ಬೆಂಗಳೂರು: ತಾತನು ತನ್ನ ಜೀವಿತಾವಧಿಯಲ್ಲಿ ಸಂಪಾದಿಸಿದ ಆಸ್ತಿಯು ವಿಭಜನೆಯ ನಂತರ ಅಪ್ಪನ ಕೈಸೇರಿದಾಗ ಅದು ತಂದೆಯ ವೈಯಕ್ತಿಕ ಆಸ್ತಿಯಾಗುತ್ತದೆಯೇ ವಿನಃ ಹಿಂದೂ ಅವಿಭಕ್ತ ಕುಟುಂಬದ ಆಸ್ತಿಯಾಗುವುದಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಈ ರೀತಿ ವಿಭಜನೆಯಾದ ಆಸ್ತಿಯಲ್ಲಿ ಮೊಮ್ಮಗಳು ಪಾಲು ಕೇಳುವುದಕ್ಕೆ ಅವಕಾಶವಿಲ್ಲ ಎಂದು ಹೇಳಿದೆ. ಅಮೆರಿಕದಲ್ಲಿ ನೆಲೆಸಿರುವ ಉಷಾ ಎನ್.ಸ್ವಾಮಿ ಎಂಬುವರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ಕೆ.ಸಿಂಗ್ ಮತ್ತು ನ್ಯಾಯಮೂರ್ತಿ ಟಿ.ಎಂ.ನದಾಫ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ಅರ್ಜಿದಾರರಾದ ಅವರು ಉಲ್ಲೇಖಿಸಿರುವ ಆಸ್ತಿಗಳನ್ನು ಆಕೆಯ ತಾತ, ಅಂದರೆ ತಂದೆಯ ತಂದೆ ಸ್ವಂತವಾಗಿ ಸಂಪಾದಿಸಿದ್ದರು ಎಂಬುದು ದಾಖಲೆಗಳಿಂದ ಗೊತ್ತಾಗಲಿದೆ. ಈ ಆಸ್ತಿಯನ್ನು ಅವರ ತಾತ, ಅವರ ಮಕ್ಕಳಿಗೆ ಕೌಟುಂಬಿಕ ಒಪ್ಪಂದದ ಮೂಲಕ ಆಸ್ತಿ ಹಂಚಿಕೆ ಮಾಡಿದ್ದಾರೆ. ತಾತನ ಸ್ವಯಾರ್ಜಿತ ಆಸ್ತಿ ಭಾಗವಾಗಿ ತಂದೆಗೆ ಬಂದಾಗ, ಅದು ತಂದೆಯ ವೈಯಕ್ತಿಕ ಆಸ್ತಿಯಾಗುತ್ತದೆ. ಆದರೆ, ಪಿತ್ರಾರ್ಜಿತ ಆಸ್ತಿಯಾಗುವುದಿಲ್ಲ ಎಂದು ತಿಳಿಸಿದೆ.
ಮಿತಾಕ್ಷರ ಕಾನೂನಿನ ಪ್ರಕಾರ, ತಂದೆಗೆ ತನ್ನ ಸ್ವಯಾರ್ಜಿತ ಆಸ್ತಿಯನ್ನು ಯಾರಿಗಾದರೂ ವಿಲೇವಾರಿ ಮಾಡುವ ಸಂಪೂರ್ಣ ಹಕ್ಕಿರುತ್ತದೆ. ಈ ಆಸ್ತಿಗಳು ಹಿಂದೂ ಅವಿಭಕ್ತ ಕುಟುಂಬದ ಆಸ್ತಿಗಳಾಗಿದ್ದವು ಎಂಬುದನ್ನು ಸಾಬೀತುಪಡಿಸಲು ಮೇಲ್ಮನವಿದಾರರು ಸಾಕ್ಷ್ಯಗಳನ್ನು ಒದಗಿಸಿಲ್ಲ. ಆದ್ದರಿಂದ ಅರ್ಜಿದಾರರಿಗೆ ಈ ಆಸ್ತಿಗಳಲ್ಲಿ ಯಾವುದೇ ಕಾನೂನಾತ್ಮಕ ಹಕ್ಕು ಇರುವುದಿಲ್ಲ ಎಂದು ಎಂದು ನ್ಯಾಯಪೀಠ ತಿಳಿಸಿದೆ.
ವೈರಲ್ ಆಡಿಯೋ ಕೇಸ್; ಜಮೀರ್ ಅಹ್ಮದ್ ಖಾನ್ ವಿರುದ್ಧ ಮಾನಹಾನಿ ಸುದ್ದಿ ಪ್ರಸಾರ ನಿರ್ಬಂಧಿಸಿದ ನ್ಯಾಯಾಲಯ
ಪ್ರಕರಣದ ಹಿನ್ನೆಲೆ
ಅರ್ಜಿದಾರರಾದ ಉಷಾ ಎನ್.ಸ್ವಾಮಿ ಅವರು 1979ರಲ್ಲಿ ವೈದ್ಯರಾಗಿರುವ ಜವರಯ್ಯ ಎನ್.ಸ್ವಾಮಿ ಎಂಬುವರನ್ನು ವಿವಾಹವಾಗಿದ್ದರು. ವಿವಾಹದ ಬಳಿಕ ತನ್ನ ಪತಿಯೊಂದಿಗೆ ಅಮೆರಿಕದಲ್ಲಿ ವಾಸಿಸು ತ್ತಿದ್ದರು. ಈ ನಡುವೆ ಅರ್ಜಿದಾರರ ಗಮನಕ್ಕೆ ಬಾರದೆ ಕುಟುಂಬಕ್ಕೆ ಸೇರಿದ 10 ಎಕರೆ ಜಮೀನನ್ನು ಪೋಷಕರು ಮಾರಾಟ ಮಾಡಿ ದ್ದಾರೆ. ತಂದೆಗೆ ಸೇರಿದ ಪಿತ್ರಾರ್ಜಿತ ಆಸ್ತಿ ಯಲ್ಲಿ ಕಲ್ಲು ಗಣಿಗಾರಿಕೆ ನಡೆಸಿ ಲಾಭ ಗಳಿಸಿ ದ್ದಾರೆ. ಈ ಲಾಭಾಂಶದ ಹಣದಲ್ಲಿ ಇತರೆ ಆಸ್ತಿ ಗಳನ್ನು ಗಳಿಸಿದ್ದಾರೆ. ಈ ಮೂಲ ಆಸ್ತಿಗಳು ಪೂರ್ವಜರಿಂದ ಬಂದ ಜಂಟಿ ಕುಟುಂಬದ ಆಸ್ತಿಗಳಾಗಿದ್ದು, ತಮಗೆ ಪಾಲು ಸಿಗಬೇಕು. ಈ ಎಲ್ಲ ಆಸ್ತಿಗಳು ಮತ್ತು ಬ್ಯಾಂಕ್ ಶೇವ ಣಿಯಲ್ಲಿಯೂ ತಾನೂ ಭಾಗ ಪಡೆಯುವುದಕ್ಕೆ ಅಧಿಕಾರವಿದೆ. ಆದ್ದರಿಂದ ಆಸ್ತಿಯಲ್ಲಿ ತನಗೆ ಭಾಗ ನೀಡಲು ನಿರ್ದೇಶನ ನೀಡಬೇಕು ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.