ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ದ್ವೇಷ ಭಾಷಣ ಮಸೂದೆ ವಿಪಕ್ಷವನ್ನು ಮಟ್ಟ ಹಾಕಲು ತಂದ ಕಾಯ್ದೆ: ಬಿ.ವೈ. ವಿಜಯೇಂದ್ರ

BY Vijayendra: ರಾಜ್ಯಪಾಲರು ದ್ವೇಷ ಭಾಷಣ ಮಸೂದೆಗೆ ಅಂಕಿತ ಹಾಕದೆ ವಾಪಸ್‌ ಕಳುಹಿಸಿರುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. ರಾಜ್ಯ ಸರ್ಕಾರವು ಆತುರಾತುರವಾಗಿ ದ್ವೇಷ ಭಾಷಣ ಮಸೂದೆಯನ್ನು ಮಂಡನೆ ಮಾಡಿದೆ. ಈ ಕಾಯ್ದೆ ವಿಪಕ್ಷವನ್ನು ಮಟ್ಟ ಹಾಕಲು ತಂದ ಕಾಯ್ದೆ ಎಂದು ಟೀಕಿಸಿದ್ದಾರೆ.

ದ್ವೇಷ ಭಾಷಣ ಮಸೂದೆ ಪ್ರಜಾಪ್ರಭುತ್ವಗೆ ಮಾರಕ: ಬಿ.ವೈ. ವಿಜಯೇಂದ್ರ

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (ಸಂಗ್ರಹ ಚಿತ್ರ) -

Profile
Siddalinga Swamy Feb 2, 2026 5:00 PM

ಶಿವಮೊಗ್ಗ, ಫೆ.4: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಚರ್ಚೆಗೂ ಅವಕಾಶ ನೀಡದೇ ಆತುರಾತುರವಾಗಿ ದ್ವೇಷ ಭಾಷಣ ಮಸೂದೆಯನ್ನು ಸರ್ಕಾರ ಮಂಡನೆ ಮಾಡಿಸಿತ್ತು. ಈ ಕಾಯ್ದೆ ವಿಪಕ್ಷವನ್ನು ಮಟ್ಟ ಹಾಕಲು ತಂದ ಕಾಯ್ದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.‌ ವಿಜಯೇಂದ್ರ (BY Vijayendra) ಆರೋಪಿಸಿದ್ದಾರೆ.

ಮಾಧ್ಯಮಗಳ ಜತೆ ಸೋಮವಾರ ಮಾತನಾಡಿದ ವಿಜಯೇಂದ್ರ ಮಾತನಾಡಿದರು. ರಾಜ್ಯಪಾಲರು ಮಸೂದೆಗೆ ಅಂಕಿತ ಹಾಕದಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಈ ಮಸೂದೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಪರಿಣಾಮವಾಗಿ ತರೀಕೆರೆಯಲ್ಲಿ ನಮ್ಮ ಹಿಂದೂ ಕಾರ್ಯಕರ್ತ ವಿಕಾಸ್ ಪುತ್ತೂರು ಭಾಷಣವನ್ನೇ ಆರಂಭಿಸಿರಲಿಲ್ಲ, ಅಲ್ಲಿ ಪೊಲೀಸ್ ಅಧಿಕಾರಿಗಳು ಹೋಗಿ ನೋಟಿಸ್ ಕೊಟ್ಟು, ನೀವೇನಾದರೂ ಮಾತನಾಡಿದರೆ, ಬಂಧಿಸುವುದಾಗಿ ಬೆದರಿಸಿದ್ದಾರೆ ಎಂದು ಟೀಕಿಸಿದರು.

ದಕ್ಷಿಣ ಕನ್ನಡದಲ್ಲಿ ಬಜರಂಗದಳದ ಕಾರ್ಯಕರ್ತ ಶರಣ್ ಪಂಪ್ವೆಲ್, ಗಡಿ ದಾಟದಂತೆ ಕಡಿವಾಣ ಹಾಕಿದ್ದಾರೆ. ಬೆಂಗಳೂರಿನಲ್ಲಿ ಪುನೀತ್ ಕೆರೆಹಳ್ಳಿ ಅವರು ಪ್ರಾಮಾಣಿಕವಾಗಿ ಬಾಂಗ್ಲಾ ದೇಶೀಯರನ್ನು ಪತ್ತೆ ಹಚ್ಚಿ ಪೊಲೀಸರು ಮಾಡುವ ಕೆಲಸ ಮಾಡಿದರೆ, ಅವರನ್ನೂ ಬಂಧಿಸಿದ್ದಾರೆ ಎಂದು ಆರೋಪಿಸಿದರು.

ದಕ್ಷಿಣ ಭಾರತದ ನಾಯಕರಾಗಲು ಹೊರಟಿದ್ದಾರೆ

ಸಿದ್ದರಾಮಯ್ಯ ಅವರು ಹಿಂದೆ ವೀರಶೈವ ಲಿಂಗಾಯತ ಪ್ರತ್ಯೇಕ ಎಂದು ಒಡೆಯಲು ಮುಂದಾಗಿದ್ದರು. ಈಗ ತಮ್ಮ ಲೋಪ ಮುಚ್ಚಿ ಹಾಕಿಕೊಳ್ಳಲು ರಾಜ್ಯವನ್ನು ಕೇಂದ್ರದ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ಕೇಂದ್ರ ಸರ್ಕಾರವು ರಾಜ್ಯಕ್ಕೆ ಅನ್ಯಾಯ ಮಾಡಿದೆ, ಕೇಂದ್ರ ಸರ್ಕಾರ ದಕ್ಷಿಣ ಭಾರತದ ರಾಜ್ಯಗಳಿಗೂ ಅನ್ಯಾಯ ಮಾಡಿದೆ ಎಂದು ತಿಳಿಸಿ ದಕ್ಷಿಣ ಭಾರತದ ನಾಯಕರಾಗಲು ಹೊರಟಿದ್ದಾರೆ ಎಂದು ಟೀಕಿಸಿದರು. ಇಂಥ ವಿಭಜಕ ಮಾನಸಿಕ ಸ್ಥಿತಿ ಸಿದ್ದರಾಮಯ್ಯ ಅವರ ದೃಷ್ಟಿಯಿಂದಲೂ ಒಳ್ಳೆಯದಲ್ಲ. ನಮ್ಮ ರಾಜ್ಯದ ದೃಷ್ಟಿ, ಈ ದೇಶದ ಅಭಿವೃದ್ಧಿ ದೃಷ್ಟಿಯಿಂದಲೂ ಒಳ್ಳೆಯದಲ್ಲ ಎಂದು ಹೇಳಿದರು.

ಕೇಂದ್ರದಿಂದ ರಾಜ್ಯಕ್ಕೆ ಯಾವುದೇ ರೀತಿ ಅನ್ಯಾಯ ಆಗಿಲ್ಲ. ಸಣ್ಣಪುಟ್ಟ ವ್ಯತ್ಯಾಸ ಇದ್ದರೆ ಪ್ರತಿಭಟನೆ ಮಾಡದೇ, ಕೇಂದ್ರ ಸರ್ಕಾರದ ಮನ ಒಲಿಸಬೇಕಿತ್ತು ಎಂದರು. ಕರ್ನಾಟಕದಲ್ಲಿ ಬೆಂಗಳೂರು ಮಹಾನಗರ ಗರಿಷ್ಠ ತೆರಿಗೆ ಕೊಡುತ್ತದೆ. ಈ ತೆರಿಗೆ ಹಣವನ್ನು ಬೆಂಗಳೂರಿಗೇ ಬಂಡವಾಳವಾಗಿ ಬಳಸುವುದಾಗಿ ಹೇಳಿದರೆ, ರಾಯಚೂರು, ಕೊಪ್ಪಳ, ಬೆಳಗಾವಿ, ಶಿವಮೊಗ್ಗ ಜಿಲ್ಲೆ ಸ್ಥಿತಿ ಏನಾಗಬೇಕು ಎಂದು ಕೇಳಿದರು.

ಪೆನ್ನಾರ್​ ನದಿ ನೀರು ಹಂಚಿಕೆ ವಿವಾದ; ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ

ಹಣಕಾಸಿನ ಸಚಿವರಾಗಿ ಸಿದ್ದರಾಮಯ್ಯ ಅವರು ರಾಜ್ಯದ ಅಭಿವೃದ್ಧಿಯನ್ನು ಚಿಂತಿಸಬೇಕಲ್ಲವೇ? ಅದೇ ರೀತಿ ಈ ದೇಶದ ಪ್ರಧಾನಿ, ಹಣಕಾಸಿನ ಸಚಿವೆಯಾಗಲೀ ಜಾಗತಿಕ ಸವಾಲು ಎದುರಿಸುವ ಸಂದರ್ಭದಲ್ಲಿ ಹಾಗೂ ಭಾರತವನ್ನು ಅಭಿವೃದ್ಧಿ ಪಥದಲ್ಲಿ ಒಯ್ಯುವ ಸಂದರ್ಭದಲ್ಲಿ ಕರ್ನಾಟಕದ ಜತೆಗೆ ಮಹಾರಾಷ್ಟ್ರವೂ ಹೆಚ್ಚು ತೆರಿಗೆ ನೀಡುತ್ತದೆ, ಹಾಗೆಂದು ಕರ್ನಾಟಕಕ್ಕೆ ಅನ್ಯಾಯ ಮಾಡಬೇಕೆಂದಲ್ಲ. ಕರ್ನಾಟಕಕ್ಕೂ ನ್ಯಾಯ ಕೊಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದರು.