ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru Rains: ಬೆಂಗಳೂರಿನಲ್ಲಿ ಮುಂದುವರಿದ ಮಳೆಯ ಅಬ್ಬರ; ರಸ್ತೆಯಲ್ಲಿ ಕಾಲು ಜಾರಿ ಬಿದ್ದು ವೃದ್ಧ ಸಾವು

Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮಳೆಗೆ ಮೊದಲ ಬಲಿ; ಕಾಲು ಜಾರಿ ಬಿದ್ದು ವೃದ್ಧ ಸಾವು

-

Prabhakara R Prabhakara R Sep 3, 2025 9:14 PM

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬುಧವಾರವೂ ಮಳೆ ಅಬ್ಬರ ಮುಂದುವರಿದಿದೆ. ಮಧ್ಯಾಹ್ನ ಹಾಗೂ ಸಂಜೆ ನಗರದ ಹಲವೆಡೆ ಧಾರಾಕಾರ ಮಳೆ ಸುರಿದಿದ್ದು, ಪ್ರಮುಖ ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ತೊಂದರೆ ಅನುಭವಿಸಿದರು. ಈ ನಡುವೆ ಕಾಟನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ರಣಸಿಂಗ್‌ಪೇಟೆಯಲ್ಲಿ ಮಳೆಯ ನೀರು, ಕೆಸರು ತುಂಬಿದ್ದ ರಸ್ತೆಯಲ್ಲಿ ಕಾಲು ಜಾರಿ ಬಿದ್ದು ವೃದ್ಧರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವೃದ್ಧನ ಸಾವು ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ಮಾಡುತ್ತಿದ್ದಾರೆ. ಈ ಘಟನೆಗೆ ರಸ್ತೆ ಅವ್ಯವಸ್ಥೆಯೇ ಕಾರಣ, ಈ ಸಾವಿಗೆ ಯಾರು ಹೊಣೆ ಎಂದು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಇನ್ನು ನಗರದ ವಿವಿಧೆಡೆ ಬಿರುಸಿನ ಮಳೆಯಿಂದ ಭಾರಿ ಸಂಚಾರ ದಟ್ಟಣೆ ಉಂಟಾಗಿತ್ತು. ನಾಗಾರ್ಜುನ ಜಂಕ್ಷನ್ ಕಡೆಯಿಂದ ಜಿಡಿ ಮರ ಜಂಕ್ಷನ್ ಕಡೆಗೆ, ರೂಪೇನ ಅಗ್ರಹಾರ ಕಡೆಯಿಂದ ಬೊಮ್ಮನಹಳ್ಳಿ ಕಡೆಗೆ, ಬೆಳ್ಳಂದೂರು ಜಂಕ್ಷನ್ ಕಡೆಯಿಂದ ಎಚ್‌ಎಸ್‌ಆರ್ ಲೇಔಟ್ ಕಡೆಗೆ, ಅನಿಲ್ ಕುಂಬ್ಳೆ ವೃತ್ತದ ಬಳಿ ಮಳೆ ನೀರು ನಿಂತಿದ್ದರಿಂದ ಬಿಆರ್‌ವಿ ಜಂಕ್ಷನ್‌ ಕಡೆಗೆ ನಿಧಾನಗತಿಯ ಸಂಚಾರವಿತ್ತು.

Bengaluru rain (50)

ಕ್ವೀನ್ಸ್ ಜಂಕ್ಷನ್ ಕಡೆಯಿಂದ ಅನಿಲ್ ಕುಂಬ್ಳೆ ವೃತ್ತದ ಕಡೆಗೆ, ಕಂಟೋನ್ಮೆಂಟ್ ರೈಲ್ವೆ ಅಂಡರ್‌ಪಾಸ್ ಕಡೆಯಿಂದ ಜಯಮಹಲ್ ರಸ್ತೆ ಕಡೆಗೆ, ರೈತರ ಸಂತೆ ಅಂಡರ್‌ಪಾಸ್ ಕಡೆಯಿಂದ ನಗರದ ಕಡೆಗೆ, ಅರಮನೆ ಕ್ರಾಸ್ ಜಂಕ್ಷನ್ ಕಡೆಯಿಂದ ಚಕ್ರವರ್ತಿ ಲೇಔಟ್ ಕಡೆಗೆ, ಆರ್‌ಪಿ ರಸ್ತೆ ಕಡೆಯಿಂದ ಪಿಜಿ ಹಳ್ಳಿ ಕಡೆಗೆ, ಬಿ.ಇ.ಎಲ್. ಯು-ಟರ್ನ್ ಕಡೆಯಿಂದ ಹೆಬ್ಬಾಳ ಕಡೆಗೆ, ಹೆಬ್ಬಾಳ ಡೌನ್‌ರ‍್ಯಾಂಪ್ ಕಡೆಯಿಂದ ವಿಮಾನ ನಿಲ್ದಾಣದ ಕಡೆಗೆ, ದೇವಿನಗರ ಕಡೆಯಿಂದ ಕುವೆಂಪು ವೃತ್ತದ ಕಡೆಗೆ, ಬಿಳೇಕಹಳ್ಳಿ ಕಡೆಯಿಂದ HSBC ಜಂಕ್ಷನ್ ಕಡೆಗೆ, ಪಿಇಎಸ್ ಐಟಿ ಕಾಲೇಜು, ಎಲೆಕ್ಟ್ರಾನಿಕ್ ಸಿಟಿ ಕಡೆಯಿಂದ ಹುಸ್ಕೂರು ಕಡೆಗೆ, ಹುಳಿಮಾವು ಗೇಟ್ ಕಡೆಯಿಂದ ಬನ್ನೇರುಘಟ್ಟ ಮತ್ತು ನಗರದ ಕಡೆಗೆ ರಸ್ತಯಲ್ಲಿ ಮಳೆ ನೀರು ನಿಂತಿದ್ದರಿಂದ ಟ್ರಾಫಿಕ್‌ ಜಾಮ್‌ ಆಗಿ ಸವಾರರು ಪರದಾಡಿದರು.

Rain News - 2025-09-03T210912.589

ಈ ಸುದ್ದಿಯನ್ನೂ ಓದಿ | Health Tips: ಕೂದಲಿನ ಆರೈಕೆಯಲ್ಲಿ ಮೆಂತೆಯ ಬಳಕೆ ಹೇಗೆ?

ರಾಜಧಾನಿಯಲ್ಲಿ ಇನ್ನೆರಡು ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27°C ಮತ್ತು 20°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಸೆ.4ರಂದು ಕರಾವಳಿ ಜಿಲ್ಲೆಗಳು ಹೊರತುಪಡಿಸಿ ರಾಜ್ಯದ ಉಳಿದೆಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದ್ದು, ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.