Home Guards: ಹೋಂ ಗಾರ್ಡ್ಸ್‌ಗೆ ಗುಡ್‌ನ್ಯೂಸ್; ಬರ್ತ್ ಡೇಗೆ ವೇತನ ಸಹಿತ ರಜೆ
Home Guards: ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗೃಹರಕ್ಷಕ ದಳ ಸಿಬ್ಬಂದಿಗೆ ಇನ್ನು ಮುಂದೆ ಪೊಲೀಸರ ಮಾದರಿಯಲ್ಲಿ ಅವರ ಹುಟ್ಟುಹಬ್ಬದ ದಿನ ಶುಭಾಶಯ ಪತ್ರ ಹಾಗೂ ವೇತನ ಸಹಿತ ರಜೆ ನೀಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದ್ದಾರೆ.


ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುವ ಗೃಹರಕ್ಷಕ ದಳದ(Home Guards) ಸಿಬ್ಬಂದಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಇನ್ನು ಮುಂದೆ ಅವರ ಹುಟ್ಟುಹಬ್ಬದಂದು ವೇತನ ಸಹಿತ ರಜೆ ನೀಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ. ಅದರ ಜೊತೆಗೆ ಹುಟ್ಟುಹಬ್ಬಕ್ಕೆ ಶುಭಕೋರಿ ಶುಭಾಶಯ ಪತ್ರಗಳನ್ನೂ ನೀಡಲಿದ್ದಾರೆ. ಮೈಸೂರು ರಸ್ತೆಯ ಸಿಎಆರ್ ಕೇಂದ್ರ ಸ್ಥಾನದ ಮೈದಾನದಲ್ಲಿ ಶುಕ್ರವಾರ ಮೊದಲ ಬಾರಿಗೆ ನಡೆದ ಗೃಹರಕ್ಷಕ ದಳ ಸಿಬ್ಬಂದಿ ಕವಾಯತು ನಡೆಯಿತು. ಇದೇ ಸಂದರ್ಭದಲ್ಲಿ ಈ ಮಹತ್ವದ ಘೋಷಣೆ ಹೊರಡಿಸಿದ್ದಾರೆ.
ಈ ವೇಳೆ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದ ಅವರು, ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗೃಹರಕ್ಷಕ ದಳ ಸಿಬ್ಬಂದಿಗೆ ಇನ್ನು ಮುಂದೆ ಪೊಲೀಸರ ಮಾದರಿಯಲ್ಲಿ ಅವರ ಹುಟ್ಟುಹಬ್ಬದ ದಿನ ಶುಭಾಶಯ ಪತ್ರ ಹಾಗೂ ವೇತನ ಸಹಿತ ರಜೆ ನೀಡಲಾಗುವುದು ಎಂದು ಹೇಳಿದ್ದಾರೆ.
ಈ ಸುದ್ದಿಯನ್ನೂ ಓದಿ: Harassment: ಕ್ರೈಂ ಬ್ರಾಂಚ್ ಆಫೀಸರ್ ಎಂದು ಯುವತಿಯರ ರೂಂಗೆ ನುಗ್ಗಿದ ಹೋಂ ಗಾರ್ಡ್ ! ಕಾಮುಕನ ಹೆಡೆಮುರಿ ಕಟ್ಟಿದ ಪೊಲೀಸರು
ಎಲ್ಲಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ದೈಹಿಕ ಸ್ವಾಸ್ಥ್ಯದ ಜೊತೆಗೆ ಮಾನಸಿಕ ಸ್ವಾಸ್ಥ್ಯ ಮುಖ್ಯವಾಗಿದೆ. ಕೆಲಸ ಒತ್ತಡ ಮನಸ್ಸಿನ ಮೇಲೆ ಮತ್ತಿ ದೇಹದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಇದನ್ನು ನಿವಾರಿಸಲು ನಗರ ಪೊಲೀಸ್ ವತಿಯಿಂದ ಐದಾರು ಮಂದಿ ಆಪ್ತ ಸಮಾಲೋಚಕರು ಪೊಲೀಸ್ ಠಾಣೆಗೆ ತೆರಳಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಯೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ತರಬೇತಿ ನೀಡುತ್ತಿದ್ದಾರೆ. ಇನ್ನು ಮುಂದೆ ಗೃಹರಕ್ಷಕ ದಳ ಸಿಬ್ಬಂದಿಗೂ ನಿಯಮಿತವಾಗಿ ಆಪ್ತ ಸಮಾಲೋಚನೆ ನಡೆಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.