ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರಾವಳಿಯಲ್ಲಿ ಭಾರೀ ಮಳೆ ಎಚ್ಚರಿಕೆ; ಕೊಡಗು ಸೇರಿ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ರಾಜ್ಯದ ಹಲವೆಡೆ ಹವಾಮಾನದಲ್ಲಿ ಭಾರೀ ಬದಲಾವಣೆ ಉಂಟಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆ 5 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಸೂಚಿಸಿದೆ.

ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದ ಹಲವೆಡೆ ಹವಾಮಾನದಲ್ಲಿ ಭಾರೀ ಬದಲಾವಣೆ ಉಂಟಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇಂದೂ (Karnataka Weather Update) ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆ 5 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ಭಾರಿ ಗುಡುಗು ಮತ್ತು ಮಿಂಚಿನ ಆರ್ಭಟವಿರಲಿದೆ. ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಸುಮಾರು 5 ಮಿ.ಮೀ ನಿಂದ 15 ಮಿ.ಮೀ ವರೆಗೆ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.

ದಕ್ಷಿಣ ಕನ್ನಡ , ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯದಲ್ಲಿ ಗುಡಗು ಸಹಿತ ಸಾಧಾರಣ ಮಳೆಯಾಗಬಹುದೆಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಕೆಲ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಗುವ ಸಂಭವವಿದ್ದು, ಚಾಮರಾಜನಗರ, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ರಾತ್ರಿ ಸಮಯದಲ್ಲಿ 30 ರಿಂದ 40 kmph ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ತಿಳಿಸಿದೆ. ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರಕ್ಕೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ.

ಇಂದಿನ ಹವಾಮಾನ; ಮೈಸೂರು, ಚಾಮರಾಜನಗರ ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ

ಬಂಗಾಳ ಕೊಲ್ಲಿಯ ನೈಋತ್ಯ ಭಾಗದಲ್ಲಿ ಅಂದರೆ ತಮಿಳುನಾಡು ಮತ್ತು ಶ್ರೀಲಂಕಾ ಕರಾವಳಿಯ ಹತ್ತಿರ ವಾತಾವರಣದ ಮೇಲ್ಪದರದಲ್ಲಿ ಒಂದು ಚಂಡಮಾರುತದ ಮಾದರಿಯ ಸುಳಿಗಾಳಿ ಉಂಟಾಗಿದೆ. ಈ ಸುಳಿಗಾಳಿಯಿಂದಾಗಿ ಒಂದು ಸಣ್ಣ ಮಟ್ಟದ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿದೆ. ಇನ್ನು ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ.

Vishakha Bhat Heggar

View all posts by this author