ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಅಕ್ಟೋಬರ್‌ʼನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ: ಈಶ್ವರ್ ಖಂಡ್ರೆ

ರಾಜ್ಯದ ಬಹುತೇಕ ಗ್ರಾಮ ಪಂಚಾಯತ್‌ಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ. ಕೆಲವು ಪಂಚಾಯತ್‌ಗಳ ಮೇಲ್ದರ್ಜೆಯಿಂದಾಗಿ ಕ್ಷೇತ್ರ ಪುನರ್‌ವಿಂಗಡಣೆ ಮಾಡಬೇಕಾಗಿದೆ. ಜುಲೈ, ಆಗಸ್ಟ್ ನಲ್ಲಿ ಈ ಪ್ರಕ್ರಿಯೆ ಮುಗಿಸಿ, ಮೀಸಲು ನಿರ್ಧರಿಸಿ, ರಾಜ್ಯ ಚುನಾವಣೆ ಆಯೋಗಕ್ಕೆ ಸಲ್ಲಿಸಲಾಗುವುದು. ಚುನಾವಣಾ ಆಯೋಗ 45 ದಿನಗ ಳಲ್ಲಿ ಚುನಾವಣೆ ನಡೆಸುತ್ತದೆ

ಕ್ಷೇತ್ರ ಮರುವಿಂಗಡನೆ, ಮೀಸಲು ನಿಗದಿ ಬಳಿಕ ಚುನಾವಣೆ ಪ್ರಕ್ರಿಯೆ

ಬೆಂಗಳೂರು: ರಾಜಧಾನಿಯಲ್ಲಿ ಆಗಷ್ಟ್ ತಿಂಗಳೊಳಗೆ ಐದು ಮಹಾನಗರಪಾಲಿಕೆಗಳ ಚುನಾವಣೆಗೆ ಸುಪ್ರೀಂ ಕೋರ್ಟ್‌ನಿಂದ ಗಡುವು ಪಡೆದಿರುವ ರಾಜ್ಯ ಸರಕಾರ, ಇದೀಗ ಅಕ್ಟೋಬರ್ ಅಂತ್ಯ ದೊಳಗೆ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಸಜ್ಜಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಅವರೇ ಈ ವಿಷಯವನ್ನು ತಿಳಿಸಿದ್ದಾರೆ.

ರಾಜ್ಯದ ಬಹುತೇಕ ಗ್ರಾಮ ಪಂಚಾಯತ್‌ಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ. ಕೆಲವು ಪಂಚಾಯತ್‌ಗಳ ಮೇಲ್ದರ್ಜೆಯಿಂದಾಗಿ ಕ್ಷೇತ್ರ ಪುನರ್‌ವಿಂಗಡಣೆ ಮಾಡಬೇಕಾಗಿದೆ. ಜುಲೈ, ಆಗಸ್ಟ್ ನಲ್ಲಿ ಈ ಪ್ರಕ್ರಿಯೆ ಮುಗಿಸಿ, ಮೀಸಲು ನಿರ್ಧರಿಸಿ, ರಾಜ್ಯ ಚುನಾವಣೆ ಆಯೋಗಕ್ಕೆ ಸಲ್ಲಿಸಲಾಗುವುದು. ಚುನಾವಣಾ ಆಯೋಗ 45 ದಿನಗ ಳಲ್ಲಿ ಚುನಾವಣೆ ನಡೆಸುತ್ತದೆ. ಎಸ್‌ಐಆರ್ ಪ್ರಕ್ರಿಯೆ ನಡೆಯು ತ್ತಿರುವುದರಿಂದ ಸರಕಾರಿ ಸಿಬ್ಬಂದಿ ಗಳು ಆ ಕಾರ್ಯ ದಲ್ಲಿ ನಿರತರಾಗಿದ್ದಾರೆ. ಹೀಗಾಗಿ ಕಾಲಾವಕಾಶ ಕೇಳಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: Eshwar Khandre: ಈಶ್ವರ ಖಂಡ್ರೆಗೆ ಉಪಮುಖ್ಯ ಮಂತ್ರಿ ಸ್ಥಾನ ನೀಡಬೇಕೆಂದು ವೀರಶೈವ ಮಹಾಸಭಾ ಮುಖಂಡರ ಆಗ್ರಹ

ಅನುದಾನ ಬಾಕಿ: ಕರ್ನಾಟಕದ ಗ್ರಾಮ ಪಂಚಾಯತ್‌ಗಳಿಗೆ ಕೇಂದ್ರ ಸರಕಾರದಿಂದ 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಬರ ಬೇಕಾದ 2186.20ಕೋಟಿ ರು.ಗಳನ್ನು ಕೇಂದ್ರ ಸರಕಾರ ಬಿಡುಗಡೆ ಮಾಡಿಲ್ಲ. ತಂತ್ರಾಂಶದಲ್ಲಿನ ತಾಂತ್ರಿಕ ಸಮಸ್ಯೆಯನ್ನೇ ಮುಂದಿಟ್ಟುಕೊಂಡು ಹಣ ಬಿಡುಗಡೆ ಮಾಡುವುದಿಲ್ಲ ಎನ್ನುವುದು ಸರಿಯಲ್ಲ. ರಾಜ್ಯದ ಸಂಸತ್ ಸದಸ್ಯರು ಒಕ್ಕೊರಲಿನಿಂದ ಈ ಬಗ್ಗೆ ಧ್ವನಿ ಎತ್ತಬೇಕು ಎಂದು ಒತ್ತಾಯಿಸಿದರು. ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರು ಪೂರೈಕೆ ಮಾಡಲು ಹಣಕಾಸಿನ ಕೊರತೆ ಇಲ್ಲ. ಈಗಾಗಲೇ 117 ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ಇದರೊಂದಿಗೆ ಬೆಳಗಾವಿ ಪ್ರಾದೇಶಿಕ ಮಟ್ಟದ ಸಭೆ ನಡೆಸಿದ ಮುಖ್ಯಮಂತ್ರಿ ಯವರು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಕೋಟಿ ರು. ನೀಡುವುದಾಗಿ ಘೋಷಿಸಿzರೆ. ಹೀಗಾಗಿ ಬರ ಪರಿಸ್ಥಿತಿಯ ನಡುವೆಯೂ ನೀರು ಪೂರೈಕೆಗೆ ಆರ್ಥಿಕ ಸಮಸ್ಯೆ ಎದುರಾಗುವುದಿಲ್ಲ ಎಂದು ಸ್ಪಷ್ಟಪಡಿಸಿzರೆ.

ಎಚ್‌ಎಂಟಿ ಭೂಮಿಯ ಮೇಲೆ ಹಕ್ಕಿದೆ

ಇನ್ನು ಎಚ್‌ಎಂಟಿ ಭೂಮಿಯ ಮೇಲೆ ರಾಜ್ಯ ಸರಕಾರ ಹಾಗೂ ಅರಣ್ಯ ಇಲಾಖೆಗೆ ಹಕ್ಕಿಲ್ಲವೆಂದಿದ್ದ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ಸಚಿವ ಈಶ್ವರ್ ಖಂಡ್ರೆ, ಅರಣ್ಯೇ ತರ ಉದ್ದೇಶಕ್ಕೆ ಭೂ ಪರಿವರ್ತನೆಯಾಗದ ಎಚ್‌ಎಂಟಿ ಭೂಮಿ ಅರಣ್ಯವಾಗಿದ್ದು, ಅರಣ್ಯವಾಗಿ ಯೇ ಉಳಿಯುತ್ತದೆ. ಇದರ ಮೇಲೆ ರಾಜ್ಯ ಸರಕಾರಕ್ಕೆ ಹಕ್ಕಿದೆ. ಅಭಿವೃದ್ಧಿಯಲ್ಲಿ ರಾಜಕೀಯ ಮಾಡುವುದಿಲ್ಲ. ಆದರೆ ಎಚ್'ಎಂಟಿ ಅರಣ್ಯ ಭೂಮಿಯನ್ನು ರಾಜ್ಯ ಸರಕಾರಕ್ಕೆ ಮರಳಿ ಪಡೆದು, ಅಲ್ಲಿ ಲಾಲ್ ಬಾಗ್, ಕಬ್ಬನ್ ಪಾರ್ಕ್‌ಗಿಂತ ದೊಡ್ಡ ಉದ್ಯಾನ ನಿರ್ಮಿಸಿ ಉತ್ತರ ಬೆಂಗಳೂರಿಗರಿಗೆ ಅತ್ಯಗತ್ಯವಾದ ಶ್ವಾಸತಾಣ ಉಳಿಸಲು ನಿರ್ಧರಿಸಿದ್ದ ನಾನು ಪರಿಸರ ಆಸಕ್ತನಾಗಿ ಕುಮಾರಸ್ವಾಮಿ ಅವರ ಆರೋಪಕ್ಕೆ ಉತ್ತರ ಕೊಡುತ್ತಿದ್ದೇನೆ ಎಂದರು.

image

ನರೇಗಾದ ಬದಲಾದ ರೂಪ ವಿ.ಬಿ.ಜಿ ರಾಮ್ ಜಿಯನ್ನು ರಾಜ್ಯ ಸರಕಾರ ಆರ್ಥಿಕ ಹೊರೆಯ ನಡುವೆಯೂ ಬಡವರು, ದಲಿತರು, ವಂಚಿತರು, ಗ್ರಾಮೀಣ ಬಡವರ ಹಿತದೃಷ್ಟಿಯಿಂದ ಜಾರಿಗೆ ತಂದಿದ್ದು, ಗ್ರಾಮೀಣ ಜನರಿಗೆ ಉದ್ಯೋಗದ ಖಾತ್ರಿ ನೀಡಲಾಗಿದೆ. ಹೀಗಾಗಿ ಯಾರೂ ಗುಳೆ ಹೋಗುವ ಅಗತ್ಯವಿಲ್ಲ.

- ಈಶ್ವರ್ ಖಂಡ್ರೆ, ಆರ್‌ಡಿಪಿಆರ್ ಸಚಿವ