ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ ಧರಿಸಲು ಅವಕಾಶ; ಸಚಿವ ಮಧು ಬಂಗಾರಪ್ಪ ಘೋಷಣೆ

Hijab Row: ರಾಜ್ಯದಲ್ಲಿ ಶಾಲಾ ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅನುಮತಿ ಇರಲಿದೆ. ಜತೆಗೆ ಎಲ್ಲಾ ಎಲ್ಲಾ ಧರ್ಮಗಳ ಧಾರ್ಮಿಕ ವಸ್ತುಗಳಿಗೂ ಅವಕಾಶ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ ಧರಿಸಲು ಅವಕಾಶ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar May 13, 2026 7:43 PM

ಬೆಂಗಳೂರು: ರಾಜ್ಯದಲ್ಲಿ ಶಾಲಾ ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ (Hijab) ಧರಿಸಲು ಅನುಮತಿ ಇರಲಿದೆ. ಜತೆಗೆ ಎಲ್ಲಾ ಎಲ್ಲಾ ಧರ್ಮಗಳ ಧಾರ್ಮಿಕ ವಸ್ತುಗಳಿಗೂ ಅವಕಾಶ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Karnataka Government) ತಿಳಿಸಿದ್ದಾರೆ. ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಸಚಿವ ಮಧು ಬಂಗಾರಪ್ಪ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಈ ಹಿಂದಿನ ಸರ್ಕಾರವು ಜಾರಿಗೊಳಿಸಿದ್ದ ಶಾಲಾ ಕಾಲೇಜುಗಳಲ್ಲಿ ಹಿಬಾಜ್ ನಿಷೇಧ ಆದೇಶವನ್ನು ಮುಂದಿನ ಶೈಕ್ಷಣಿಕ ವರ್ಷದಿಂದಲೇ ತೆರವು ಮಾಡಲಾಗವುದು. ಮುಸ್ಲಿಂ ಸಮುದಾಯದ ಬೇಡಿಕೆಯಂತೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

2022ರಲ್ಲಿ ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿತು. ಇದರ ಬೆನ್ನಲ್ಲೇ, ಫೆಬ್ರವರಿ 5, 2022 ರಂದು ಅಂದಿನ ಬಿಜೆಪಿ ಸರ್ಕಾರ ಕರ್ನಾಟಕ ಶಿಕ್ಷಣ ಕಾಯ್ದೆ 1983ರ ಅಡಿಯಲ್ಲಿ ಆದೇಶವೊಂದನ್ನು ಹೊರಡಿಸಿತು. ಶಾಲಾ-ಕಾಲೇಜುಗಳಲ್ಲಿ ಆಡಳಿತ ಮಂಡಳಿಗಳು ನಿಗದಿಪಡಿಸಿದ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸಬೇಕು ಮತ್ತು ಸಮಾನತೆ, ಸಮಗ್ರತೆ ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಧಾರ್ಮಿಕ ಉಡುಪುಗಳನ್ನು (ಹಿಜಾಬ್ ಅಥವಾ ಕೇಸರಿ ಶಾಲು) ಧರಿಸಿ ತರಗತಿಯೊಳಗೆ ಬರುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿತ್ತು.

SSLC Exam Result 2026: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ 45,415 ವಿದ್ಯಾರ್ಥಿಗಳು ಫೇಲ್: ಸಚಿವ ಮಧು ಬಂಗಾರಪ್ಪ

ಯಾವುದೇ ವಿದ್ಯಾರ್ಥಿನಿಯು ಹಿಜಾಬ್ ಧರಿಸಿದ್ದಾಳೆ ಎಂಬ ಕಾರಣಕ್ಕೆ ಆಕೆಗೆ ಶಿಕ್ಷಣವನ್ನು ನಿರಾಕರಿಸುವಂತಿಲ್ಲ. ತರಗತಿ ಪ್ರವೇಶ ಅಥವಾ ಪರೀಕ್ಷಾ ಕೊಠಡಿಗಳಿಗೆ ಇಂತಹ ಸಂಪ್ರದಾಯಿಕ ಸಂಕೇತಗಳೊಂದಿಗೆ ಪ್ರವೇಶವನ್ನು ನಿರ್ಬಂಧಿಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಹೊಸ ಮಾರ್ಗಸೂಚಿಗಳು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲಾ-ಕಾಲೇಜುಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಅನ್ವಯವಾಗಲಿವೆ. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳು (SDMC) ಈ ಆದೇಶವನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಸರ್ಕಾರದ ಹೊಸ ಆದೇಶದ ಪ್ರಕಾರ, ಶಾಲಾ-ಕಾಲೇಜುಗಳು ನಿಗದಿಪಡಿಸಿದ ಸಮವಸ್ತ್ರಕ್ಕೆ ಪೂರಕವಾಗಿ ಮತ್ತು ಅದಕ್ಕೆ ಹೊಂದಿಕೊಳ್ಳುವಂತೆ ಸೀಮಿತ ಸಾಂಪ್ರದಾಯಿಕ ಸಂಕೇತಗಳನ್ನು ಧರಿಸಲು ಅನುಮತಿ ನೀಡಲಾಗಿದೆ.