ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Hariprasad as KPCC President: ಶಿವನ ಪಟ್ಟ ಇಂದು ಹರಿಗೆ

ರಾಜ್ಯ ಕಾಂಗ್ರೆಸ್‌ನ ಮುಖ್ಯಸ್ಥನ ಜ್ಯೋತಿಯನ್ನು ಬಿ.ಕೆ.ಹರಿಪ್ರಸಾದ್ ಅವರು ಇಂದು ಅಧಿಕೃತವಾಗಿ ಪಡೆದುಕೊಳ್ಳಲಿದ್ದಾರೆ. ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪದಗ್ರಹಣವಾದ ದಿನವೇ ಕೆಪಿಸಿಸಿ ಅಧ್ಯಕ್ಷರನ್ನಾಗಿ ಬಿ.ಕೆ.ಹರಿಪ್ರಸಾದ್ ಅವರನ್ನು ನೇಮಿಸಲಾಗಿತ್ತು. ಅಧಿಕೃತವಾಗಿ ನೇಮಕವಾಗಿದ್ದರೂ, ಅಧಿಕಾರ ಸ್ವೀಕರಿಸಿರಲಿಲ್ಲ.ಭಾನುವಾರ ಅರಮನೆ ಮೈದಾನದಲ್ಲಿ ಬೃಹತ್ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕೃತವಾಗಿ ಪದಗ್ರಹಣ ಮಾಡಲಿದ್ದಾರೆ.

ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿ ಹರಿಪ್ರಸಾದ್ ಅಧಿಕಾರ ಸ್ವೀಕಾರ

ಅಧ್ಯಕ್ಷತೆಯನ್ನು ಹಸ್ತಾಂತರಿಸಲಿದ್ದಾರೆ ಡಿಕೆಶಿ

ರಾಹುಲ್ ಗೈರು

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನ ಮುಖ್ಯಸ್ಥನ ಜ್ಯೋತಿಯನ್ನು ಬಿ.ಕೆ.ಹರಿಪ್ರಸಾದ್ ಅವರು ಇಂದು ಅಧಿಕೃತವಾಗಿ ಪಡೆದುಕೊಳ್ಳಲಿದ್ದಾರೆ. ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪದಗ್ರಹಣವಾದ ದಿನವೇ ಕೆಪಿಸಿಸಿ ಅಧ್ಯಕ್ಷರನ್ನಾಗಿ ಬಿ.ಕೆ.ಹರಿಪ್ರಸಾದ್ ಅವರನ್ನು ನೇಮಿಸಲಾಗಿತ್ತು. ಅಧಿಕೃತವಾಗಿ ನೇಮಕವಾಗಿದ್ದರೂ, ಅಧಿಕಾರ ಸ್ವೀಕರಿಸಿರಲಿಲ್ಲ.ಭಾನುವಾರ ಅರಮನೆ ಮೈದಾನದಲ್ಲಿ ಬೃಹತ್ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕೃತವಾಗಿ ಪದಗ್ರಹಣ ಮಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಎಐಸಿಸಿ ಮಟ್ಟದ ವಿವಿಧ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ಇದನ್ನೂ ಓದಿ: CM DK Shivakumar: 2028ಕ್ಕೆ ನಾನು ಮತ್ತೆ ಮುಖ್ಯಮಂತ್ರಿಯಾಗಲು ಶಕ್ತಿ ತುಂಬಿ: ಕ್ಷೇತ್ರದ ಜನರಿಗೆ ಸಿಎಂ ಡಿ.ಕೆ. ಶಿವಕುಮಾರ್ ಮನವಿ

ಇದರೊಂದಿಗೆ ಸಂಪುಟದ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಸೇರಿದಂತೆ ರಾಜ್ಯ ನಾಯಕರು ಭಾಗವಹಿಸಲಿದ್ದಾರೆ. ಆರಂಭದಲ್ಲಿ ಪದಗ್ರಹಣ ಕಾರ್ಯಕ್ರಮಕ್ಕೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು ಭಾಗವಹಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ರಾಹುಲ್ ಗಾಂಧಿ ಅವರು ಇತರೆ ಕಾರ್ಯಕ್ರಮದಲ್ಲಿರುವ ಕಾರಣ ಪದಗ್ರಹಣ ಕಾರ್ಯಕ್ರಮಕ್ಕೆ ಗೈರಾಗಲಿದ್ದಾರೆ ಎಂದು ತಿಳಿದುಬಂದಿದೆ.

ಭಾನುವಾರ ಅರಮನೆ ಮೈದಾನದ ಕಾರ್ಯಕ್ರಮದ ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಔಪಚಾರಿಕವಾಗಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಹಸ್ತಾಂತರಿಸಲಿದ್ದಾರೆ.

ಕೆಪಿಸಿಸಿ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದ ಹಿನ್ನಲೆಯಲ್ಲಿ ಅರಮನೆ ಮೈದಾನದ ಸುತ್ತ ಮುತ್ತ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ಮುಖ್ಯಮಂತ್ರಿ, ಸಚಿವರು, ಶಾಸಕರು, ಗಣ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಅಲ್ಲದೇ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಮಾರಂಭಕ್ಕೆ ಬರುವ ನಿರೀಕ್ಷೆಯಿದ್ದು, ಮೈದಾನದ ಸುತ್ತಮುತ್ತ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಸುಗಮ ಸಂಚಾರದ ದೃಷ್ಟಿಯಿಂದ ಭಾನುವಾರ ಬೆಳಗ್ಗೆ 7 ರಿಂದ ಸಂಜೆ 4ರವರೆಗೆ ತ್ರಿಪುರವಾಸಿನಿ ಗೇಟ್, ಬಳ್ಳಾರಿ ರಸ್ತೆ, ಸಿ.ವಿ.ರಾಮನ್ ರಸ್ತೆ, ಜಯಮಹಲ್ ರಸ್ತೆಯ ಸಂಚಾರ ವ್ಯವಸ್ಥೆಯಲ್ಲಿ ಮಾರ್ಪಾಡು ಮಾಡಲಾಗಿದೆ.