ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬೆಂಬಲಿಗ ಯುವಕರ ಬಂಧನಕ್ಕೆ ಎಚ್‌ಡಿಕೆ ಕಿಡಿ: ಸ್ಟಿಂಗ್ ತನಿಖೆ ಆರಂಭ ಶಂಕಿತರಿಬ್ಬರ ವಿಚಾರಣೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ವಿಡಿಯೋ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ದಂತೆ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗವು (ಸಿಸಿಬಿ) ದೂರು ದಾಖಲಿಸಿಕೊಂಡು ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ. ಸ್ಟಿಂಗ್ ವಿಡಿಯೋ ವದಂತಿ ಬೆನ್ನ ನ್ಯಾಯಾಲಯದ ಮೊರೆ ಹೋಗಿ ಯಾವುದೇ ಆಕ್ಷೇಪಾರ್ಹ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಪಡೆದಿದ್ದ ಸಿದ್ದರಾಮಯ್ಯ, ಕಿಡಿಗೇಡಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು

ಸ್ಟಿಂಗ್ ತನಿಖೆ ಆರಂಭ ಶಂಕಿತರಿಬ್ಬರ ವಿಚಾರಣೆ

-

Profile
Ashok Nayak Oct 15, 2026 10:24 AM

ಬೆಂಗಳೂರು: ಕುಟುಕು ಕಾರ್ಯಾಚರಣೆಯ ವಿವಾದ ರಾಜ್ಯದಲ್ಲಿ ತೀವ್ರ ಸ್ವರೂಪ ಪಡೆದು ಕೊಂಡಿದ್ದು, ಮತ್ತೆ ಹಲವು ವಿಡಿಯೋಗಳು ಬರಲಿವೆ ಎಂಬ ಮಾತುಗಳು ಸಾರ್ವಜನಿಕವಾಗಿ ಕೇಳಿ ಬರುತ್ತಿದೆ. ಈ ಮಧ್ಯೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದದ ವಿಡಿಯೋ ಹಂಚಿಕೆ ಪ್ರಕರಣದಲ್ಲಿ ಇಬ್ಬರು ಶಂಕಿತರನ್ನು ಸಿಸಿಬಿ ವಶಕ್ಕೆ ಪಡೆದಿದೆ. ಇದರಲ್ಲಿ ನನ್ನ ಜತೆಗಿರುವ ಹುಡುಗರನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಮಧ್ಯೆ ಸಿದ್ದರಾಮಯ್ಯ ಅವರಿಗೆ ಬೆಂಬಲ ವ್ಯಕ್ತಪಡಿಸಿ ಕುಮಾರಸ್ವಾಮಿ ನೀಡಿದ್ದ ಹೇಳಿಕೆಗಳಿಗೆ ಕಾಂಗ್ರೆಸ್ ನಾಯಕರು ವ್ಯಂಗ್ಯವಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ವಿಡಿಯೋ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ದಂತೆ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗವು (ಸಿಸಿಬಿ) ದೂರು ದಾಖಲಿಸಿಕೊಂಡು ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ. ಸ್ಟಿಂಗ್ ವಿಡಿಯೋ ವದಂತಿ ಬೆನ್ನ ನ್ಯಾಯಾಲಯದ ಮೊರೆ ಹೋಗಿ ಯಾವುದೇ ಆಕ್ಷೇಪಾರ್ಹ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಪಡೆದಿದ್ದ ಸಿದ್ದರಾಮಯ್ಯ, ಕಿಡಿಗೇಡಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಜತೆಗೆ ಸುಳ್ಳು ಮಾಹಿತಿ ಹರಡುತ್ತಿದ್ದ ನಿರ್ದಿಷ್ಟ ಸಾಮಾಜಿಕ ಜಾಲತಾಣ ಖಾತೆಗಳ ಐಪಿ ವಿವರಗಳನ್ನೂ ಒದಗಿಸಿದ್ದರು.

ಇದನ್ನೂ ಓದಿ: Karnataka Sting Operation: ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ವಿಡಿಯೊ ಪ್ರಸಾರ ಮಾಡದಂತೆ ಕೋರ್ಟ್‌ನಿಂದ ಪ್ರತಿಬಂಧಕಾದೇಶ

ಈ ಬೆನ್ನಲ್ಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿ ಕೊಂಡ ಇಬ್ಬರು ಶಂಕಿತರನ್ನು ಸಿಸಿಬಿ ವಶಕ್ಕೆ ಪಡೆದು ಪ್ರತ್ಯೇಕ ಸ್ಥಳದಲ್ಲಿಟ್ಟು ವಿಚಾರಣೆ ನಡೆಸು ತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಚ್‌ಡಿಕೆಗೆ ಕಾಂಗ್ರೆಸ್ ತಿರುಗೇಟು ಕುಟುಕು ಕಾರ್ಯಾ ಚರಣೆಯ ಹಿಂದಿರುವ ವರನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕೆಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಯನ್ನು ಡಿಕೆಶಿ ಸಂಪುಟದ ಹಲವು ಸಚಿವರು ಲೇವಡಿ ಮಾಡಿದ್ದಾರೆ.

ಜಲಸಂಪನ್ಮೂಲ ಸಚಿವ ಚಲುವರಾಯಸ್ವಾಮಿ, ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ, ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೇರಿದಂತೆ ಹಲವು ನಾಯಕರು ಈ ವಿಚಾರವಾಗಿ ಪ್ರತಿಕ್ರಿಯಿಸಿ ಬೇಸರ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಚಲು ವರಾಯಸ್ವಾಮಿ, ಕುಟುಕು ಕಾರ್ಯಾಚರಣೆ ದೂರುಗಳನ್ನು ಕುಮಾರಸ್ವಾಮಿಯವರು ಕೇಂದ್ರ ಸರ್ಕಾರದಿಂದಲೇ ಸಿಬಿಐ ತನಿಖೆ ಮಾಡಿಸಲಿ ಎಂದು ಸವಾಲು ಹಾಕಿದ್ದಾರೆ.

image

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೊಗಳನ್ನು ಕಾಂಗ್ರೆಸ್‌ನವರೇ ಸಿದ್ಧಪಡಿಸಿ ದ್ದಾರೆಯೇ ? ತಮ್ಮ ಕುಟುಂಬದ ಸದಸ್ಯರನ್ನು ಸರಿಯಾಗಿ ಬೆಳೆಸುವ ಜವಾಬ್ದಾರಿ ನಿರ್ವಹಿಸದೆ ಇತರರ ಮೇಲೆ ಕುಮಾರಸ್ವಾಮಿ ಆರೋಪ ಹೊರಿಸುವುದು ಸರಿಯಲ್ಲ.

- ಪ್ರಿಯಾಂಕ್ ಖರ್ಗೆ, ಗೃಹ ಸಚಿವ