ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಸಾರಿಗೆ ನೌಕರರಿಗೆ ಗುಡ್‌ ನ್ಯೂಸ್‌; ಮೂಲ ವೇತನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕೊನೆಗೂ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. 38 ತಿಂಗಳ ವೇತನ ಹಿಂಬಾಕಿಯೂ ಸಿಕ್ಕಿಲ್ಲ ಎಂದು ಸಿಬ್ಬಂದಿ ಪ್ರತಿಭಟನೆ ಎಚ್ಚರಿಕೆ ನೀಡಿದ್ದು, ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ, ಸಾರಿಗೆ ನಿಗಮಗಳ ಸಿಬ್ಬಂದಿ ವೇತನ ಹೆಚ್ಚಿಸಿ ಆದೇಶ ಹೊರಡಿಸಿದೆ.

ಸಂಗ್ರಹ ಚಿತ್ರ

ಬೆಂಗಳೂರು: ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕೊನೆಗೂ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. 38 ತಿಂಗಳ ವೇತನ ಹಿಂಬಾಕಿಯೂ ಸಿಕ್ಕಿಲ್ಲ (Karnataka government) ಎಂದು ಸಿಬ್ಬಂದಿ ಪ್ರತಿಭಟನೆ ಎಚ್ಚರಿಕೆ ನೀಡಿದ್ದು, ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ, ಸಾರಿಗೆ ನಿಗಮಗಳ ಸಿಬ್ಬಂದಿ ವೇತನ ಹೆಚ್ಚಿಸಿ ಆದೇಶ ಹೊರಡಿಸಿದೆ. ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ, ಮತ್ತು ಕೆಕೆಆರ್‌ಟಿಸಿ ನೌಕರರ ಮೂಲ ವೇತನವನ್ನು 12.5%ರಷ್ಟು ಹೆಚ್ಚಿಸಿದೆ.

2025ರ ಮಾರ್ಚ್ 31ರ ಮೂಲ ವೇತನದ ಮೇಲೆ ಅನ್ವಯವಾಗಲಿದೆ. ಇನ್ನು 2026ರ ಜುಲೈ 1ರ ವೇತನದಲ್ಲಿ ಜಾರಿಗೆ ಬರುವಂತೆ ಆದೇಶಿಸಿದೆ. ಇದು 1.05 ಲಕ್ಷ ಸಿಬ್ಬಂದಿಗೆ ಅನುಕೂಲವಾಗಲಿದ್ದು, ಇದರಿಂದ ಸರ್ಕಾರಕ್ಕೆ ತಿಂಗಳಿಗೆ ಹೆಚ್ಚುವರಿಯಾಗಿ 72.80 ಕೋಟಿ ರೂಪಾಯಿ ಹೊರೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಈಗಾಗಲೇ ನೌಕರರಿಗೆ ಪಾವತಿಸಬೇಕಿದ್ದ ಹಳೆಯ ವೇತನ ಹಿಂಬಾಕಿಯ ಮೊದಲ ಕಂತಿನ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ.

ಉಳಿದ ಹಿಂಬಾಕಿ ಮೊತ್ತವನ್ನು ಮುಂದಿನ ಕೆಲವೇ ತಿಂಗಳುಗಳಲ್ಲಿ ಹಂತ ಹಂತವಾಗಿ ಪಾವತಿಸಲಾಗುವುದು ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಜುಲೈ ತಿಂಗಳ ವೇತನದಲ್ಲಿ ಪರಿಷ್ಕೃತ ವೇತನ ಜಾರಿಗೆ ಬರುವಂತೆ ಪಾವತಿಸಲು ಸರ್ಕಾರವು ಆದೇಶ ಹೊರಡಿಸಿದ್ದು, ಈ ತಿಂಗಳಿಂದ ನೌಕರರ ಖಾತೆಗಳಿಗೆ ಪರಿಷ್ಕೃತ ವೇತನ ಜಮೆಯಾಗಲಿದೆ ಎಂದು ತಿಳಿದು ಬಂದಿದೆ.

Free travel: ಸಿಹಿ ಸುದ್ದಿ, ಪಿಯುಸಿವರೆಗೆ ಗಂಡು ಮಕ್ಕಳಿಗೂ ಕೆಎಸ್‌ಆರ್‌ಟಿಸಿಯಲ್ಲಿ ಉಚಿತ ಪ್ರಯಾಣ

ವೇತನ ಹೆಚ್ಚಳಕ್ಕಾಗಿ ಹೋರಾಟ ನಡೆಸುತ್ತಿದ್ದರು. ವಿವಿಧ ಸಾರಿಗೆ ಸಂಘಗಳು ಮತ್ತು ಒಕ್ಕೂಟಗಳು ಸರ್ಕಾರದ ಮೇಲೆ ಒತ್ತಡ ಹೇರಲು ಮುಷ್ಕರಗ ನಡೆಸಿದ್ದವು. ಅಂತಿಮವಾಗಿ ಸರ್ಕಾರವು ಅವರ ಬೇಡಿಕೆಗೆ ಮಣಿದು, ಈ ಐತಿಹಾಸಿಕ ವೇತನ ಪರಿಷ್ಕರಣೆಗೆ ಅನುಮೋದನೆ ನೀಡಿದೆ. ರಾಮಲಿಂಗಾರೆಡ್ಡಿ ಅವರು ಈ ಹಿಂದೆ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಸಾರಿಕೆ ಸಚಿವರಾಗಿದ್ದಾಗ ನೌಕರರ ವೇತನ ಹೆಚ್ಚಳಕ್ಕೆ ಆದೇಶ ನೀಡಿದ್ದರು.

Vishakha Bhat Heggar

View all posts by this author