಿ ಆಭರಣವಾಗಿ ಮಾತ್ರವಲ್ಲ ಹೂಡಿಕೆಗೂ ಚಿನ್ನ ಬಳಕೆಯಾಗುತ್ತಿದೆ. ಭಾರತದಲ್ಲಿ ಪ್ರತಿ ದಿನ ಚಿನ್ನದ ದರದಲ್ಲಿ ಏರಿಳಿತ ಕಂಡು ಬರುತ್ತದೆ. ಅದಕ್ಕೆ ಕಾರಣವೇನು? ಚಿನ್ನದ ದರದ ಮೇಲೆ ಪ್ರಭಾವ ಬೀರುವ ಅಂಶಗಳು ಯಾವುವು? ಎನ್ನುವ ವಿವರ ಇಲ್ಲಿದೆ. ಜಾಗತಿಕ ಮಾರುಕಟ್ಟೆಯ ಪ್ರಭಾವ: ಜಾಗತಿಕ ಚಿನ್ನದ ಮಾರುಕಟ್ಟೆಯ ಏರಿಳಿತ ಭಾರತದಲ್ಲಿ ಚಿನ್ನದ ದರವನ್ನು ನಿರ್ಧರಿಸುವಲ್ಲಿ ಪ್ರದಾನ ಪಾತ್ರವಹಿಸುತ್ತದೆ. ಭೌಗೋಳಿಕ ರಾಜಕೀಯ ಘಟನೆಗಳು, ಆರ್ಥಿಕ ಪರಿಸ್ಥಿತಿಗಳು ಮತ್ತು ಕರೆನ್ಸಿ ಏರಿಳಿತಗಳಂತಹ ಅಂಶಗಳು ಚಿನ್ನದ ದರದ ಮೇಲೆ ನೇರ ಪರಿಣಾಮ ಬೀರುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಗಳು ಅನಿಶ್ಚಿತತೆಗೆ ಒಳಗಾದಾಗ ಹೂಡಿಕೆದಾರರು ಹೆಚ್ಚಾಗಿ ಚಿನ್ನದತ್ತ ಮುಖ ಮಾಡುತ್ತಾರೆ. ಇದು ಬೆಲೆ ಹೆಚ್ಚಳಕ್ಕೆ ಕಾರಣವಾಗುತ್ತದೆ. ಬೇಡಿಕೆ ಮತ್ತು ಪೂರೈಕೆ: ಭಾರತದಲ್ಲಿ ಚಿನ್ನವು ಅಮೂಲ್ಯ ಲೋಹ ಮಾತ್ರವಲ್ಲ ಸಂಸ್ಕೃತಿಯ ಸಂಕೇತವೂ ಹೌದು. ಹೀಗಾಗಿ ಹಬ್ಬಗಳು ಮತ್ತು ಮದುವೆ ಋತುವಿನಲ್ಲಿ ಚಿನ್ನಾಭರಣಗಳಿಗೆ ಬೇಡಿಕೆ ಹೆಚ್ಚಾಗಿ ದರದ ಏರಿಳಿತಗಳಿಗೆ ಕಾರಣವಾಗುತ್ತದೆ. ಜತೆಗೆ ಪೂರೈಕೆಯಲ್ಲಿನ ಅಡೆತಡೆಗಳು ಮತ್ತು ಆಮದು ಸುಂಕದಲ್ಲಿನ ಬದಲಾವಣೆಗಳು ಸ್ಥಳೀಯ ಚಿನ್ನದ ಬೆಲೆಗಳ ಮೇಲೆ ಪರಿಣಾಮ ಬೀರುತ್ತದೆ. ಸರ್ಕಾರದ ನೀತಿ: ಸರ್ಕಾರದ ನೀತಿಗಳು ಭಾರತದ ಚಿನ್ನದ ದರದ ಮೇಲೆ ಗಮನಾರ್ಹ ಪರಿಣಾಮ ಬೀರುತ್ತದೆ. ಆಮದು ಸುಂಕಗಳು, ತೆರಿಗೆಗಳು ಮತ್ತು ಚಿನ್ನದ ಆಮದಿನ ಮೇಲಿನ ನಿರ್ಬಂಧಗಳಲ್ಲಿನ ಬದಲಾವಣೆಗಳು ಏರಿಳಿತಗಳಿಗೆ ಕಾರಣವಾಗುತ್ತದೆ. ಹಣದುಬ್ಬರಕ್ಕೆ ಸಂಬಂಧಿಸಿದ ಸರ್ಕಾರದ ನೀತಿಗಳು ಚಿನ್ನದ ದರದ ಮೇಲೆ ಪ್ರಭಾವ ಬೀರುತ್ತದೆ. ವಿನಿಮಯ ದರಗಳು: ಜಾಗತಿಕವಾಗಿ ಚಿನ್ನದ ಬೆಲೆ ಯುಎಸ್ ಡಾಲರ್‌ಗಳಲ್ಲಿರುವುದರಿಂದ ಭಾರತೀಯ ರೂಪಾಯಿ-ಯುಎಸ್ ಡಾಲರ್ ವಿನಿಮಯ ದರದಲ್ಲಿನ ಏರಿಳಿತಗಳು ಭಾರತದಲ್ಲಿ ಚಿನ್ನದ ದರದ ಮೇಲೆ ಪರಿಣಾಮ ಬೀರುವ ಮತ್ತೊಂದು ಪ್ರಮುಖ ಅಂಶ. ಡಾಲರ್ ವಿರುದ್ಧ ರೂಪಾಯಿ ಮೌಲ್ಯದ ಕುಸಿತ ಭಾರತದಲ್ಲಿ ಚಿನ್ನದ ಬೆಲೆ ಏರಿಕೆಗೆ ಕಾರಣವಾಗುತ್ತದೆ. ಹೂಡಿಕೆದಾರರ ಮನಸ್ಥಿತಿ: ಚಿನ್ನದ ಮೇಲಿನ ಹೂಡಿಕೆಯೂ ಬೆಲೆಯನ್ನು ಪ್ರಭಾವಿಸುವ ಇನ್ನೊಂದು ಅಂಶ. ವ್ಯಾಪಾರ ಪ್ರಮಾಣಗಳು ಮತ್ತು ಇತರ ಹಣಕಾಸು ಮಾರುಕಟ್ಟೆಗಳಲ್ಲಿನ ಪ್ರವೃತ್ತಿಗಳು ಚಿನ್ನದ ಬೆಲೆಗಳ ಮೇಲೆ ಪ್ರಭಾವ ಬೀರುತ್ತವೆ. ಈ ಸುದ್ದಿಯನ್ನೂ ಓದಿ: ಡಿಜಿಟ್ ಆರೋಗ್ಯ ವಿಮೆ ಅತಿ ಕಡಿಮೆ ಕಾಯುವ ಅವಧಿಯ ವಿಮೆಗಳಲ್ಲಿ ಒಂದಾಗಿದೆ
Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ