ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru Traffic Fine: ವಾಹನ ಸವಾರಿಗೆ ಗುಡ್‌ ನ್ಯೂಸ್‌; ಮತ್ತೊಮ್ಮೆ ಟ್ರಾಫಿಕ್ ಫೈನ್ 50% ರಿಯಾಯಿತಿ ಘೋಷಣೆ

Karnataka Government: ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೆ ಗುಡ್‌ ನ್ಯೂಸ್‌ ನೀಡಿದೆ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಬಾಕಿ ಇರುವ ದಂಡ ಮೊತ್ತದ ಮೇಲೆ 50% ರಿಯಾಯಿತಿ ನೀಡಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ರಾಜ್ಯದಾದ್ಯಂತ 50% ದಂಡ ರಿಯಾಯಿತಿ ಯೋಜನೆ ಜಾರಿಗೆ ಬರಲಿದೆ.

ಗುಡ್‌ ನ್ಯೂಸ್‌; ಮತ್ತೊಮ್ಮೆ ಟ್ರಾಫಿಕ್ ಫೈನ್ 50% ರಿಯಾಯಿತಿ ಘೋಷಣೆ

ಸಾಂಧರ್ಬಿಕ ಚಿತ್ರ -

Vishakha Bhat
Vishakha Bhat Nov 21, 2025 10:31 AM

ಬೆಂಗಳೂರು: ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೆ ಗುಡ್‌ ನ್ಯೂಸ್‌ ನೀಡಿದೆ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಬಾಕಿ ಇರುವ (Bengaluru Traffic Fine) ದಂಡ ಮೊತ್ತದ ಮೇಲೆ 50% ರಿಯಾಯಿತಿ ನೀಡಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ರಾಜ್ಯದಾದ್ಯಂತ 50% ದಂಡ ರಿಯಾಯಿತಿ ಯೋಜನೆ ಜಾರಿಗೆ ಬರಲಿದೆ. ಈ ವಿಶೇಷ ಅವಕಾಶ ಡಿಸೆಂಬರ್ 12 ರವರೆಗೆ ಮಾತ್ರ ಲಭ್ಯವಿರಲಿದೆ. ಚಾಲಕರು ಈ ಅವಧಿಯೊಳಗೆ ತಮ್ಮ ಬಾಕಿ ಇರುವ ಸಂಚಾರ ದಂಡಗಳನ್ನು 50% ರಿಯಾಯಿತಿಯಲ್ಲಿ ಪಾವತಿಸಬಹುದು.

ಸಂಚಾರ ದಂಡ ರಿಯಾಯಿತಿ ಕುರಿತಂತೆ ಸಾರಿಗೆ ಇಲಾಖೆ ಸರ್ಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಪರಿಶೀಲಿಸಿದ ಬಳಿಕ, ಸರ್ಕಾರವು ಅದನ್ನು ಅಂಗೀಕರಿಸಿ ತಕ್ಷಣ ಜಾರಿಗೆ ತರಲು ಆದೇಶ ಹೊರಡಿಸಿದೆ. ಕಳೆದ ಬಾರಿ ದಂಡ ರಿಯಾಯಿತಿ ನೀಡಿದಾಗ ಸರ್ಕಾರಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದ್ದ ಕಾರಣ, ಮತ್ತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ನವೆಂಬರ್ 21ರಿಂದ ಡಿಸೆಂಬರ್ 12ರವರೆಗೆ ಈ ರಿಯಾಯಿತಿ ಸಿಗಲಿದೆ.

ಬೆಂಗಳೂರು ಟ್ರಾಫಿಕ್‌ ಪೊಲೀಸರ ಘೋಷಣೆ



ಪೊಲೀಸ್ ಇಲಾಖೆಯ ಸಂಚಾರ ಇ-ಚಲನ್‌ನಲ್ಲಿ ದಾಖಲಾಗಿರುವ ದಂಡದ ಪ್ರಕರಣಗಳು ಹಾಗೂ ಸಾರಿಗೆ ಇಲಾಖೆಯಲ್ಲಿ 1991-92ರಿಂದ 2019-20ರ ಅವಧಿಯಲ್ಲಿ ದಾಖಲಾಗಿ ಪಾವತಿಗೆ ಬಾಕಿಯಿರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50 ರಿಯಾಯಿತಿ ನೀಡಿ ಆದೇಶಿಸಿದೆ. ಕಾನೂನು ಸೇವೆಗಳ ಪ್ರಾಧಿಕಾರ ಸಲ್ಲಿಸಿದ್ದ ಪ್ರಸ್ತಾವ ಒಪ್ಪಿದ್ದ ಸರ್ಕಾರವು, ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಕಳೆದ ಜುಲೈ 5ರಿಂದ 11ರ ವರೆಗೆ ದಂಡ ಪಾವತಿಸಲು ಅವಕಾಶ ಕಲ್ಪಿಸಿತ್ತು. ಅದಾದ ಮೇಲೆ ಆಗಸ್ಟ್ 23ರಿಂದ ಸೆಪ್ಟೆಂಬರ್ 12ರ ವರೆಗೆ ಎರಡನೇ ಬಾರಿಗೆ ಅವಕಾಶ ನೀಡಿತ್ತು.

ಹೇಗೆ ಪಾವತಿಸಬೇಕು?

ಅಸ್ತ್ರಂ ಆಪ್, ಕೆಎಸ್‌ಪಿಎಸ್‌ ಆ್ಯಪ್, ಕರ್ನಾಟಕ ಒನ್ ಕೇಂದ್ರಗಳೂ ಸೇರಿದಂತೆ ಸಂಬಂಧಪಟ್ಟ ವೇದಿಕೆಗಳಲ್ಲಿ ದಂಡವನ್ನು ಮಾಲೀಕರು ಪಾವತಿ ಮಾಡಬಹುದು ಎಂದು ಮೂಲಗಳು ತಿಳಿಸಿವೆ.

ಸಂಚಾರ ನಿರ್ವಹಣೆಗೆ (ಟ್ರಾಫಿಕ್ ಮ್ಯಾನೇಜ್ಮೆಂಟ್) ಇರುವೆಗಳ ಮಾರ್ಗದರ್ಶನ ಅಥವಾ ಟ್ರಾಫಿಕ್ ಜಾಮ್ ಸಮಸ್ಯೆಗೆ ಇರುವೆಗಳ ರೂಲ್ಸ್‌!

ದಂಡ ಪಾವತಿ ಮಾಡುವ ವಿಧಾನ ಹೇಗೆ?

ದಂಡ ಪಾವತಿಯನ್ನು ನೀವು ಇರುವಲ್ಲಿಯೇ ಕಟ್ಟಬಹುದು ಇದಕ್ಕಾಗಿ ನೀವು ಹಲವು ಪ್ಲಾಟ್‌ಫಾರ್ಮ್‌ ಬಳಕೆ ಮಾಡಿಕೊಳ್ಳಬಹುದಾಗಿದೆ.

ಇದಕ್ಕಾಗಿ ನೀವು ಕರ್ನಾಟಕ ಒನ್‌ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.

ನಂತರ ಅಲ್ಲಿ ನಿಮಗೆ ಪೋನ್‌ ನಂಬರ್‌ ಕೇಳುತ್ತದೆ

ಫೋನ್‌ ನಂಬರ್‌ ಆಡ್‌ ಮಾಡಿದ ನಂತರ ಓಟಿಪಿ ಬರುತ್ತದೆ

ಅದನ್ನು ನಮೂದಿಸಿದ ನಂತರ ವಾಹನದ ನೋಂದಣಿ ಸಂಖ್ಯೆ ಎಂಟ್ರಿ ಮಾಡಿ

ಅಲ್ಲಿ ನಿಮಗೆ ಸಂಚಾರ ಉಲ್ಲಂಘನೆ ಮಾಡಿದ ಮಾಹಿತಿ ತೆರೆದುಕೊಳ್ಳುತ್ತದೆ

ನಿಮಗೆ ಪೂರ್ತಿ ಹಣ ಪಾವತಿ ಮಾಡಲು ಆಗುವುದಿಲ್ಲ ಎಂದರೆ ಯಾವೆಲ್ಲಾ ಉಲ್ಲಂಘನೆಗೆ ಫೈನ್‌ ಕಟ್ಟಬೇಕು ಅನ್ನೋದನ್ನು ಟಿಕ್‌ ಮಾಡಬಹುದು

ಈ ಮೂಲಕ ನೀವು ಪಾವತಿ ಮಾಡಿ ಎಂಬ ಆಯ್ಕೆ ಮೇಲೆ ಕ್ಲಿಕ್‌ ಮಾಡಿ ಯುಪಿಐನಲ್ಲಿ ಹಣ ಪಾವತಿ ಮಾಡಿ