Hassan Airport: ಹಾಸನ ಏರ್‌ಪೋರ್ಟ್‌ ಕಾಮಗಾರಿ ಶೀಘ್ರ ಮುಗಿಸಿ; ಕೈ ಮುಗಿದು ಕೇಂದ್ರಕ್ಕೆ ಮನವಿ ಮಾಡಿದ ಎಚ್.ಡಿ.ದೇವೇಗೌಡರು

Hassan Airport: ಗುರುವಾರ ರಾಜ್ಯಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿಗಳು, ಹಾಸನದಲ್ಲಿ ನಿರ್ಮಾಣವಾಗುತ್ತಿರುವುದು ಅತ್ಯಂತ ಮಹತ್ವಾಕಾಂಕ್ಷೆಯ ವಿಮಾನ ನಿಲ್ದಾಣವಾಗಿದ್ದು, ಕ್ಷಿಪ್ರಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿದರೆ ಜನತೆಗೆ ಹೆಚ್ಚು ಅನುಕೂಲ ಆಗುತ್ತದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ.

Profile Prabhakara R Dec 5, 2024 9:38 PM
ನವ ದೆಹಲಿ: ಕರ್ನಾಟಕದ ಪ್ರವಾಸೋದ್ಯಮ ಕ್ಷೇತ್ರದ ಬಲವರ್ಧನೆ ಸಹಕಾರಿಯಾಗುವ ಹಾಗೂ ರೈತರಿಗೆ ಅತಿ ಹೆಚ್ಚು ಉಪಯುಕ್ತವಾಗುವ ಹಾಸನ ವಿಮಾನ ನಿಲ್ದಾಣ (Hassan Airport) ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.
ಈ ಬಗ್ಗೆ ಗುರುವಾರ ರಾಜ್ಯಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿಗಳು, ಇದು ಅತ್ಯಂತ ಮಹತ್ವಾಕಾಂಕ್ಷೆಯ ವಿಮಾನ ನಿಲ್ದಾಣವಾಗಿದ್ದು, ಕ್ಷಿಪ್ರಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿದರೆ ಜನತೆಗೆ ಹೆಚ್ಚು ಅನುಕೂಲ ಆಗುತ್ತದೆ. ರಾಜ್ಯಕ್ಕೆ ದೊಡ್ಡ ಕೊಡುಗೆ ನೀಡುತ್ತದೆ ಎಂದು ಒತ್ತಿ ಹೇಳಿದರು.
ಹಾಸನದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಆಗುವುದರಿಂದ ಇತಿಹಾಸ ಪ್ರಸಿದ್ಧ ಬೇಲೂರು-ಹಳೇಬೀಡು- ಶ್ರವಣಬೆಳಗೋಳ ತಾಣಗಳ ಪ್ರವಾಸೋದ್ಯಮ ಅಭಿವೃದ್ಧಿಯಾಗುವುದರ ಜತೆಗೆ ಜಿಲ್ಲೆಯ ರೈತರಿಗೆ ಕೃಷಿ ರಫ್ತು ಹೆಚ್ಚಿಸುವಲ್ಲಿ ಸಹಕಾರಿ ಆಗುತ್ತದೆ. ಈ ನಿಟ್ಟಿನಲ್ಲಿ ವಿಮಾನ ನಿಲ್ದಾಣ ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸಬೇಕು ಎಂದು ಅವರು ಕೋರಿದರು.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿ ಆಗಿರುವ ಹಾಸನ ಜಿಲ್ಲೆಯ ಪ್ರವಾಸಿ ತಾಣಗಳನ್ನು ವೀಕ್ಷಿಸಲು ದೇಶ ವಿದೇಶಗಳಿಂದ ಅಸಂಖ್ಯಾತ ಪ್ರವಾಸಿಗರು ಬರುತ್ತಾರೆ. ಐತಿಹಾಸಿಕ ಬೇಲೂರು, ಹಳೆಬೀಡು ಹಾಗೂ ಶ್ರವಣಬೆಳಗೊಳ ಪ್ರವಾಸಿ ತಾಣಗಳಿಗೆ ಭೇಟಿ ಕೊಡಲು ಇವರೆಲ್ಲರೂ ಬರುತ್ತಾರೆ. ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಿದರೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಪ್ರವಾಸಿಗರು ಇಲ್ಲಿಗೆ ಬರುತ್ತಾರೆ ಎಂದು ಅವರು ಹೇಳಿದರು.
ಈವರೆಗೆ ಹಲವಾರು ಸರ್ಕಾರಗಳು ಬಂದು ಹೋಗಿವೆ. ದುರದೃಷ್ಟವಶಾತ್ ಹಾಸನ ವಿಮಾನ ನಿಲ್ದಾಣ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ. ಆರ್ಥಿಕ ಹಾಗೂ ವ್ಯೂಹಾತ್ಮಕ ಉದ್ದೇಶದಿಂದ ಹಾಸನ ವಿಮಾನ ನಿಲ್ದಾಣ ಬಹಳ ಮಹತ್ವದ್ದಾಗಿದೆ ಎಂದು ಅವರು ಹೇಳಿದರು.
ಹಾಸನದಲ್ಲಿ ಮೂಲಭೂತ ಸೌಕರ್ಯಗಳಿಗೆ ಕೊರತೆ ಇಲ್ಲ. ಅತ್ಯುತ್ತಮ ಶಿಕ್ಷಕ ಸಂಸ್ಥೆಗಳು ಮತ್ತು ವೈದ್ಯಕೀಯ, ಎಂಜಿನಿಯರಿಂಗ್, ಕಾನೂನು ಕಾಲೇಜುಗಳು ಇವೆ. ಅಲ್ಲದೆ, ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಉಪಗ್ರಹ ನಿಯಂತ್ರಣ ಕೇಂದ್ರವೂ ಅಲ್ಲಿದೆ. ಕಾಫಿ, ಚಹಾ ರಫ್ತಿನಲ್ಲಿ ಹಾಸನ ಮುಂಚೂಣಿಯಲ್ಲಿದೆ. ಇದು ವಿದೇಶಿ ವಿನಿಮಯ ಗಳಿಕೆಗೆ ಹೆಚ್ಚು ಪೂರಕವಾಗಿದೆ. ಪ್ರತಿ ತಿಂಗಳು ಹಾಸನ ಜಿಲ್ಲೆಯ ರೈತರು ಹಾಲು ಉತ್ಪಾದನೆಯ ಮೂಲಕ ₹900 ಕೋಟಿ ದುಡಿಮೆ ಮಾಡುತ್ತಿದ್ದಾರೆ. ವಿಮಾನ ನಿಲ್ದಾಣ ಬಂದರೆ ಹಾಲು, ಹಾಲಿನ ಉತ್ಪನ್ನಗಳ ರಫ್ತಿಗೆ ಹೆಚ್ಚು ಅನುಕೂಲ ಆಗುತ್ತದೆ. ಹಾಗೆಯೇ, ಕಾಫಿ, ಚಹಾ ಇನ್ನಿತರೆ ಕೃಷಿ ಉತ್ಪನ್ನಗಳ ರಫ್ತಿಗೆ ಅನುಕೂಲವಾಗಿ ವಿಜ್ಞಾನ, ತಂತ್ರಜ್ಞಾನ, ಪ್ರವಾಸೋದ್ಯಮ ಕ್ಷೇತ್ರಗಳ ಅಭಿವೃದ್ಧಿಗೆ ಸಹಕಾರಿ ಆಗುತ್ತದೆ ಎಂದು ದೇವೇಗೌಡರು ಪ್ರತಿಪಾದಿಸಿದರು.
ಹಾಸನವು ಮಂಗಳೂರು ಮತ್ತು ಚೆನ್ನೈ ಬಂದರುಗಳ ನಡುವೆ ಆಯಕಟ್ಟಿನ ಸ್ಥಳವಾಗಿದೆ ಎಂದು ವಿವರಿಸಿದ ಮಾಜಿ ಪ್ರಧಾನಿಗಳು; ಉತ್ತಮ ಸಂಪರ್ಕದಿಂದ ಹಾಸನ ಅತಿದೊಡ್ಡ ವಾಣಿಜ್ಯ ಕೇಂದ್ರವಾಗಿದೆ. ಬೆಂಗಳೂರು-ಹಾಸನ ಹೆದ್ದಾರಿಯ ಭಾಗಗಳನ್ನು ಈಗಾಗಲೇ ಕೈಗಾರಿಕಾ ಕಾರಿಡಾರ್ ಎಂದು ಘೋಷಿಸಲಾಗಿದ್ದು, ಹೈದರಾಬಾದ್-ಬೆಂಗಳೂರು ಕಾರಿಡಾರ್ ಇದಕ್ಕೆ ಪೂರಕವಾಗಿದೆ ಎಂದು ಅವರು ಹೇಳಿದರು.
ಹಾಸನದಲ್ಲಿ ವಿಮಾನ ನಿಲ್ದಾಣವು ಬೆಂಗಳೂರು, ಮಂಗಳೂರು ಮತ್ತು ಚೆನ್ನೈಗಳನ್ನು ಉತ್ತಮವಾಗಿ ಸಂಪರ್ಕಿಸುತ್ತದೆ. ಇದು ಆರ್ಥಿಕವಾಗಿ ಲಾಭದಾಯಕ ಮತ್ತು ಕಾರ್ಯತಂತ್ರದ ಭಾಗವಾಗಿರುತ್ತದೆ ಎಂದು ಅವರು ನುಡಿದರು.
ರಾಜಕೀಯ ಅಡೆತಡೆಗಳು ಹಾಗೂ ಬದ್ಧತೆ:ಹಾಸನ ವಿಮಾನ ನಿಲ್ದಾಣ ಯೋಜನೆ ಎದುರಿಸುತ್ತಿರುವ ರಾಜಕೀಯ ಸವಾಲುಗಳನ್ನು ವಿವರಿಸಿದ ಮಾಜಿ ಪ್ರಧಾನಿಗಳು, ಬೆಂಗಳೂರಿನ ಎಚ್‌ಎಎಲ್‌ನಲ್ಲಿ ಲಘು ಯುದ್ಧ ವಿಮಾನ ಮತ್ತು 65 ಆಸನಗಳ ಲಘು ವಿಮಾನಗಳ ಉತ್ಪಾದನೆಗೆ ಮಂಜೂರಾತಿ ನೀಡಿದ ವಿಷಯವನ್ನು ಉಲ್ಲೇಖಿಸಿದರು.
ಹಾಸನ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿ ಕರ್ನಾಟಕದ ಐವರು ಮುಖ್ಯಮಂತ್ರಿಗಳು ರಾಜಕೀಯ ಮಾಡಿದ್ದಾರೆ. ನನ್ನ ಜೀವನದ ಕೊನೆಯ ಹಂತದಲ್ಲಿ, ನಾನು ಈ ಸದನದಲ್ಲಿ ಕುಳಿತು, ಈ ಯೋಜನೆಯು ಅಂತಿಮವಾಗಿ ಪೂರ್ಣಗೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ರೈತರಿಗಾಗಿ, ಹಾಸನ ಜಿಲ್ಲೆಯ ಅಭಿವೃದ್ಧಿಗಾಗಿ, ಕರ್ನಾಟಕಕ್ಕಾಗಿ, ಭಾರತದ ಪ್ರಗತಿಗಾಗಿ ಈ ವಿಮಾನ ನಿಲ್ದಾಣ ಆದಷ್ಟು ಬೇಗ ನಿರ್ಮಾಣ ಆಗಬೇಕಿದೆ ಎಂದು ಅವರು ಒತ್ತಿ ಹೇಳಿದರು.
ರಾಜ್ಯಸಭೆಯ ಸಭಾಪತಿಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಪ್ರಧಾನಿಗಳು, ಭಾವುಕರಾಗಿ ಮನವಿ ಮಾಡಿದರು. “ಸರ್, ನೀವು ರೈತರ ಬಗ್ಗೆ ತುಂಬಾ ಕಾಳಜಿ, ಬದ್ಧತೆಯಿಂದ ಮಾತನಾಡುತ್ತೀರಿ. ಲೋಕಸಭೆ ಮತ್ತು ವಿಧಾನಸಭೆ ಎರಡಕ್ಕೂ ಏಳು ಬಾರಿ ಆಯ್ಕೆಯಾಗಿರುವ ರೈತ ನಾನು. ನನ್ನ ಜೀವನದ 66 ವರ್ಷಗಳನ್ನು ಸಾರ್ವಜನಿಕ ಸೇವೆಗೆ ಮೀಸಲಿಟ್ಟಿದ್ದೇನೆ. ಹಾಸನ ವಿಮಾನ ನಿಲ್ದಾಣ ಪೂರ್ಣಗೊಳಿಸಬೇಕು. ಇದು ರೈತರನ್ನು ಉನ್ನತಿಗೆ ತರುತ್ತದೆ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ. ಇದು ಕೇವಲ ಬೇಡಿಕೆಯಲ್ಲ; ಇದು ಈ ಸಂದರ್ಭದ ತುರ್ತು ಅಗತ್ಯವಾಗಿದೆ" ಎಂದು ಕೈ ಮುಗಿದು ಮನವಿ ಮಾಡಿದರು.
ಮಾಜಿ ಪ್ರಧಾನಿಗಳನ್ನು ಶ್ಲಾಘಿಸಿದ ಉಪ ರಾಷ್ಟ್ರಪತಿ ಜಗದೀಪ್ ಧನಕರ್ಮಾಜಿ ಪ್ರಧಾನಿಗಳ ಮಾತನ್ನು ಆಲಿಸಿದ ನಂತರ ಸದನವನ್ನು ಉದ್ದೇಶಿಸಿ ಮಾತನಾಡಿದ ಸಭಾಪತಿಗಳಾದ ಜಗದೀಪ್‌ ಧನಕರ್ ಅವರು, “ಶ್ರೀ ದೇವೇಗೌಡರು ರೈತರು ಮತ್ತು ಅವರ ಸಮಸ್ಯೆಗಳ ಬಗ್ಗೆ ಮಂಡಿಸಿದ ಎಲ್ಲಾ ವಿಚಾರಗಳು ನಮ್ಮೆಲ್ಲರ ಮುಂದಿವೆ. ಅವರ ಉಪಸ್ಥಿತಿಯನ್ನು ನಾವು ಆಶೀರ್ವಾದವೆಂದು ಪರಿಗಣಿಸುತ್ತೇವೆ. ಅವರ ಭಾವನೆಗಳು ನಮ್ಮ ಪಾಲಿಗೆ ಹೆಚ್ಚಿನ ಮೌಲ್ಯಯುತವಾಗಿವೆ" ಎಂದರು.
Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?