ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Laxmi Hebbalkar: ನ.19ರಂದು ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅಧಿಕೃತ ಚಾಲನೆ: ಲಕ್ಷ್ಮೀ ಹೆಬ್ಬಾಳ್ಕರ್

Gruhalakshmi Multipurpose Cooperative Society: ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಕಡಿಮೆ ಬಡ್ಡಿ ದರದಲ್ಲಿ 3 ಲಕ್ಷದವರೆಗೂ ಫಲಾನುಭವಿಗಳಿಗೆ ಸಾಲ ನೀಡಲಾಗುವುದು. ಇದರಿಂದ ಮಹಿಳೆಯರಿಗೆ ಮತ್ತಷ್ಟು ಆರ್ಥಿಕ ಶಕ್ತಿ ತುಂಬಿದಂತಾಗುತ್ತದೆ. ಮಹಿಳೆಯರ ಸುರಕ್ಷತೆ ಹಾಗೂ ಆರ್ಥಿಕವಾಗಿ ಸ್ವಾವಲಂಬನೆ ಮಾಡುವುದೇ ನನ್ನ ಹಾಗೂ ನಮ್ಮ ಸರ್ಕಾರದ ಮುಖ್ಯ ಗುರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ. ‌

ನ.19ರಂದು ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಚಾಲನೆ: ಹೆಬ್ಬಾಳ್ಕರ್

ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ನೋಂದಾಯಿತ ಪ್ರಮಾಣ ಪತ್ರವನ್ನು ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಹಸ್ತಾಂತರಿಸಲಾಯಿತು. -

Profile
Siddalinga Swamy Nov 11, 2025 5:04 PM

ಬೆಂಗಳೂರು, ನ.11: ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ನೋಂದಾಯಿತ ಪ್ರಮಾಣ ಪತ್ರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ (Laxmi Hebbalkar) ಅವರಿಗೆ ಸಹಕಾರ ಇಲಾಖೆಯ ಸಹಕಾರ ಸಂಘಗಳ ಅಪರ ನಿಬಂಧಕ ಲಕ್ಷ್ಮೀಪತಯ್ಯ ಹಸ್ತಾಂತರಿಸಿದರು. ವಿಧಾನಸೌಧದ ಕಚೇರಿಯಲ್ಲಿ ಸಚಿವರನ್ನು ಭೇಟಿಯಾಗಿ ಅವರು ಪ್ರಮಾಣಪತ್ರವನ್ನು ಹಸ್ತಾಂತರಿಸಿದರು. ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯನ್ನು (Gruhalakshmi Scheme) ಕಾರ್ಯರೂಪಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಇದೀಗ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಗೃಹಲಕ್ಷ್ಮೀ ಯೋಜನೆಯ ಯಜಮಾನಿಯರಿಗಾಗಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಸ್ಥಾಪಿಸಿದ್ದಾರೆ. ನ.19ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅಧಿಕೃತ ಚಾಲನೆ ಸಿಗಲಿದೆ.

ಮಹಿಳೆಯರ ಸುರಕ್ಷತೆಗಾಗಿ ಅಕ್ಕಾಪಡೆಯನ್ನು ಸಜ್ಜುಗೊಳಿಸುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಇದೀಗ ಮನೆಯ ಯಜಮಾನಿಯರ ಸಬಲೀಕರಣಕ್ಕಾಗಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಗೃಹಲಕ್ಷ್ಮೀ ಯೋಜನೆಗೆ ಮತ್ತೊಂದು ಸ್ವರೂಪ ತಂದಿದ್ದಾರೆ.

Laxmi Hebbalkar 1

ಸುಮಾರು 1 ಕೋಟಿ 24 ಲಕ್ಷದ 12 ಸಾವಿರ ಫಲಾನುಭವಿಗಳು ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯುತ್ತಿದ್ದು, ಇದುವರೆಗೂ 52,416 ಕೋಟಿಗೂ ಅಧಿಕ ಮೊತ್ತವನ್ನು ಫಲಾನುಭವಿಗಳ ಖಾತೆಗೆ ಹಾಕಲಾಗಿದೆ. ಗೃಹಲಕ್ಷ್ಮೀ ಯೋಜನೆಯ ಹಣವನ್ನು ಮತ್ತೊಂದು ರೀತಿಯಲ್ಲಿ ತೊಡಗಿಸಿ ಆದಾಯ ಒದಗಿಸುವ ಸಲುವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಕನಸಿನ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಆರಂಭಿಸಲಾಗುತ್ತಿದೆ.

ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಕಡಿಮೆ ಬಡ್ಡಿ ದರದಲ್ಲಿ 3 ಲಕ್ಷದವರೆಗೂ ಫಲಾನುಭವಿಗಳಿಗೆ ಸಾಲ ನೀಡಲಾಗುವುದು. ಇದರಿಂದ ಮಹಿಳೆಯರಿಗೆ ಮತ್ತಷ್ಟು ಆರ್ಥಿಕ ಶಕ್ತಿ ತುಂಬಿದಂತಾಗುತ್ತದೆ. ಮಹಿಳೆಯರ ಸುರಕ್ಷತೆ ಹಾಗೂ ಆರ್ಥಿಕವಾಗಿ ಸ್ವಾವಲಂಬನೆ ಮಾಡುವುದೇ ನನ್ನ ಹಾಗೂ ನಮ್ಮ ಸರ್ಕಾರದ ಮುಖ್ಯ ಗುರಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.‌

ಇದೇ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಲಕ್ಷ್ಮೀಪತಯ್ಯ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಾಮ್ಲಾ‌ ಇಕ್ಬಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮಹೇಶ್ ಬಾಬು, ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್. ವಿಶ್ವನಾಥ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್, ಜಂಟಿ ನಿರ್ದೇಶಕರಾದ ಪುಷ್ಪ ರಾಯರ್, ನಟರಾಜ್, ಎಂ.ಜಿ. ಪಾಲಿ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನೂ ಓದಿ | Laxmi Hebbalkar: ಗೃಹಲಕ್ಷ್ಮಿ ಸೊಸೈಟಿ ಮೂಲಕ 3 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಫಲಾನುಭವಿಗಳಿಗೆ ಲೋನ್ ಸೌಲಭ್ಯ: ಹೆಬ್ಬಾಳ್ಕರ್‌

ʼಖಾಸಗಿ ಫೈನಾನ್ಸ್‌, ನ್ಯಾಷನಲ್‌ ಬ್ಯಾಂಕ್‌ಗಳಲ್ಲಿ ದುಬಾರಿ ಬಡ್ಡಿಗೆ ಸಾಲ ಪಡೆದು ಮಹಿಳೆಯರು ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿದ್ದಾರೆ. ಇದೀಗ ಗೃಹಲಕ್ಷ್ಮೀ ಹಣದಿಂದಲೇ ಬ್ಯಾಂಕ್‌ ಆರಂಭಿಸಿ ಮಹಿಳೆಯರಿಗೆ ಸಂಕಷ್ಟದಲ್ಲಿ ಸಾಲದ ಸೌಲಭ್ಯ ನೀಡಿ, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡುವುದೇ ನಮ್ಮ ಗುರಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದರು.