ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Bengaluru Rain: ಬೆಂಗಳೂರಿನ ವಿವಿಧೆಡೆ ಅಬ್ಬರಿಸಿದ ಮಳೆ; ಸಂಚಾರ ದಟ್ಟಣೆಯಿಂದ ವಾಹನ ಸವಾರರ ಪರದಾಟ!

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ/ರಾತ್ರಿಯ ವೇಳೆಗೆ ಕೆಲವು ಪ್ರದೇಶಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆ; ಹಲವೆಡೆ ಭಾರಿ ಸಂಚಾರ ದಟ್ಟಣೆ

-

Prabhakara R
Prabhakara R Sep 4, 2026 10:42 PM

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಹಲವೆಡೆ ಶುಕ್ರವಾರ ರಾತ್ರಿ ಮಳೆ (Bengaluru Rain) ಅಬ್ಬರಿಸಿದೆ. ಇದರಿಂದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಡಿದರು.

ರಾಜಾಜಿನಗರ, ರಾಜರಾಜೇಶ್ವರಿ ನಗರ ಸೇರಿ ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಕೆಲಸ ಕಾರ್ಯ ಮುಗಿಸಿ ರಾತ್ರಿ ಮನೆಗಳಿಗೆ ತೆರಳುತ್ತಿದ್ದವರು ಮಳೆಯಲ್ಲಿ ಸಿಲುಕಿ ಹೈರಣಾದರು.

ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ/ರಾತ್ರಿಯ ವೇಳೆಗೆ ಕೆಲವು ಪ್ರದೇಶಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30°C ಮತ್ತು 20°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶನಿವಾರವೂ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ನಾಳೆ (ಸೆ.5) ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಅದೇ ರೀತಿ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.