ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ತಾಳ್ಮೆ ಇರಲಿ, ಎಲ್ಲರಿಗೂ ಅವಕಾಶ ಸಿಗಲಿದೆ: 133 ಶಾಸಕರೂ ಸಚಿವರಾಗಲೂ ಅರ್ಹರು: ಸಿಎಂ ಡಿಕೆ ಶಿವಕುಮಾರ್

ಒಂದು ಅವಧಿಯಲ್ಲಿ ಸ್ವತಃ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವಕಾಶ ಸಿಕ್ಕಿರಲಿಲ್ಲ ಎಂದರು. ನೂತನ ವಾಗಿ ಅಧಿಕಾರ ಸ್ವೀಕರಿಸಿರುವ ಸಚಿವರಿಗೆ ವಿಶ್ರಮಿಸುವ ಸಮಯವಿಲ್ಲ. ಎಲ್ಲ ಸಚಿವರಿಗೆ ಬೆಂಗಳೂರಿ ನಲ್ಲಿ ತಮ್ಮ ಕೆಲಸಗಳನ್ನು ಮುಗಿಸಲು ಕೇವಲ ಒಂದು ದಿನದ ಕಾಲಾವಕಾಶ ನೀಡಲಾಗಿದೆ. ಮರುದಿನ ದಿಂದಲೇ ಅವರು ತಮಗೆ ನಿಯೋಜಿಸಲಾದ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವರಾಗಿ, ಕ್ಷೇತ್ರ ಭೇಟಿ ಮಾಡುವುದು ಅವರ ಪ್ರಮುಖ ಜವಾಬ್ದಾರಿಯಾಗಿದೆ.

ತಾಳ್ಮೆ ಇರಲಿ, ಎಲ್ಲರಿಗೂ ಅವಕಾಶ ಸಿಗಲಿದೆ

-

Profile
Ashok Nayak Aug 4, 2026 12:16 PM

ಬೆಂಗಳೂರು ಸಂಪುಟದಲ್ಲಿ 33 ಜನರನ್ನು ಸೇರಿಸಿಕೊಳ್ಳಲು ಮಾತ್ರ ಅವಕಾಶವಿರುತ್ತದೆ. ಕಾಂಗ್ರೆಸ್‌ನ 133 ಜನರೂ ಸಚಿವರಾಗಲೂ ಅರ್ಹರಿದ್ದಾರೆ. ಆದರೆ ಪಕ್ಷದ ಹೈಕಮಾಂಡ್ ಅಳೆದು ತೂಗಿ ತೀರ್ಮಾನಿಸಿದೆ. ಈ ಸಮಯದಲ್ಲಿ ಅಸಮಾಧಾನವಾಗುವುದು ಸಹಜ. ಆದರೆ ತಾಳ್ಮೆಯಿದ್ದ ಇದ್ದರೆ ಎಲ್ಲವೂ ಸಿಗಲಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಸಂಪುಟ ವಿಸ್ತರಣೆ ಬಳಿಕ ನಡೆದ ಮೊದಲ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸಬರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಸುಮಾರು 19 ಹೊಸ ಸದಸ್ಯ ರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ. ಈ ಹಿಂದೆ ವೀರೇಂದ್ರ ಪಾಟೀಲ, ಎಸ್. ಬಂಗಾರಪ್ಪ, ಧರ್ಮಸಿಂಗ್ ಮತ್ತು ಎಸ್.ಎಂ.ಕೃಷ್ಣ ಅವರ ಕಾಲದಲ್ಲಿ ನಾನು, ಪರಮೇಶ್ವರ ಸೇರಿದಂತೆ ಎಷ್ಟೋ ಸಮರ್ಥ ಮತ್ತು ಹಿರಿಯ ನಾಯಕರಿಗೆ ಅವಕಾಶ ಸಿಕ್ಕಿರಲಿಲ್ಲ.

ಒಂದು ಅವಧಿಯಲ್ಲಿ ಸ್ವತಃ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವಕಾಶ ಸಿಕ್ಕಿರಲಿಲ್ಲ ಎಂದರು. ನೂತನವಾಗಿ ಅಧಿಕಾರ ಸ್ವೀಕರಿಸಿರುವ ಸಚಿವರಿಗೆ ವಿಶ್ರಮಿಸುವ ಸಮಯವಿಲ್ಲ. ಎಲ್ಲ ಸಚಿವರಿಗೆ ಬೆಂಗಳೂರಿನಲ್ಲಿ ತಮ್ಮ ಕೆಲಸಗಳನ್ನು ಮುಗಿಸಲು ಕೇವಲ ಒಂದು ದಿನದ ಕಾಲಾವಕಾಶ ನೀಡಲಾಗಿದೆ.

ಮರುದಿನದಿಂದಲೇ ಅವರು ತಮಗೆ ನಿಯೋಜಿಸಲಾದ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳ ಬೇಕು. ಜಿಲ್ಲಾ ಉಸ್ತುವಾರಿ ಸಚಿವರಾಗಿ, ಕ್ಷೇತ್ರ ಭೇಟಿ ಮಾಡುವುದು ಅವರ ಪ್ರಮುಖ ಜವಾಬ್ದಾರಿ ಯಾಗಿದೆ. ಜಿಲ್ಲೆಯಲ್ಲಿ ಬರಗಾಲವಿದೆಯೇ, ಕುಡಿಯುವ ನೀರಿನ ಕೊರತೆಯಿದೆಯೇ ಅಥವಾ ಪ್ರವಾಹ ದಿಂದ ಹಾನಿಯಾಗಿದೆಯೇ ಎಂಬ ವಾಸ್ತವ ಪರಿಸ್ಥಿತಿಯನ್ನು ಅರಿತು ಕಂದಾಯ ಸಚಿವರಿಗೆ ವಿವರ ವಾದ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ಸಿದ್ದರಾಮಯ್ಯಗೆ ಅಸಮಾಧಾನವಿಲ್ಲ: ಇನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಗೈರಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಅವರಿಗೆ ಅಸಮಾಧಾನವಿಲ್ಲ. ಅವರ ಜನ್ಮದಿನವಿದ್ದ ಕಾರಣ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿಲ್ಲ. ಇದನ್ನು ಅನ್ಯಥ ಭಾವಿಸುವ ಅಗತ್ಯವಿಲ್ಲ. ನಾನು ಅವರೊಂದಿಗೆ ಚರ್ಚಿಸಿದ್ದೇನೆ. ನಾನು ಸಿದ್ದರಾಮಯ್ಯ ಅವರ ಟೀಂ. ನಮ್ಮದು ಏನಿದ್ದರೂ ಒಂದೇ ತಂಡ ಎಂದು ಸ್ಪಷ್ಟಪಡಿಸಿದರು. ಮಾಧ್ಯಮಗಳಲ್ಲಿ ಬಂದಿದ್ದು, ಪಕ್ಷದ ಕಾರ್ಯಕರ್ತರು ಹರಿಬಿಟ್ಟ ಪಟ್ಟಿ ಅಂತಿಮವಲ್ಲ. ನಾನು ರಾಜ್ಯಪಾಲರಿಗೆ ಕಳುಹಿಸಿದ್ದ ಪಟ್ಟಿಯೇ ಅಂತಿಮ. ನಾನು ಪಕ್ಷದ ಹೈಕಮಾಂಡ್ ಹೇಳಿದಂತೆ ಸಂಪುಟ ವಿಸ್ತರಣೆ ಮಾಡಲಾಗಿದೆ. ಅಸಮಾಧಾನ ಸಹಜ ಎಂದು ಹೇಳಿದರು.

111 ತಾಲೂಕುಗಳಲ್ಲಿ ಒಣಹವೆ ಮುಂದುವರಿಕೆ ಇನ್ನು ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ರಾಜ್ಯದಲ್ಲಿ ಬರ ಪರಿಸ್ಥಿತಿ ಮುಂದುವರಿ ದಿದ್ದು, ಉತ್ತರ ಕರ್ನಾಟಕ ಭಾಗದ 111 ತಾಲೂಕುಗಳಲ್ಲಿ 4 ವಾರಗಳಿಂದ ಒಣಹವೆ ಮುಂದು ವರಿದಿದೆ.

ಸೋಮವಾರದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಯವರು ಹೊಸ ಸಚಿವರಿಗೆ ಬಹಳ ವಿಸ್ತಾರವಾಗಿ ಜವಾಬ್ದಾರಿಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ರಾಜ್ಯದಲ್ಲಿ ಬರದ ಪರಿಸ್ಥಿತಿ ಇದ್ದು, ಕೆಲವು ಜಿಗಳಲ್ಲಿ ಮಾತ್ರ ಮಳೆಯಾಗುತ್ತಿದೆ. ಕೆಲವು ಜಲಾಶಯಗಳಿಗೆ ನೀರು ಹರಿದು ಬರುತ್ತಿದೆ ಎಂದರು. ಕಾವೇರಿ ಜಲಾನಯನ ಪ್ರದೇಶದಲ್ಲಿ ಮೂರು ಡ್ಯಾಮ್ ಗಳಲ್ಲಿ ಶೇ.90ರಷ್ಟು ನೀರು ತುಂಬಿದೆ. ಕೆಆರ್ ಎಸ್ ಜಲಾಶಯದಲ್ಲಿ ಒಳ ಹರಿವು ಹೆಚ್ಚಾಗಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ಶೇ. 90ರಷ್ಟು ನೀರು ತುಂಬುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಕೆಲವು ಜಿಗಳಲ್ಲಿ ಬರದ ಪರಿಸ್ಥಿತಿ ಮುಂದುವರಿದಿದೆ ಎಂದರು.

image

ತಮಿಳುನಾಡಿನವರು ನೀರು ಬಿಡುವ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ನಾವು ಯಾವ ರೀತಿ ಮುಂದುವರೆಯಬೇಕು ಎನ್ನುವ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚಿಸಿ, ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು.

- ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ