ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Bengaluru Rains: ಬೆಂಗಳೂರಿನಲ್ಲಿ ಭಾರಿ ಮಳೆ ಹಿನ್ನೆಲೆ ವಿಮಾನ ಸಂಚಾರ ವ್ಯತ್ಯಯ; ರಾಜ್ಯಪಾಲರಿದ್ದ ವಿಮಾನ ಮಂಗಳೂರಿಗೆ ವಾಪಸ್!

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34 ° C ಮತ್ತು 24 ° C ಇರುವ ಸಾಧ್ಯತೆ ಹೆಚ್ಚು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಭಾರಿ ಮಳೆ; ರಾಜ್ಯಪಾಲರಿದ್ದ ವಿಮಾನ ಮಂಗಳೂರಿಗೆ ವಾಪಸ್!

ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌. -

Prabhakara R
Prabhakara R Apr 10, 2026 11:37 PM

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ವರುಣ (Bengaluru Rains) ಅಬ್ಬರಿಸಿದ್ದಾನೆ. ಭಾರಿ ಮಳೆಯಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿರುವುದು ಮಾತ್ರವಲ್ಲದೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಸಂಚಾರದಲ್ಲೂ ವ್ಯತ್ಯಯ ಉಂಟಾಗಿದೆ. ರನ್‌ವೇ ಮೇಲೆ ಲ್ಯಾಂಡ್ ಆಗಬೇಕಿದ್ದ ನಾಲ್ಕು ವಿಮಾನಗಳಳು ವಾಪಸ್‌ ತೆರಳಿವೆ.

ಇನ್ನು ಮಂಗಳೂರಿನಿಂದ ಬಂದ ಒಂದು ವಿಮಾನ, ಚೆನ್ನೈಯಿಂದ ಬಂದ ಎರಡು ವಿಮಾನಗಳು ಹಾಗೂ ಮುಂಬೈಯಿಂದ ಬಂದ ಒಂದು ವಿಮಾನ ಲ್ಯಾಂಡ್ ಆಗಲು ಸಾಧ್ಯವಾಗದೆ ಮತ್ತೆ ತಮ್ಮ ತಮ್ಮ ನಗರಗಳಿಗೆ ವಾಪಸ್ ಹೋಗಿವೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ವಿಶೇಷವಾಗಿ ಮಂಗಳೂರಿನಿಂದ 4.30ಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಗಮಿಸುತ್ತಿದ್ದ ವಿಮಾನವೂ ಲ್ಯಾಂಡ್ ಆಗಲು ಸಾಧ್ಯವಾಗದೆ ಹಿಂತಿರುಗಿರುವ ಬಗ್ಗೆ ವರದಿಯಾಗಿದೆ.

ಬೆಂಗಳೂರಿನ ಹಲವೆಡೆ ಮಳೆ

ಬೆಂಗಳೂರಿನ ಹಲವೆಡೆ ಶುಕ್ರವಾರ ಮಳೆಯಾಗಿದೆ. ಮಲ್ಲೇಶ್ವರಂ, ಗಾಂಧಿನಗರ, ವಿಧಾನಸೌಧ, ಮೆಜೆಸ್ಟಿಕ್, ಯಶವಂತಪುರ, ವಸಂತನಗರ ಸೇರಿ ನಗರದ ವಿವಿಧ ಭಾಗಗಳಲ್ಲಿ ತುಂತುರು ಮಳೆಯಾಗಿದೆ. ಕೆಲವೆಡೆ ಭಾರೀ ಮಳೆಯೂ ಸುರಿದಿದ್ದು, ರಸ್ತೆಗಳ ಮೇಲೆ ನೀರು ನಿಂತು ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದೆ.

ಕರಾವಳಿ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಹೆಚ್ಚಿರಲಿದೆ. ಹವಾಮಾನವು ಸಾಮಾನ್ಯವಾಗಿ ಒಣಗಿದ್ದರೂ, ಸೆಕೆಯ ಅನುಭವ ಹೆಚ್ಚಾಗಿರಲಿದೆ. ಹೀಗಾಗಿ ಏಪ್ರಿಲ್​​ 10ರಿಂದ 12ರ ವರೆಗೆ ಈ ಭಾಗದಲ್ಲಿ ಐಎಂಡಿ ಯೆಲ್ಲೋ ಅಲರ್ಟ್​​ ಘೋಷಿಸಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದೆ.

ದಕ್ಷಿಣ ಒಳನಾಡು ಭಾಗದ ಬೆಂಗಳೂರು, ಮೈಸೂರು, ಕೊಡಗು ಮತ್ತು ಚಾಮರಾಜನಗರದ ಕೆಲವು ಭಾಗಗಳಲ್ಲಿ ಭಾಗಶಃ ಮೋಡದಿಂದ ಆಕಾಶ ಕೂಡಿರಲಿದ್ದು, ಸಂಜೆ ವೇಳೆಗೆ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.