ಮಂಗಳೂರು: ಯುಕೆಜಿ (UKG) ವಿದ್ಯಾರ್ಥಿನಿಗೆ ಬೆತ್ತದಿಂದ ಹೊಡೆದ ಪ್ರಕರಣವೊಂದರಲ್ಲಿ ಶಿಕ್ಷಕಿ ವಿರುದ್ಧದ ಅಧೀನ ನ್ಯಾಯಾಲಯದ ವಿಚಾರಣೆಗೆ ತಡೆ ನೀಡಲು ಹೈಕೋರ್ಟ್ (High Court) ನಿರಾಕರಿಸಿದೆ. ಅಲ್ಲದೆ, ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವುದನ್ನು ಸಹಿಸುವುದಿಲ್ಲ ಮೌಖಿಕವಾಗಿ ಹೇಳಿದೆ.
ಮಂಗಳೂರಿನ 2ನೇ ಜೆಎಂಎಫ್‌ಸಿ ಕೋರ್ಟ್‌ನಲ್ಲಿರುವ ವಿಚಾರಣೆ ರದ್ದು ಕೋರಿ ಸುರತ್ಕಲ್‌ನ ಹೋಲಿ ಫ್ಯಾಮಿಲಿ ಶಾಲೆಯ ಶಿಕ್ಷಕಿ ಆಶಾ ಕ್ರಾಸ್ತಾ ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ಅರ್ಜಿದಾರರ ಪರ ವಕೀಲರಿಗೆ ನ್ಯಾಯಮೂರ್ತಿಗಳು, ‘ಶಿಕ್ಷಕಿ ಏಕೆ ಮಗುವನ್ನು ಹೊಡೆದರು’ ಎಂದು ಪ್ರಶ್ನಿಸಿದರು. ಅದಕ್ಕೆ ವಕೀಲರು, ‘ನಾವಲ್ಲ’ ಎಂದು ಹೇಳುತ್ತಿದ್ದಂತೆಯೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಮೂರ್ತಿ, ‘ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವ ಅಗತ್ಯವಿಲ್ಲ. ಇಂತಹ ನಡೆಯನ್ನು ನ್ಯಾಯಾಲಯ ಸಹಿಸುವುದಿಲ್ಲ’ ಎಂದು ಕಟುವಾಗಿ ಹೇಳಿದರು.
ಅಹಮದಾಬಾದ್ ಸರಣಿ ಸ್ಫೋಟ ಪ್ರಕರಣ; 38 ಮಂದಿಗೆ ಮರಣದಂಡನೆ, 11 ಜನರಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ ಹೈಕೋರ್ಟ್
ಏನಿದು ಪ್ರಕರಣ?
ಮಗುವಿನ ತಾಯಿ 2026ರ ಜ.31ರಂದು ಸುರತ್ಕಲ್ ಠಾಣೆಗೆ ದೂರು ನೀಡಿ, ಶಿಕ್ಷಕಿ ಆಶಾ ಕ್ರಾಸ್ತಾ ತನ್ನ 6 ವರ್ಷದ ಮಗಳಿಗೆ ತರಗತಿ ನಡೆಯುತ್ತಿದ್ದ ವೇಳೆಯಲ್ಲಿ ಹೊಡೆದಿದ್ದಾರೆ ಎಂದು ಆರೋಪಿಸಿದ್ದರು. ಈ ಸಂಬಂಧ ಶಾಲೆಯ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ಸಂಬಂಧಿಸಿದವರ ಜತೆ ಮಾತುಕತೆ ನಡೆಸಿ ಪ್ರಕರಣ ಮುಕ್ತಾಯಗೊಳಿಸಿದ್ದರು. ಮಗುವಿನ ತಾಯಿ, 2026ರ ಜ.30ರಂದು ‘ನನ್ನ ಮಗಳಿಗೆ ಶಿಕ್ಷಕಿ ಪುನಃ ಬೆತ್ತದಿಂದ ಹಲ್ಲೆ ಮಾಡಿದ್ದಾರೆ. ಹಾಗಾಗಿ, ಆಶಾ ಕ್ರಾಸ್ತಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಕೋರಿದ್ದರು.