ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

HD Kumaraswamy: ಹೆಚ್.ಡಿ. ಕುಮಾರಸ್ವಾಮಿ 66ನೇ ಹುಟ್ಟು ಹಬ್ಬಕ್ಕೆ ಪ್ರಧಾನಿ ಮೋದಿಯಿಂದ ಸ್ಪೆಷಲ್‌ ವಿಶ್‌; ಭಾವುಕರಾದ ಕೇಂದ್ರ ಸಚಿವ

HD Kumaraswamy Birthday: ಕೇಂದ್ರ ಸಚಿವ ಹಾಗೂ ಜೆಡಿಎಸ್‌ ನಾಯಕ ಎಚ್.‌ ಡಿ ಕುಮಾರ ಸ್ವಾಮಿಯವರು ಇಂದು 66 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಹೆಚ್‌ಡಿಕೆ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ಪ್ರಧಾನಿ ಮೋದಿ ತಮ್ಮ ಎಕ್ಸ್‌ ಖಾತೆಯಲ್ಲಿ ಕುಮಾರಸ್ವಾಮಿ ಅವರಿಗೆ ಹುಟ್ಟು ಹಬ್ಬದ ಶುಭಾಶಯವನ್ನು ತಿಳಿಸಿದರು.

ಕುಮಾರಸ್ವಾಮಿ  ಹುಟ್ಟು ಹಬ್ಬಕ್ಕೆ ಪ್ರಧಾನಿ ಮೋದಿಯಿಂದ ಸ್ಪೆಷಲ್‌ ವಿಶ್‌

ಹೆಚ್‌. ಡಿ ಕುಮಾರಸ್ವಾಮಿ ಹಾಗೂ ಮೋದಿ -

Vishakha Bhat Heggar
Vishakha Bhat Heggar Dec 16, 2025 1:49 PM

ಬೆಂಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್‌ ನಾಯಕ ಹೆಚ್.‌ ಡಿ ಕುಮಾರಸ್ವಾಮಿಯವರು (HD Kumaraswamy) ಇಂದು 66 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಸೇರಿದಂತೆ ಅನೇಕ ಗಣ್ಯರು ಹೆಚ್‌ಡಿಕೆ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ಪ್ರಧಾನಿ ಮೋದಿ ತಮ್ಮ ಎಕ್ಸ್‌ ಖಾತೆಯಲ್ಲಿ ಕುಮಾರಸ್ವಾಮಿ ಅವರಿಗೆ ಹುಟ್ಟು ಹಬ್ಬದ ಶುಭಾಶಯವನ್ನು ತಿಳಿಸಿದರು. ಜನ್ಮದಿನಕ್ಕೆ ಶುಭಾಶಯ ಕೋರಿದ ಪ್ರಧಾನಿ ಮೋದಿ ಅವರಿಗೆ ಹೆಚ್‌ಡಿ ಕುಮಾರಸ್ವಾಮಿ ಧನ್ಯವಾದ ಅರ್ಪಿಸಿದ್ದಾರೆ. ಪ್ರಧಾನಿ ಅವರ ಶುಭಾಶೀರ್ವಾದಿಂದ ಭಾವುಕರಾಗಿರುವುದಾಗಿ ಕೇಂದ್ರ ಸಚಿವ ಹೇಳಿದರು.

ಟ್ವೀಟ್‌ ಮಾಡಿ ಧನ್ಯವಾದ ತಿಳಿಸಿರುವ ಕುಮಾರಸ್ವಾಮಿ, ನನ್ನ ಹುಟ್ಟುಹಬ್ಬದ ಈ ಸಂದರ್ಭದಲ್ಲಿ ಗೌರವಾನ್ವಿತ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ಶುಭಾಶಯ ಹಾಗೂ ಶುಭಾಶೀರ್ವಾದದಿಂದ ನಾನು ಭಾವುಕನಾಗಿದ್ದೇನೆ ಮತ್ತು ವಿನೀತನಾಗಿದ್ದೇನೆ. ಅವರ ಪಿತೃವಾತ್ಸಲ್ಯಕ್ಕೆ ನಾನು ಧನ್ಯನಾಗಿದ್ದೇನೆ. ಮಾನ್ಯ ಪ್ರಧಾನಿಗಳ ಚಿಂತನಶೀಲ ಮಾರ್ಗದರ್ಶನ, ಪ್ರೋತ್ಸಾಹ ಮತ್ತು ನನ್ನ ಮೇಲಿನ ನಂಬಿಕೆಗೆ ನಾನು ಚಿರಋಣಿ ಆಗಿದ್ದೇನೆ.

ಕುಮಾರಸ್ವಾಮಿ ಟ್ವೀಟ್‌



ಪ್ರಧಾನಮಂತ್ರಿಗಳ ಶುಭಾಶೀರ್ವಾದ ಮತ್ತು ಸಂದೇಶವು ಸಾರ್ವಜನಿಕ ಸೇವೆಯು ಕೇವಲ ಒಂದು ಜವಾಬ್ದಾರಿಯಲ್ಲ; ಬದಲಿಗೆ ರಾಷ್ಟ್ರ, ಸಮಾಜ ಮತ್ತು ಸಾರ್ವಜನಿಕರ ಕಲ್ಯಾಣಕ್ಕಾಗಿ ಜೀವಮಾನದ ಅನನ್ಯ ಸಮರ್ಪಣೆಯಾಗಿದೆ ಎಂಬುದನ್ನು ನೆನಪಿಸುತ್ತದೆ. ಸಮರ್ಪಣೆ, ಪರಿಶ್ರಮ ಮತ್ತು ನಿಸ್ವಾರ್ಥ ಸೇವೆಯ ಬಗ್ಗೆ ಅವರ ಮೆಚ್ಚುಗೆಯು ನನ್ನನ್ನು ಮತ್ತಷ್ಟು ಉತ್ತೇಜಿಸಿದೆ ಹಾಗೂ ರಾಷ್ಟ್ರಸೇವೆಗೆ ಸಮರ್ಪಿಸಿಕೊಳ್ಳಲು ಪ್ರೇರೇಪಣೆ ನೀಡಿದೆ. ನನ್ನನ್ನು ಹರಸಿ ಆಶೀರ್ವದಿಸಿದ ಮಾನ್ಯ ಪ್ರಧಾನಿಗಳಿಗೆ ಕೃತಜ್ಞನಾಗಿದ್ದೇನೆ. ನನ್ನ ಮೇಲೆ ಅವರು ಇರಿಸಿರುವ ನಂಬಿಕೆಗೆ ನಾನು ಋಣಿಯಾಗಿದ್ದೇನೆ. ಸರ್, ತಮಗೆ ನನ್ನ ಹೃದಯಪೂರ್ವಕ ವಿನಮ್ರ ಧನ್ಯವಾದಗಳು ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ವಿದೇಶ ಪ್ರವಾಸಕ್ಕೆ ತೆರಳುವ ಮುನ್ನ ಸಂಸತ್ ಭವನದ ಕಚೇರಿಯಲ್ಲಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಕುಮಾರಸ್ವಾಮಿ ಅವರು ಆಶೀರ್ವಾದ ಪಡೆದುಕೊಂಡಿದ್ದಾರೆ.

ಮಕ್ಕಳಿಗೆ ಭಗವದ್ಗೀತೆ ಕಲಿಸಿ ಅನ್ನೋದು ಮಹಾನ್ ಅಪರಾಧವೇ?; ಸಿಎಂ, ಸಚಿವ ಮಹದೇವಪ್ಪಗೆ ಕುಮಾರಸ್ವಾಮಿ ಪ್ರಶ್ನೆ

ಹೆಚ್‌ಡಿಕೆ ಜನ್ಮದಿನದ ಅಂಗವಾಗಿ ಜೆಡಿಎಸ್‌ ಕೂಡ ತನ್ನ ಅಧಿಕೃತ ಎಕ್ಸ್‌ ಅಕೌಂಟ್‌ನಲ್ಲಿ ಪೋಸ್ಟ್‌ ಮಾಡಿದ್ದು, ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದೆ. "ಕರ್ನಾಟಕದ ಜನಮೆಚ್ಚಿದ ಮಾಜಿ ಮುಖ್ಯಮಂತ್ರಿಗಳು, ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ಜನ್ಮದಿನ ಹಾರ್ದಿಕ ಶುಭಾಶಯಗಳು" ಎಂದು ತಿಳಿಸಿದೆ.