Hebbal Flyover: ನಾಳೆ ಹೆಬ್ಬಾಳ ಫ್ಲೈಓವರ್ ಉದ್ಘಾಟನೆ; ಭರದಿಂದ ಸಾಗಿದ ಸಿದ್ಧತೆ
ಹೆಬ್ಬಾಳದ ಹೊಸ ಮೇಲ್ಸೇತುವೆ ರ್ಯಾಂಪ್ ಸೋಮವಾರದಿಂದ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ಮುಕ್ತವಾಗಲಿದೆ. ಈಗಾಗಲೇ 2 ದಿನಗಳ ಟ್ರಯಲ್ ರನ್ ನಡೆಸಲಾಗಿದ್ದು, ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೆಬ್ಬಾಳದ ಹೊಸ ಮೇಲ್ಸೇತುವೆ ರ್ಯಾಂಪ್ ಅನ್ನು ಉದ್ಘಾಟಿಸಲಿದ್ದಾರೆ.


ಬೆಂಗಳೂರು: ಹೆಬ್ಬಾಳದ ಹೊಸ (Hebbal Flyover) ಮೇಲ್ಸೇತುವೆ ರ್ಯಾಂಪ್ ಸೋಮವಾರದಿಂದ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ಮುಕ್ತವಾಗಲಿದೆ. ಈಗಾಗಲೇ 2 ದಿನಗಳ ಟ್ರಯಲ್ ರನ್ ನಡೆಸಲಾಗಿದ್ದು, ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೆಬ್ಬಾಳದ ಹೊಸ ಮೇಲ್ಸೇತುವೆ ರ್ಯಾಂಪ್ ಅನ್ನು ಉದ್ಘಾಟಿಸಲಿದ್ದಾರೆ. 700 ಮೀಟರ್ ಉದ್ದದ ಹೆಬ್ಬಾಳ ಪ್ಲೈ ಓವರ್ ಸುಮಾರು 80 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದೆ. ಈ ಫ್ಲೈಓವರ್ ಕೆ.ಆರ್ ಪುರಂ (KR Puram) ಕಡೆಯಿಂದ ಮೇಖ್ರೀ ಸರ್ಕಲ್‌ವರೆಗೆ ನಿರ್ಮಾಣ ಮಾಡಲಾಗಿದೆ.
ಕಾಮಗಾರಿಯು 2023ರಲ್ಲಿ ಆರಂಭ ಆಗಿದ್ದು, ಒಂದೂವರೆ ವರ್ಷಗಳ ಬಳಿಕ ಫ್ಲೈಓವರ್ ಕಾರ್ಯ ಪೂರ್ಣಗೊಂಡಿದೆ. ನಾಳೆ ಬೆಳಗ್ಗೆ 9 ಗಂಟೆಗೆ ಫೈಓವರ್ ಉದ್ಘಾಟನೆ ಆಗಲಿದ್ದು, ಇದೀಗ ಉದ್ಘಾಟನೆಗೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಸಿಬ್ಬಂದಿ ಫ್ಲೈಓವರ್ ರ‍್ಯಾಂಪ್‌ಗೆ ಹೂವುಗಳ ಸರಮಾಲೆ ಹಾಕಿ ಸಿದ್ಧತೆ ಮಾಡಲಾಗಿದೆ. ಹೆಬ್ಬಾಳದ ಶೇಕಡಾ 30ರಷ್ಟು ಟ್ರಾಫಿಕ್ ದಟ್ಟಣೆ ನಿವಾರಣೆಯಾಗುವ ನಿರೀಕ್ಷೆ ಇದೆ. ಆದರೆ ಮೆಖ್ರಿ ಸರ್ಕಲ್‌ನಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗಬಹುದು ಹೇಳಲಾಗಿದೆ.
ಮೇಖ್ರಿ ಸರ್ಕಲ್ ರಸ್ತೆಯನ್ನು ವಿಸ್ತರಿಸಲು ಬಿಬಿಎಂಪಿ ಈಗಾಗಲೇ ರಕ್ಷಣಾ ಇಲಾಖೆಗೆ ಸೇರಿದ ಜಾಗವನ್ನು ಗುರುತಿಸಿದೆ. ರಸ್ತೆ ವಿಸ್ತರಣೆಯಾದರೆ, ಆರ್.ಟಿ.ನಗರ, ಜಯಮಹಲ್ ಮತ್ತು ವಸಂತ ನಗರದ ಕಡೆಗೆ ಹೋಗುವ ವಾಹನಗಳು ಮೇಖ್ರಿ ಸರ್ಕಲ್‌ನಲ್ಲಿ ಫ್ರೀ ಲೆಫ್ಟ್ ತೆಗೆದುಕೊಳ್ಳಬಹುದು. ಇದರಿಂದ ಟ್ರಾಫಿಕ್ ಕಡಿಮೆಯಾಗುತ್ತದೆ. ಏರ್‌ಪೋರ್ಟ್, ನಾಗವಾರ (ಹೊಸ ರಾಂಪ್ ಮೂಲಕ) ಮತ್ತು ಭೂಪಸಂದ್ರದಿಂದ ಬರುವ ಟ್ರಾಫಿಕ್ ಬ್ಯಾಪ್ಟಿಸ್ಟ್ ಆಸ್ಪತ್ರೆ ಬಳಿ ಸೇರುವುದರಿಂದ ಅಲ್ಲಿಯೂ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ಸುದ್ದಿಯನ್ನೂ ಓದಿ: ಬೆಂಗಳೂರಿನ ಮಾಹೆಯಲ್ಲಿ ‘ನಶೆ ಮುಕ್ತ ಕರ್ನಾಟಕ’ ಮಹತ್ವದ ಜಾಗೃತಿ ಅಭಿಯಾನ ಉದ್ಘಾಟನೆ
ಹೆಬ್ಬಾಳ ಜಂಕ್ಷನ್‌ನಲ್ಲಿ ರಾಂಪ್ ನಿರ್ಮಾಣದಿಂದ ಟ್ರಾಫಿಕ್ ಕಡಿಮೆಯಾಗಲಿದೆ. ಆದರೆ, ಮೆಖ್ರಿ ಸರ್ಕಲ್‌ನಲ್ಲಿ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆಯಿದೆ ಎಂದು ಸಂಚಾರ ಪೊಲೀಸರು ಹೇಳಿದ್ದಾರೆ. “ರಾಂಪ್ ತೆರೆಯುವುದರಿಂದ ವಾಹನಗಳು ಹೆಬ್ಬಾಳ ಜಂಕ್ಷನ್ ಅನ್ನು ಸುಲಭವಾಗಿ ದಾಟಲು ಸಹಾಯವಾಗುತ್ತದೆ. ಆದರೆ, ಟ್ರಯಲ್ ರನ್ ಸಮಯದಲ್ಲಿ, ಮೇಖ್ರಿ ಸರ್ಕಲ್ ಅಂಡರ್‌ಪಾಸ್ ಬಳಿ ಟ್ರಾಫಿಕ್ ಜಾಮ್ ಉಂಟಾಗುವುದನ್ನು ನಾವು ಗಮನಿಸಿದ್ದೇವೆ. ಇದು ಇತರ ರಸ್ತೆಗಳ ಮೇಲೆ ಪರಿಣಾಮ ಬೀರಿತು” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.