ಸಿಎಂ ಡಿಕೆಶಿ ಸಂಪುಟ ಸಭೆಯಲ್ಲಿ ತೀರ್ಮಾನ
ಬೆಂಗಳೂರು: ಎಸ್ಸಿ/ಎಸ್ಟಿ ಮೀಸಲು ಪ್ರಮಾಣ ಹೆಚ್ಚಳವನ್ನು ರದ್ದುಗೊಳಿಸಿದ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಲು, ಗುರುವಾರ ನಡೆದ ರಾಜ್ಯ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾ ಗಿದೆ. ಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವ ದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಹಿಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಎಸ್ಸಿ ಮೀಸಲನ್ನು ಶೇ.17ಕ್ಕೆ, ಎಸ್ಟಿ ಮೀಸಲನ್ನು ಶೇ.7ಕ್ಕೇರಿಸಿತ್ತು. ಆ ಮೂಲಕ ರಾಜ್ಯದಲ್ಲಿ ಒಟ್ಟು ಮೀಸಲಾತಿ ಪ್ರಮಾಣ ಶೇ.56ಕ್ಕೆ ಹೆಚ್ಚಳವಾಗಿತ್ತು. ಸರಕಾರದ ಈ ಆದೇಶವನ್ನು ಪ್ರಶ್ನಿಸಿ ಕೆಲವರು ಹೈಕೋರ್ಟ್ ಮೊರೆ ಹೋಗಿದ್ದರು.
ಹೈಕೋರ್ಟ್ ದ್ವಿಸದಸ್ಯ ಪೀಠ ಮೀಸಲಾತಿ ಹೆಚ್ಚಳದ ಆದೇಶ ರದ್ದುಗೊಳಿಸಿ ಇತ್ತೀಚೆಗೆ ತೀರ್ಪು ನೀಡಿತ್ತು. ಹೈಕೋರ್ಟ್ ತೀರ್ಪು ಸರಕಾರಿ ಹುದ್ದೆಗಳ ನೇಮಕಾತಿ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ. ಹೈಕೋರ್ಟ್ ಆದೇಶದಿಂದ ರಾಜ್ಯ ಸರಕಾರ ಮತ್ತು ಅದರ ಅಧೀನ ಸಂಸ್ಥೆಗಳ ನೇಮ ಕಾತಿಗಳ ಮೇಲೆ ಪರಿಣಾಮ ಬೀರಲಿದೆ.
ಇದನ್ನೂ ಓದಿ: SC-ST Reservation: ರಾಜ್ಯದ ಎಸ್ಸಿ, ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಳ ರದ್ದು ಮಾಡಿದ ಹೈಕೋರ್ಟ್
ಮೈಸೂರಲ್ಲಿ ಚಿತ್ರನಗರಿ ನಿರ್ಮಾಣ: ಸಾಂಸ್ಕೃತಿಕ ನಗರಿ ಮೈಸೂರಿನ ಸಮೀಪದ ಹಿಮ್ಮಾವು ಪ್ರದೇಶ ದಲ್ಲಿ ಸುಮಾರು 160 ಎಕರೆ ವಿಸ್ತೀರ್ಣದಲ್ಲಿ ಚಿತ್ರನ ಗರಿ ನಿರ್ಮಿಸಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಯೋಜನೆಗೆ 729.43 ಕೋಟಿ ರು. ಹಣ ಮೀಸಲಿಡ ಲು ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಶುಭಾಗೆ ಕ್ಷಮೆಯಿಲ್ಲ: ಭಾವಿ ಪತಿಯಾಗಬೇಕಿದ್ದವನನ್ನೇ ಕೊಂದು ದೇಶಾದ್ಯಂತ ಕುಖ್ಯಾತಿ ಗಳಿಸಿದ್ದ ಪ್ರಕರಣದಲ್ಲಿ ಅಪರಾಧಿ ಶುಭಾ ಹಾಗೂ ಆಕೆಯ ಪ್ರಿಯಕರ ಅರುಣ್ ಕುಮಾರ್ ವರ್ಮಾನಿಗೆ ಕ್ಷಮಾದಾನ ನೀಡುವ ಮನವಿಯನ್ನು ರಾಜ್ಯ ಸರಕಾರ ತಿರಸ್ಕರಿಸಿದೆ. ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಗಳಾದ ಶುಭಾ ಶಂಕರ್ ಮತ್ತು ಡಿ. ಅರುಣ್ ವರ್ಮಾ ಕ್ಷಮಾದಾನ ಕೋರಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು. ಈ ವಿಚಾರದ ಬಗ್ಗೆ ಸಂಪುಟ ಸಭೆಯಲ್ಲಿ ಕ್ಷಮಾದಾನ ನೀಡುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ, ಆ ಪ್ರಸ್ತಾಪ ತಿರಸ್ಕರಿಸಲು ತೀರ್ಮಾನಿಸಲಾಗಿದೆ.
ಜನವರಿಯಲ್ಲಿ ಜಿಬಿಎ?
ಇನ್ನು ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಸಂಬಂಧಿಸಿದಂತೆಯೂ ಸಚಿವ ಸಂಪುಟ ಸಭೆಯ ಬಳಿಕ ಅನೌಪ ಚಾರಿಕವಾಗಿ ಶಿವಕುಮಾರ್ ಸಚಿವರೊಂದಿಗೆ ಚರ್ಚಿಸಿದ್ದು, ಡಿಸೆಂಬರ್ ಅಂತ್ಯದ ವೇಳೆಗೆ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಸುವ ಬಗ್ಗೆ ಚರ್ಚಿಸಿ ದ್ದಾರೆ. ಬೆಂಗಳೂರು ನಗರ ಹೊರತುಪಡಿಸಿ ಇನ್ನುಳಿದೆಡೆ ಸ್ಥಳೀಯ ಸಂಸ್ಥೆ ಚುನಾವಣೆ ಪೂರ್ಣಗೊಳಿಸಿ, ಬಳಿಕ ಜನವರಿಯಲ್ಲಿ ಜಿಬಿಎ ಚುನಾವಣೆ ನಡೆಸುವ ಸುಳಿವು ನೀಡಿದ್ದಾರೆ ಎನ್ನಲಾಗಿದೆ.