ಬೆಂಗಳೂರು: ಬೆಸ್ಕಾಂ(Bescom) ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗೃಹ ಜ್ಯೋತಿ(Gruha Jyoti) ಫಲಾನುಭವಿಗಳ ಮನೆ-ಮನೆ ಸಮೀಕ್ಷೆಗೆ ನೀಡಿರುವ ಗಡುವು ಅಕ್ಟೋಬರ್ 31ಕ್ಕೆ ಮುಕ್ತಾಯ ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳದ ಗ್ರಾಹಕರು ಅಗತ್ಯ ದಾಖಲಾತಿಗಳನ್ನು ಬೆಸ್ಕಾಂ ಉಪ ವಿಭಾಗ ಕಚೇರಿಗೆ ಖುದ್ದಾಗಿ ತೆರಳಿ ಸಲ್ಲಿಸಲು ಬೆಸ್ಕಾಂ ವಿನಂತಿಸಿದೆ.
ಕಳೆದ ಮೂರುವರೆ ತಿಂಗಳಿನಿಂದ ನಡೆಯುತ್ತಿರುವ ಸಮೀಕ್ಷೆಯಲ್ಲಿ ಮನೆಗೆ ಬೀಗ ಹಾಕಿರುವ, ಮನೆ ಖಾಲಿ ಇರುವ ಹಾಗೂ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದ ಗ್ರಾಹಕರಿಗೆ ಬೆಸ್ಕಾಂ ಕಚೇರಿಗೆ ತೆರಳಿ ದಾಖಲಾತಿ ಸಲ್ಲಿಸಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದ್ದು, ಗಡುವಿನೊಳಗೆ ದಾಖಲಾತಿ ಸಲ್ಲಿಸಲು ಬೆಸ್ಕಾಂ ಮನವಿ ಮಾಡಿದ್ದು, ದಾಖಲಾತಿ ಸಲ್ಲಿಸಲು ಇದು ಕೊನೆಯ ಅವಕಾಶ ಎಂದು ಸ್ಪಷ್ಟಪಡಿಸಿದೆ.
ಇದನ್ನೂ ಓದಿ; BESCOM Online Services: ಸಾಫ್ಟ್ವೇರ್ ಅಳವಡಿಕೆ: ಬೆಸ್ಕಾಂನ 20 ಪಟ್ಟಣಗಳಲ್ಲಿ ಸೆ.17ರವರೆಗೆ ಆನ್ಲೈನ್ ಸೇವೆ ಅಲಭ್ಯ
ಬೆಸ್ಕಾಂನ 8 ಜಿಲ್ಲೆಗಳ ವ್ಯಾಪ್ತಿಯಲ್ಲಿ ಭಾಗ್ಯ ಜ್ಯೋತಿ(Bhagya Jyoti), ಕುಟೀರ ಜ್ಯೋತಿ(Kuteera Jyoti) ಹಾಗೂ ಅಮೃತ ಜ್ಯೋತಿ ಯೋಜನೆ(Amruta Jyoti Scheme)ಯ ಗ್ರಾಹಕರು ಸೇರಿದಂತೆ ಒಟ್ಟು 7429773 ಲಕ್ಷ ಗ್ರಾಹಕರು ಗೃಹ ಜ್ಯೋತಿ ಫಲಾನುಭವಿಗಳಿದ್ದು, ಈ ಪೈಕಿ 7317687 ಲಕ್ಷ ಗ್ರಾಹಕರ ಸಮೀಕ್ಷೆ (ಶೇ. 98.49) ಅಕ್ಟೋಬರ್ 22ಕ್ಕೆ ಪೂರ್ಣಗೊಂಡಿದೆ.
ಸಮೀಕ್ಷೆ ಸಂದರ್ಭದಲ್ಲಿ ಬೀಗ ಹಾಕಿರುವ, ಖಾಲಿ ಇರುವ ಮನೆಗಳಿಗೆ ಬೆಸ್ಕಾಂ ಸಿಬ್ಬಂದಿ ಮೂರು ಬಾರಿ ಭೇಟಿ ನೀಡಿದ್ದು, ಈ ವರ್ಗಗಳ ಗ್ರಾಹಕರ ಮೊಬೈಲ್'ಗೆ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವಂತೆ ಸಂದೇಶವನ್ನು ಕೂಡ ಕಳುಹಿಸಲಾಗಿತ್ತು. ಇಂತಹ ಗ್ರಾಹಕರಿಗೆ ದಾಖಲಾತಿ ಸಲ್ಲಿಸಲು ಅ.31 ಕೊನೆಯ ದಿನಾಂಕವಾಗಿದ್ದು, ಗಡುವು ವಿಸ್ತರಣೆ ಇಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.